ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ತೀವ್ರ ಅಸ್ವಸ್ಥ;ICUನಲ್ಲಿ ಚಿಕಿತ್ಸೆ
Team Udayavani, Apr 20, 2017, 9:08 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರು ತೀವ್ರ ಅಸ್ವಸ್ಥಗೊಂಡಿದ್ದು ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ತೀವ್ರ ನಿಗಾ ಘಟಕದಲ್ಲಿ ಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಸಿಂಗ್ ಅವರಿಗೆ 80 ವರ್ಷ ಪ್ರಾಯವಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.