ಪೇಜಾವರ ಮಠ ಮುಂಬಯಿ ಶಾಖೆ:ಎಸಿ ಸಭಾಗೃಹ ಉದ್ಘಾಟನೆ

Team Udayavani, Sep 22, 2017, 12:28 PM IST

43.jpg

ಮುಂಬಯಿ: ಮುಂದಿನ ಉಡುಪಿ ಪರ್ಯಾಯ ಪೀಠವನ್ನು ಅಲಂಕರಿಸಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರ ಪರ್ಯಾಯ ಸಂಚಾರದ ಅಂಗವಾಗಿ ಸೆ. 21ರಂದು ಮುಂಬಯಿಗೆ ಆಗಮಿಸಿದ್ದು,  ಶ್ರೀಗಳನ್ನು  ಭವ್ಯ ಮೆರವಣಿಗೆಯಲ್ಲಿ ಪೇಜಾವರ ಮಠಕ್ಕೆ ಬರಮಾಡಿಕೊಳ್ಳಲಾಯಿತು.

ಗುರುವಾರ ಸಂಜೆ ಶ್ರೀಗಳು  ಸಾಂತಾಕ್ರೂಜ್‌ ಪೂರ್ವಕ್ಕೆ ಆಗಮಿಸುತ್ತಿದ್ದಂತೆಯೇ ಪರ್ಯಾಯ ಸಮಿತಿ ಮುಂಬಯಿ ಗೌರವಾ ಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು, ಎಂ. ನರೇಂದ್ರ ರಾವ್‌, ಗೌರವಾಧ್ಯಕ್ಷ ಡಾ| ಎಂ. ಎಸ್‌. ಆಳ್ವ ಮತ್ತು ಪದಾಧಿಕಾರಿಗಳು, ಪೇಜಾವರ ಮಠದ ಪ್ರಬಂಧಕ ರಾಮದಾಸ ಉಪಾಧ್ಯಾಯ ರೆಂಜಾಳ ಅವರು, ನೂರಾರು ಸಂಖ್ಯೆಯ ಭಕ್ತಾಭಿಮಾನಿಗಳ ಸಮ್ಮುಖದಲ್ಲಿ  ಪುಷ್ಪಗೌರವದೊಂದಿಗೆ ಬರಮಾಡಿಕೊಂಡು ಸ್ವಾಗತಿಸಿದರು. ಪಲಿಮಾರು ಶ್ರೀಗಳನ್ನು  ಬಿಲ್ಲವರ ಭವನ‌ದಿಂದ ಅಶೋಕ್‌ ಕೊಡ್ಯಡ್ಕ ತಂಡದ ಗೊಂಬೆಗಳ ವೈವಿಧ್ಯಮಯ  ನೃತ್ಯ, ರಾಮದಾಸ್‌ ಮುತ್ತಪ್ಪ ಬಳಗ, ದಿನೇಶ್‌ ಕೋಟ್ಯಾನ್‌ ತಂಡಗಳ ಚೆಂಡೆವಾದ್ಯಗಳ ನಿನಾದದೊಂದಿಗೆ ಭವ್ಯ ಮೆರವಣಿಗೆಯ ಮೂಲಕ ಪ್ರಭಾತ್‌ ಕಾಲನಿ ಅಲ್ಲಿನ ಪೇಜಾ ವರ ಮಠಕ್ಕೆ ಬರಮಾಡಿ ಕೊಳ್ಳಲಾಯಿತು.

