ಬಿಜೆಪಿಗನಾಗಿ ಇಂದು ಕೃಷ್ಣಾಗಮನ
Team Udayavani, Mar 24, 2017, 3:45 AM IST
ಬೆಂಗಳೂರು: ಬುಧವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶುಕ್ರವಾರ ಸಂಜೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.ಸಂಜೆ 7 ಗಂಟೆಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಠಿ†àಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸ್ವಾಗತಿಸಲಿದ್ದು, ಅಲ್ಲಿಂದ ನೇರವಾಗಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಕರೆತರಲಿದ್ದಾರೆ.
ಬಿಜೆಪಿ ಸೇರಿದ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಬರುತ್ತಿರುವ ಎಸ್.ಎಂ.ಕೃಷ್ಣ ಅವರನ್ನು ಸ್ವಾಗತಿಸಲು ಸಂಜೆ 8 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ವಿಶೇಷ ಸಭೆ ಏರ್ಪಡಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಮತ್ತಿತತರು ಈ ಸಂದರ್ಭದಲ್ಲಿ ಹಾಜರಿದ್ದು, ಕೃಷ್ಣ ಅವರನ್ನು ಅಭಿನಂದಿಸಲಿದ್ದಾರೆ.
ಇದಾದ ಬಳಿಕ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಪ್ರಚಾರ ವೈಖರಿ ಕುರಿತು ಯಡಿಯೂರಪ್ಪ ಮತ್ತು ಎಸ್.ಎಂ.ಕೃಷ್ಣ ಅವರು ಪ್ರತ್ಯೇಕ ಸಮಾಲೋಚನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಬಗ್ಗೆ ಕೃಷ್ಣ ಅವರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