” ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ’
Team Udayavani, Feb 16, 2017, 3:45 AM IST
ನಾಗಮಂಗಲ: ಸದ್ಯಕ್ಕೆ ಅಮಾನತ್ತಿನಲ್ಲಿರುವ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕನ್ನಾಘಟ್ಟ ಗ್ರಾಮದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಚೆಲುವರಾಯಸ್ವಾಮಿಯನ್ನು ಪುನಃ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಿ ಎಂದು ನಾಗಮಂಗಲ ಕ್ಷೇತ್ರದ ಯಾವೊಬ್ಬ ಕಾರ್ಯಕರ್ತರೂ ತಮ್ಮ ಬಳಿ ಕೇಳಿಕೊಂಡಿಲ್ಲ. ಗೋಪಾಲಯ್ಯ ಅವರು ಕ್ಷಮೆ ಕೋರಿ ಮತ್ತೆ ಪಕ್ಷಕ್ಕೆ ಮರಳಿದ್ದಾರೆ. ಉಳಿದ ಏಳು ಮಂದಿಯನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.
ಮುಂಬರುವ ವಿಧಾನಸಭೆ ಚುನಾವಣೆಗೆ ನಾಗಮಂಗಲ ಸೇರಿದಂತೆ ಜೆಡಿಎಸ್ನಿಂದ ಅಮಾನತ್ತುಗೊಂಡಿರುವ ಶಾಸಕರ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