ಇದೇ ಸಂದರ್ಭದಲ್ಲಿ  ಉಡುಪಿ ಪೇಜಾವರ ಮಠ ಮುಂಬಯಿ ಶಾಖೆಯ ನವೀಕೃತ ಹವಾನಿಯಂತ್ರಿತ ಸಭಾಗೃಹವನ್ನು ಶ್ರೀಗಳು ಉದ್ಘಾಟಿಸಿದರು. ಸಮಾರಂಭದ ಪ್ರಧಾನ ಅಭ್ಯಾಗತರಾಗಿ ಇನಾ#†ಸ್ಟ್ರಕ್ಚರ್‌ ಫೈನಾನ್ಸ್‌ ಐಡಿಎಫ್‌ಸಿ ಆಡಳಿತ ನಿರ್ದೇಶಕ ಸದಾಶಿವ ರಾವ್‌, ಕರ್ಣಾಟಕ ಬ್ಯಾಂಕ್‌ನ ಸಹಾಯಕ ಪ್ರಧಾನ ಪ್ರಬಂಧಕ ಪಿ. ಎಚ್‌. ರಾಜ್‌ಕುಮಾರ್‌, ಡಾ| ಸುರೇಶ್‌ ಎಸ್‌. ರಾವ್‌ ಕಟೀಲು, ಎಂ. ನರೇಂದ್ರ ರಾವ್‌, ಗೌರವಾಧ್ಯಕ್ಷ ಡಾ| ಎಂ.ಎಸ್‌. ಆಳ್ವ,  ಗೌರವ ಕಾರ್ಯದರ್ಶಿ ತೋನ್ಸೆ ಜಯಕೃಷ್ಣ  ಎ. ಶೆಟ್ಟಿ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ| ಎ. ಎಸ್‌. ರಾವ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಲಿಮಾರು ಶ್ರೀಗಳು ಆಶೀರ್ವದಿಸಿ ಮಾತನಾಡಿ, ಕೃಷ್ಣನನ್ನು ನಾವು ಆರಾಧಿಸಿದರೆ ನಾವು ನೆನೆದ ಕೆಲಸದಲ್ಲಿ ಜಯವಾಗುತ್ತದೆ. ಕೃಷ್ಣನಿಗೆ ಬೇಕಾಗಿದ್ದು ನಮ್ಮ ಮನಸ್ಸು. ಭಗವಂತನಿಗೆ ನಮ್ಮ ಮನಸ್ಸನ್ನು ನೀಡೋಣ. ಪರ್ಯಾಯ ಕಾರ್ಯಕ್ರಮಕ್ಕೆ ನಿಮ್ಮೆಲ್ಲರ ಸಹಾಯ ಅಗತ್ಯ. ಇಲ್ಲಿಯ ಸಭಾ ಭವನವನ್ನು ಬಹಳ ಸುಂದರವಾಗಿ ನಿರ್ಮಿಸಿದ್ದಾರೆ. ಇನ್ನು ಮುಂದೆ ನಿಮ್ಮೆಲ್ಲರ ಶುಭ ಕಾರ್ಯಗಳನ್ನು ಇಲ್ಲಿಯೆ ಮಾಡಿರಿ. ನಿಮಗೆಲ್ಲರಿಗೂ ಕೃಷ್ಣನ  ಆಶೀರ್ವಾದ ಇರಲಿ ಎಂದರು.

ಅತಿಥಿ-ಗಣ್ಯರು ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ  ಪೂರ್ಣ ಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಆಡಳಿತ ವಿಶ್ವಸ್ತ ಗೌರವ ಕಾರ್ಯದರ್ಶಿ ಬಿ. ಆರ್‌. ಗುರುಮೂರ್ತಿ, ಗೌರವ ಕೋಶಾಧಿಕಾರಿ ಅವಿನಾಶ್‌ ಶಾಸ್ತ್ರಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಕೃಷ್ಣ ಯಾದವ ಆಚಾರ್ಯ, ಕೈರಬೆಟ್ಟು ವಿಶ್ವನಾಥ್‌ ಭಟ್‌, ಧರ್ಮಪಾಲ್‌ ಯು. ದೇವಾಡಿಗ, ನಿತ್ಯಾನಂದ ಡಿ. ಕೋಟ್ಯಾನ್‌, ಧರ್ಮಪಾಲ್‌ ಜಿ. ಅಂಚನ್‌, ದೇವೇಂದ್ರ ಬಂಗೇರ, ಕಮಲಾಕ್ಷ ಜಿ. ಸರಾಫ್‌, ಉಲ್ಲಾಸ್‌ ಡಿ. ಕಾಮತ್‌, ಡಾ| ಎಸ್‌. ಕೆ. ಭವಾನಿ, ನಿಟ್ಟೆ ದಾಮೋದರ ಆಚಾರ್ಯ, ಅಶೋಕ್‌ ಸಸಿಹಿತ್ಲು, ಕಲ್ಲಾಜೆ ರಾಧಾಕೃಷ್ಣ ಭಟ್‌, ಪಡುಬಿದ್ರಿ ವಿ. ರಾಜೇಶ್‌ ರಾವ್‌, ಸುಮತಿ ಆರ್‌. ಶೆಟ್ಟಿ, ಮೀರಾರೋಡ್‌ ಹರಿ ಭಟ್‌, ನಿರಂಜನ್‌ ಗೋಗೆr  ಮತ್ತಿತರರು ಉಪಸ್ಥಿತರಿದ್ದರು.

ವಿದ್ವಾನ್‌ ಶಿವರಾಜ ಉಪಾಧ್ಯಾಯ ಮತ್ತು ವಿನಯರಾಜ್‌ ಭಟ್‌ ವೇದಮಂತ್ರ ಸ್ತೋತ್ರ ಪಠಿಸಿದರು. ರಾಮದಾಸ ಉಪಾಧ್ಯಾಯ ರೆಂಜಾಳ ಸ್ವಾಗತಿಸಿದರು. ಸುಕನ್ಯಾ ಭಟ್‌ ನಿರ್ದೇಶನದಲ್ಲಿ ರಾಧಾಕೃಷ್ಣ ನೃತ್ಯ ಅಕಾಡೆಮಿಯ ಕಲಾವಿದರಿಂದ ನೃತ್ಯ ವೈವಿಧ್ಯ ನಡೆಯಿತು. ಓಂ ಶ್ರೀಕೃಷ್ಣಾಚಾರ್ಯ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ ಆಚಾರ್ಯ ರಾಮಕುಂಜ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.