ಎಸ್‌.ಎಂ. ಕೃಷ್ಣ ಇಂದು ದಿಲ್ಲಿಗೆ


Team Udayavani, Mar 20, 2017, 10:47 AM IST

S-M-Krishna-750.jpg

ಬೆಂಗಳೂರು: ಸಹೋದರಿ ನಿಧನದಿಂದಾಗಿ ಬಿಜೆಪಿ ಸೇರುವ ದಿನಾಂಕ ಮುಂದೂಡಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರು ಇದೀಗ ಆ ನಿಟ್ಟಿನಲ್ಲಿ ಮತ್ತೆ ಸೋಮವಾರ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಿರುವ ಎಸ್‌.ಎಂ. ಕೃಷ್ಣ ಅವರು ಬಿಜೆಪಿ ಸೇರ್ಪಡೆಗೆ ದಿನಾಂಕ ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ನಿಗದಿಯಾಗಿದ್ದಂತೆ ಮಾ. 15ರಂದು ಕೃಷ್ಣ ಅವರು ಬಿಜೆಪಿ ಸೇರಬೇಕಿತ್ತು. ಅದರಂತೆ ಅವರು ಮಾ. 14ರಂದು ದಿಲ್ಲಿಗೆ ತೆರಳಿದ್ದರಾದರೂ ಸಹೋದರಿ ನಿಧನರಾಗಿದ್ದರಿಂದ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿ ಬೆಂಗಳೂರಿಗೆ ವಾಪಸಾಗಿದ್ದರು.

ನಿಧನರಾದ ಸಹೋದರಿಯ ವೈಕುಂಠ ಸಮಾರಾಧನೆ ಮುಗಿಯುವವರೆಗೆ ಎಸ್‌.ಎಂ. ಕೃಷ್ಣ ಅವರು ಬಿಜೆಪಿ ಸೇರುವುದಿಲ್ಲ ಎಂದು ಹೇಳಲಾಗುತ್ತಿತ್ತಾದರೂ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮುನ್ನವೇ ಅವರು ಬಿಜೆಪಿ ಸೇರಬೇಕು ಎಂಬ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಈ ಕುರಿತು ಅಮಿತ್‌ ಶಾ ಅವರೊಂದಿಗೆ ಚರ್ಚಿಸಲು ದಿಲ್ಲಿಗೆ ತೆರಳುತ್ತಿದ್ದಾರೆ. ಅಮಿತ್‌ ಶಾ ಜತೆಗಿನ ಮಾತುಕತೆ ಬಳಿಕ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಲಿದೆ.

ಕೃಷ್ಣ ಬಿಜೆಪಿ ಸೇರ್ಪಡೆ ವಿರುದ್ಧ  ಮೋದಿಗೆ ಪತ್ರ: ಹಿರೇಮಠ
ಹುಬ್ಬಳ್ಳಿ:
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ 180 ಎಕ್ರೆ ಅರಣ್ಯ ಪ್ರದೇಶ ಕಬಳಿಸಿದ ಅಳಿಯ ವಿ.ಜಿ. ಸಿದ್ಧಾರ್ಥನ ಅಕ್ರಮಕ್ಕೆ ಬೆಂಬಲ ನೀಡಿದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರನ್ನು ಬಿಜೆಪಿಗೆ ಆಹ್ವಾನಿಸಬಾರದೆಂದು ಪ್ರಧಾನಿ ಮೋದಿಗೆ ಪತ್ರ ಬರೆಯಲಾಗುವುದು ಎಂದು ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ತಿಳಿಸಿದ್ದಾರೆ. ವಿ.ಜಿ. ಸಿದ್ಧಾರ್ಥ ಕಾನೂನುಬಾಹಿರವಾಗಿ ಅರಣ್ಯ ಕಬಳಿಸಿದ್ದಾರೆ. ಅಳಿಯನನ್ನು ಉಳಿಸಲು ಯತ್ನಿಸಿರುವ ಎಸ್‌.ಎಂ. ಕೃಷ್ಣ  ಉನ್ನತ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ರಾಷ್ಟ್ರಪತಿ ಅಥವಾ ಉಪರಾಷ್ಟ್ರಪತಿ ಸ್ಥಾನದ ಮೇಲೆ ಕಣ್ಣಿಟ್ಟು ಬಿಜೆಪಿ ಸೇರುತ್ತಿದ್ದಾರೆ. ಕಾಳಧನದ ವಿರುದ್ಧ ಸಮರ ಸಾರಿರುವ ಪ್ರಧಾನಿ ಅವರು ಕೃಷ್ಣ ಅಂತಹವರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.