ಬಜೆಟ್ ಅಧಿವೇಶನಕ್ಕೆ ತೆರೆ
Team Udayavani, Mar 29, 2017, 2:28 AM IST
ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನಕ್ಕೆ ತೆರೆ ಬಿದ್ದಿದ್ದು, ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಾ. 15ರಿಂದ ಆರಂಭವಾದ ಕಲಾಪವನ್ನು ಮಂಗಳವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮಾ. 15ರಂದು ಆರಂಭವಾದ ಕಲಾಪ ದಲ್ಲಿ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದರು. ಆದರೆ, ಕಾಂಗ್ರೆಸ್ ಹೈಕಮಾಂಡ್ಗೆ ಕಪ್ಪ ಸಲ್ಲಿಸಿರುವ ಕುರಿತ ಡೈರಿ ಬಗ್ಗೆ ನಿಲುವಳಿ ಸೂಚನೆ ಪ್ರಸ್ತಾವಕ್ಕೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದರಿಂದ ಮಾ. 16 ಮತ್ತು 17ರ ಕಲಾಪ ಬಲಿಯಾಗಿತ್ತು.