ಸಾರ್ವಜನಿಕ ನವರಾತ್ರ್ಯುತ್ಸವ ಮಂಡಳದ ನವರಾತ್ರಿ ಉತ್ಸವ


Team Udayavani, Sep 22, 2017, 3:48 PM IST

21-Mum03b.jpg

ಡೊಂಬಿವಲಿ: ಸುವರ್ಣ ಮಹೋತ್ಸವವನ್ನು ಆಚರಿಸಿದ ತುಳು-ಕನ್ನಡಿಗರ ಪ್ರತಿಷ್ಠಿತ ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರುéತ್ಸವ ಮಂಡಳದ 53ನೇ ವಾರ್ಷಿಕ ನವರಾತ್ರಿ ಉತ್ಸವವು ಡೊಂಬಿವಲಿ ಪಶ್ಚಿಮದ ಕೇತಿ ಭವನದ ಸಮೀಪದಲ್ಲಿ ಹಾಕಿರುವ ಭವ್ಯ ಮಂಟಪದಲ್ಲಿ ವೇದಮೂರ್ತಿ ಪಂಡಿತ್‌ ಶುಭಕರ ಭಟ್‌ ಅವರ ವೇದ, ಮಂತ್ರ-ಘೋಷಗಳ ಮಧ್ಯೆ ಶ್ರೀ ದೇವಿಯ ಪ್ರಾಣ ಪ್ರತಿಷ್ಠಾಪನೆ ಗುರುವಾರ ನೇರವೇರಿತು.

ಶ್ರೀ ದೇವಿಯ ಪ್ರತಿಮೆಗೆ ವಿವಿಧ ಅಲಂಕಾರಗಳೊಂದಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ನವರಾತ್ರಿಯ ಹಿಂದಿನ  ಸೆ. 20ರಂದು ಸಂಜೆ ಶ್ರೀದೇವಿಯ ಮೂರ್ತಿಯನ್ನು ಡೊಂಬಿವಲಿ ಪೂರ್ವದ ಫಡೆR ರೋಡ್‌ನಿಂದ ಪಶ್ಚಿಮದ ಪೂಜಾ ಮಂಟಪದವರೆಗೆ ಅಲಂಕೃತ ವಾಹನದಲ್ಲಿ ವಿವಿಧ ವಾದ್ಯ ಘೋಷಗಳು, ನಾಡಿನ ಸಂಸ್ಕೃತಿ-ಸಂಸ್ಕಾರವನ್ನು ಬಿಂಬಿಸುವ ವೇಷಭೂಷಣಗಳು, ಪ್ರಾತ್ಯಕ್ಷಿಕೆ, ಭಜನೆ, ಸುಡುಮದ್ದುಗಳ ಕಲರವದೊಂದಿಗೆ ಕರೆತರಲಾಯಿತು. ಸಾವಿರಾರು ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಂಡಳದ ಧರ್ಮದರ್ಶಿ ಅಶೋಕ್‌ ದಾಸು ಶೆಟ್ಟಿ, ಅಧ್ಯಕ್ಷ ಗೋಪಾಲ ಶೆಟ್ಟಿ ಹಾಗೂ ಉತ್ಸವಕ್ಕೆ ಮೂರ್ತಿಯನ್ನು ಪ್ರಾಯೋಜಿಸಿದ ಉದ್ಯಮಿ  ಕೆ. ಡಿ. ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ, ಕಿಶೋರ್‌ ದಾಸು ಶೆಟ್ಟಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ  ಗಣೇಶ್‌ ಶೆಟ್ಟಿ ಐಕಳ, ವೇಣುಗೋಪಾಲ ರೈ, ವಿಜೇತ ಶೆಟ್ಟಿ, ಪ್ರಭಾಕರ ಶೆಟ್ಟಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿಯ ರಾಜೀವ ಭಂಡಾರಿ, ರವಿ ಸನಿಲ್‌, ಸತೀಶ್‌ ಕೋಟ್ಯಾನ್‌, ಅಜಿತ್‌ ಶೆಟ್ಟಿ, ರವಿ ಪೂಜಾರಿ, ಕಿರಣ್‌ ಶೆಟ್ಟಿ, ಮೋಹನ್‌ ಸಾಲ್ಯಾನ್‌, ನಿತ್ಯಾನಂದ ಜತ್ತನ್‌, ಭುಜಂಗ ಶೆಟ್ಟಿ, ಭಾಸ್ಕರ ಪೂಜಾರಿ, ಜಯರಾಮ ಶೆಟ್ಟಿ,ಜಯಪ್ರಸನ್ನ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

ನಗರದ ವಿವಿಧ ತುಳು-ಕನ್ನಡಪರ, ಜಾತೀಯ ಸಂಘ ಟನೆಗಳಾದ ಡೊಂಬಿವಲಿ ಕರ್ನಾಟಕ ಸಂಘ, ತುಳುನಾಡ ವೆಲ್ಫೆàರ್‌ ಅಸೋಸಿಯೇಶನ್‌, ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಸಮಿತಿ, ಮೊಗವೀರ ಸಂಘ ಡೊಂಬಿವಲಿ ಸ್ಥಳೀಯ ಕಚೇರಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ, ಕುಲಾಲ ಸಂಘ ಡೊಂಬಿವಲಿ ಸ್ಥಳೀಯ ಕಚೇರಿ, ಅಜೆªಪಾಡಾ ಶ್ರೀ ಅಯ್ಯಪ್ಪ ಸೇವಾ ಸಂಸ್ಥೆ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯ ಬಾಂಧವರು, ತುಳು-ಕನ್ನಡಿಗ ಭಕ್ತಾದಿಗಳು ಪಾರಂಪರಿಕ ವೇಷ ಭೂಷಣಗಳೊಂದಿಗೆ ಮೆರವಣಿಗೆಗೆ ಮೆರುಗು ನೀಡಿದರು.

ನವರಾತ್ರಿಯ ಅಂಗವಾಗಿ ಆಯೋಜಿ ಸಲಾಗಿದ್ದ ಅನ್ನದಾಸೋಹದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಸೆ. 21ರಿಂದ ಸೆ. 30 ರವರೆಗೆ ಅನೇಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಇದೆ ಸಂದರ್ಭದಲ್ಲಿ ಮಂಡಳದ ಪದಾಧಿಕಾರಿಗಳು ತಿಳಿಸಿದರು. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.