ಕಾಂಗ್ರೆಸ್ ಅವನತಿ ಆರಂಭ: ಶೆಟ್ಟರ್
Team Udayavani, Jan 30, 2017, 3:45 AM IST
ಮಡಿಕೇರಿ: ಕಾಂಗ್ರೆಸ್ ಸರ್ಕಾರ ಮತ್ತು ಪಕ್ಷದ ನಾಯಕತ್ವ ಯಾವ ಹಾದಿಯಲ್ಲಿ ಸಾಗುತ್ತಿದೆ ಎನ್ನವುದಕ್ಕೆ ಹಿರಿಯ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ರಾಜೀನಾಮೆಯೇ ಸಾಕ್ಷಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾರ್ದನ ಪೂಜಾರಿ ಸೇರಿದಂತೆ ಹಲವು ಹಿರಿಯ ನಾಯಕರು ಬಹಿರಂಗವಾಗಿ ಟೀಕೆ ಮಾಡುತ್ತಲೇ ಬಂದಿದ್ದಾರೆ.
ರಾಜ್ಯ ಸರ್ಕಾರದ ದುರಾಡಳಿತದಿಂದ ಬೇಸತ್ತು ಕೃಷ್ಣ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ಕಾಂಗ್ರೆಸ್ ಅವನತಿ ಆರಂಭವಾಗಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಮುಕ್ತ ಸರ್ಕಾರ ರಚನೆಯಾದಂತೆ ಕರ್ನಾಟಕ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ತಿಳಿಸಿದರು.