ಬಾರ್‌ ರಕ್ಷಣೆ: ಸರಕಾರದಿಂದ ಕಾನೂನು ತಜ್ಞರ ಮೊರೆ

Team Udayavani, Jul 5, 2017, 3:05 AM IST

Siddaramaiah-1-900.jpg

ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್‌ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ಉಳಿಸಿಕೊಳ್ಳುವ ವಿಚಾರದಲ್ಲಿ ಕಾನೂನು ತಜ್ಞರ ಮೊರೆ ಹೋಗಲು ರಾಜ್ಯ ಸರಕಾರ ತೀರ್ಮಾನಿಸಿದೆ. ಗೃಹಕಚೇರಿ ಕೃಷ್ಣಾದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಸಹಿತ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಹೆದ್ದಾರಿ ವ್ಯಾಪ್ತಿಯ 500 ಮೀಟರ್‌ ವ್ಯಾಪ್ತಿಯ ಮದ್ಯ ದಂಗಡಿಗಳನ್ನು ಮುಚ್ಚಬೇಕು ಎಂಬ ಸುಪ್ರೀಂ ಕೋರ್ಟ್‌ ಆದೇಶದಿಂದ ಬೆಂಗಳೂರು ನಗರದ ಬಾರ್‌ಗಳನ್ನು ಉಳಿಸಿಕೊಳ್ಳಲು ವಾರದೊಳಗೆ ಸೂಕ್ತ ದಾರಿ ಕಂಡುಕೊಂಡು ಮಾಹಿತಿ ನೀಡುವಂತೆ ಕಾನೂನು ಇಲಾಖೆ, ಲೋಕೋಪಯೋಗಿ, ಅಬಕಾರಿ, ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದರು.

ಇದರ ಜತೆಗೆ ನಗರ ಪ್ರದೇಶಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳ ರಸ್ತೆಗಳೆಂದು ಡಿನೋಟಿಫೈ ಮಾಡಿದ ಪಂಜಾಬ್‌ ಸರಕಾರದ ಕ್ರಮ ಸರಿಯಾಗಿದೆ ಎಂಬ ರೀತಿಯಲ್ಲಿ ಸುಪ್ರೀಂಕೋರ್ಟ್‌ ನೀಡಿದ ಅಭಿಪ್ರಾಯದ ಬಗ್ಗೆಯೂ ಚರ್ಚಿಸಿದ ಮುಖ್ಯಮಂತ್ರಿ, ಅದನ್ನು ಆಧರಿಸಿ ಸರಕಾರ ಏನು ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚಿಸಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಮಸೂದೆ ಬೇಕೇ? ಅಧ್ಯಾದೇಶದಿಂದ ಸಾಧ್ಯವೇ?: ಪಂಜಾಬ್‌ ಸರಕಾರ ವಿಧಾನಸಭೆಯಲ್ಲಿ ಮಸೂದೆ ಮೂಲಕ ಹೆದ್ದಾರಿಗಳನ್ನು ಡಿನೋಟಿಫೈ ಮಾಡಿದಂತೆ ರಾಜ್ಯ ಸರಕಾರವೂ ವಿಧಾನಮಂಡಲದಲ್ಲಿ ಮಸೂದೆ ರೂಪಿಸುವವರೆಗೆ ಕಾಯಬೇಕೇ ಅಥವಾ ಅಧ್ಯಾದೇಶ ಮೂಲಕ ಈ ಪ್ರಕ್ರಿಯೆ ಕೈಗೊಳ್ಳಲು ಸಾಧ್ಯವೇ ಎಂಬುದನ್ನು ಕಾನೂನು ತಜ್ಞರ ಜತೆ ಸಮಾಲೋಚಿಸಿ ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಸಲಹೆ ಮಾಡಿದ್ದಾರೆ. ಅಲ್ಲದೆ, ಈ ಕುರಿತು ಪೂರ್ಣ ಮಾಹಿತಿ ಸಂಗ್ರಹಿಸಬೇಕು. ಬೇರೆ ಬೇರೆ ರಾಜ್ಯಗಳಲ್ಲಿ ಕಾನೂನಾತ್ಮಕ ಹಾಗೂ ಶಾಸನಾತ್ಮಕ ಪರಿಹಾರ ಕೈಗೊಳ್ಳುತ್ತಿರುವ ಬಗೆಗೂ ಮಾಹಿತಿ ತರಿಸಿಕೊಂಡು ವರದಿ ನೀಡಿ. ಅದರಂತೆ ಮುಂದಿನ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಪಂಜಾಬ್‌ ಸರಕಾರದ ಮಸೂದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಅಭಿಪ್ರಾಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದರೊಂದಿಗೆ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಯಾವ ಕ್ರಮ ಅನುಸರಿಸುತ್ತಾರೆ ಎಂಬುದನ್ನೂ ಪರಿ ಶೀಲಿಸಲಾಗುತ್ತಿದೆ. ಅದನ್ನು ಆಧರಿಸಿ ನಮ್ಮ ರಾಜ್ಯದಲ್ಲಿ ಏನು ಮಾಡಬಹುದು ಎಂಬುದನ್ನು ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.