ತುಂಬಿ ಹರಿಯುತ್ತಿದೆ ಗೌರಿ ಹೊಳೆ:ಕುಸಿಯುವ ಹಂತದಲ್ಲಿ ಕುಂಡಡ್ಕ ಸೇತುವೆ


Team Udayavani, Jul 21, 2017, 8:15 AM IST

gowri-hole.jpg

– ಪ್ರವೀಣ್‌ ಕುಮಾರ್‌

ಸವಣೂರು: ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮ ಹಾಗೂ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮಗಳನ್ನು ಜೋಡಿಸುವ ಗೌರಿಹೊಳೆಗೆ ಅಡ್ಡಲಾಗಿ ನಿರ್ಮಿಸಿದ ಏಕೈಕ ಸೇತುವೆ ಶಿಥಿಲಗೊಂಡಿದ್ದು ಕುಸಿಯುವ ಭೀತಿಯಲ್ಲಿದೆ. ಇದರಿಂದ ಈ ಭಾಗದ ಜನರು ಸಂಪರ್ಕ ಕಡಿತದ ಭೀತಿ ಎದುರಿಸುತ್ತಿದ್ದಾರೆ. ಮಳೆಗಾಲವಾಗಿದ್ದು, ಸುತ್ತಮುತ್ತಲು ಹೆಚ್ಚಿನ ಮಳೆಯೂ ಬೀಳುತ್ತಿದೆ. ತಾಲೂಕಿನ ಹಲವು ಸೇತುವೆಗಳು ಮುಳುಗುವ ಸ್ಥಿತಿಯಲ್ಲಿವೆ. ದಿನೇ ದಿನೇ ಗೌರಿ ಹೊಳೆಯಲ್ಲೂ ನೀರಿನ ಮಟ್ಟವು ಏರಿಕೆಯಾಗುತ್ತಿದೆ. ಸೇತುವೆಯ ಪಿಲ್ಲರ್‌ಗೆ ಬೃಹತ್‌ ಮರವೊಂದು ಬಡಿಯು ತ್ತಿದ್ದು, ನೀರಿನ ಮಟ್ಟ ಹೆಚ್ಚಳವಾಗಿ ಅಥವಾ ಮರ ಬಿದ್ದು ಸೇತುವೆಗೆ ಹಾನಿಯಾದರೇನು ಗತಿ ಎಂಬುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

ಈ ಸೇತುವೆ ದಾಟಿ ಮಕ್ಕಳು ಚೆನ್ನಾವರ ಕಿ.ಪ್ರಾ. ಶಾಲೆ, ಮುಕ್ಕೂರು ಹಿ.ಪ್ರಾ. ಶಾಲೆ, ಸವಣೂರು, ಪೆರುವಾಜೆ ಕಾಲೇಜುಗಳಿಗೆ ಹೋಗುತ್ತಾರೆ. ಸೇತುವೆ ಕುಸಿದರೆ ಇವರೆಲ್ಲರೂ ಸಂಕಷ್ಟಕ್ಕೆ ಸಿಲುಕಲಿದ್ದಾರೆ. 

ಅಪಾಯಕಾರಿ ಕೂಡ
ಇದರೊಂದಿಗೆ ಸೇತುವೆಯ ಎರಡೂ ಬದಿಯಲ್ಲೂ ಸರಿಯಾದ ತಡೆಗೋಡೆ ಇಲ್ಲ. ಇದರಿಂದ ವಾಹನ ಸವಾರರಿಗೆ , ಪುಟ್ಟ ಮಕ್ಕಳಿಗೆ ತೀರಾ ಅಪಾಯಕಾರಿಯಾಗಿ ಪರಿಣಮಿಸಿದೆ. ಮಳೆಗಾಲದಲ್ಲಿ ಹೊಳೆಯಲ್ಲಿ ನೀರು ತುಂಬಿ ಹರಿಯುವುದರಿಂದ ಸ್ವಲ್ಪ ಎಡವಟ್ಟಾದರೂ ಜೀವಕ್ಕೇ ಅಪಾಯ ಒದಗುವ ಸ್ಥಿತಿ ಇದೆ. 

