Updated at Fri,31st Mar, 2017 1:44AM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಅಧಿಕಾರಿಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ನಾಲ್ವರು ಅಧಿಕಾರಿಗಳು ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಪರ ಕೆಲಸ ಮಾಡುತ್ತಿದ್ದು, ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ರಾಮೇಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸಪ್ಪ, ಜಿ.ಪಂ. ಸಹಾಯಕ ಕಾರ್ಯಪಾಲಕ ಅಭಿಯಂತ ಶಿವಮಾದಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರೇವಣ್ಣ  ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾಗೆ ದೂರು ಸಲ್ಲಿಸಿದೆ.

ಗುಂಡ್ಲುಪೇಟೆ ವಿಧಾನಸಭೆ ಉಪಚುನಾವಣೆಯಲ್ಲಿ ಈ ನಾಲ್ವರು ಅಧಿಕಾರಿಗಳು ಕಾಂಗ್ರೆಸ್‌ ಏಜೆಂಟರಂತೆ ಕೆಲಸ ಮಾಡುತ್ತಿದ್ದು, ಆಡಳಿತ ಪಕ್ಷದ ಪರ ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎನ್‌. ಶಂಕರಪ್ಪ ಮತ್ತು ವಕ್ತಾರ ಅಶ್ವತ್ಥನಾರಾಯಣ ಈ ದೂರು ನೀಡಿದ್ದಾರೆ. ನಾಲ್ವರು ಅಧಿಕಾರಿಗಳು ಒಂದೇ ಕಡೆ ಮೂರು ವರ್ಷಗಳ ಸೇವೆ ಪೂರೈಸಿದ್ದು, ಆದರೂ ವರ್ಗಾವಣೆಯಾಗಿಲ್ಲ. ಕಾಂಗ್ರೆಸ್‌ ಪರ ಕೆಲಸ ಮಾಡುತ್ತಿರುವ ಈ ಅಧಿಕಾರಿಗಳಿಂದಾಗಿ ಚುನಾವಣಾ ಪ್ರಕ್ರಿಯೆ ಕಾನೂನು ಬಾಹಿರವಾಗಿ ನಡೆಯುವಂತಾಗಿದ್ದು, ಕೂಡಲೇ ಅವರನ್ನು ವರ್ಗಾವಣೆ ಮಾಡಬೇಕು ಎಂದು ಕೋರಿದ್ದಾರೆ.


More News of your Interest

Trending videos

Back to Top