ಕೊಡಗಿನ ಹಾಕಿ ಆಟಗಾರನ ಬರ್ಬರವಾಗಿ ಇರಿದು ಕೊಂದ ಪತ್ನಿ 


Team Udayavani, Aug 20, 2017, 4:02 PM IST

13.jpg

ಮುಂಬಯಿ : ಇಲ್ಲಿ  ಕೊಡಗು ಮೂಲದ ಮಾಜಿ ಹಾಕಿ ಆಟಗಾರ ಅಪೈಯ್ಯ ಚೆನಂದ ಅವರನ್ನು ಪತ್ನಿಯೇ ಬರ್ಬರವಾಗಿ ಇರಿದು ಕೊಲೆಗೈದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಮಾಲಾಡದ ಕಚ್‌ಪಡ ಪ್ರದೇಶದಲ್ಲಿರುವ ಫ್ಲ್ಯಾಟ್‌ನ 27 ನೇ ಮಹಡಿಯಲ್ಲಿ ಘಟನೆ ನಡೆದಿದ್ದು , ಕೌಟುಂಬಿಕ ಕಲಹದಿಂದ 52 ರ ಹರೆಯದ ಅಪೈಯ ಅವರನ್ನು ಪತ್ನಿ ಅಮಿತಾ (45) ಬರ್ಬರವಾಗಿ ಇರಿದು ಕೊಲೆಗೈದಿದ್ದಾಳೆ.ಬಳಿಕ ತಾನೂ ಇರಿದು ಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ.

ಘಟನೆ ವೇಳೆ ದಂಪತಿಗಳ ಇಬ್ಬರು ಮಕ್ಕಳು ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ. ಅಪೈಯ್ಯ ಸಹಾಯಕ್ಕಾಗಿ ಕೂಗಿಕೊಂಡಿದ್ದು ,ನೆರೆಮನೆಯವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸರು ಆಗಮಿಸಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅಪೈಯ್ಯ ಸಾವನ್ನಪ್ಪಿದ್ದರು.

ದಂಪತಿಗಳು ಮದ್ಯಪಾನ ಮಾಡುವ ವೇಳೆ ಯಾವುದೋ ವಿಚಾರಕ್ಕೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. 

ಮಲಾಡ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪುತ್ರ ಮತ್ತು ಪುತ್ರಿಯಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಮಿತ ಆರೋಗ್ಯ ಸುಧಾರಿಸಿದ ಬಳಿಕ ವಶಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ. 

ಅಮಿತಾ  ಅಪೈಯ್ಯಗೆ 2 ನೇ ಪತ್ನಿ ಎಂದು ತಿಳಿದು ಬಂದಿದೆ.ಅಪೈಯ್ಯ ಏರ್‌ ಇಂಡಿಯಾ, ಟಾಟಾ ಮತ್ತು ಮುಂಬಯಿ ಹಾಕಿ ತಂಡಗಳಲ್ಲಿ ಹಲವು ವರ್ಷಗಳ ಕಾಲ ಆಟವಾಡಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.