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಇಲ್ಲಿ ಸುಮಾರು 20 ವರ್ಷಗಳ ಹಿಂದೆ ಜನರ ಬೇಡಿಕೆಯಂತೆ ಇಲ್ಲಿ ಕಿರುಸೇತುವೆ ಯೊಂದನ್ನು ನಿರ್ಮಿಸಲಾಗಿತ್ತು. ಗುಣ ಮಟ್ಟದ ಕೊರತೆ, ನೀರಿನ ಪ್ರಮಾಣ ಹೆಚ್ಚಳ ದಿಂದ ಈ ಸೇತುವೆ ಈಗ ಶಿಥಿಲಗೊಂಡು ಕುಸಿಯುವ ಸ್ಥಿತಿಯಲ್ಲಿದೆ. ಇದು ಕಿರು ಸೇತುವೆಯಾದ ಕಾರಣ ಘನ ವಾಹನಗಳು ಹೋಗುವಂತಿಲ್ಲ.

ನಿರಂತರವಾಗಿ ಸುರಿಯುತ್ತಿರುವ ಮಳೆ ಯಿಂದ ಸೇತುವೆಯು ಕುಸಿಯುವ ಭೀತಿ ಎದುರಾಗಿದೆ.ಜತೆಗೆ ಬೃಹತ್‌ ಮರವೊಂದು ಸೇತುವೆಯ ಪಿಲ್ಲರ್‌ ಬಳಿ ನಿಂತಿದ್ದು ನೀರಿನ ರಭಸಕ್ಕೆ ನಿರಂತರವಾಗಿ ಪಿಲ್ಲರ್‌ಗೆ ಬಡಿಯುತ್ತಿದ್ದು ಯಾವ ಸಂದರ್ಭದಲ್ಲಿ ಅಪಾಯ ತಂದೊಡ್ಡಬಹುದು ಎಂಬುದನ್ನು ಊಹಿಸಲು ಅಸಾಧ್ಯ. ಕಳೆದ ಬೇಸಗೆಯಲ್ಲೇ ಈ ಸೇತುವೆಯ ದುರಸ್ತಿ ಕುರಿತು ಗಮನಹರಿಸಿದ್ದರೆ ಈ ಮಳೆಗಾಲದಲ್ಲಿ ಭೀತಿಯ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಎನ್ನುತ್ತಾರೆ ಸಾರ್ವಜನಿಕರು. 

ಶಾಸಕರು ಭೇಟಿ ನೀಡಿದರಷ್ಟೇ!
ಈ ಸೇತುವೆ ಕುಸಿದು ಸಂಪರ್ಕ ಕಡಿತವಾದರೆ ಪಾಲ್ತಾಡಿ ಭಾಗದಿಂದ ಸವಣೂರು, ಕಾಣಿಯೂರು, ಪೆರುವಾಜೆಗೆ ಹೋಗುವವರು ಪುತ್ತೂರು ಅಥವಾ ಬೆಳ್ಳಾರೆ ಮೂಲಕ ಸುತ್ತಿ ಬಳಸಿ ಹೋಗಬೇಕು. ಈ ಕುರಿತು ಹಿಂದೆಯೂ ಉದಯವಾಣಿ ವರದಿ ಪ್ರಕಟಿಸಿ ಸಂಬಂಧಪಟ್ಟವರನ್ನು ಎಚ್ಚರಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿದ ಸುಳ್ಯ ಶಾಸಕ ಎಸ್‌. ಅಂಗಾರ ಅವರು ತುರ್ತುಕಾಮಗಾರಿಗೆ ಸ್ಪಂದಿಸುವ ಭರವಸೆ ನೀಡಿದ್ದರು. ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದನ್ನು ಹೊರತುಪಡಿಸಿದಂತೆ ಬೇರಾವ ಕೆಲಸವೂ ಆಗಿಲ್ಲ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.