ರಾಜ್ಯ ಬಿಜೆಪಿ ಬಿಕ್ಕಟ್ಟು ಬಹುತೇಕ ಶಮನ

Team Udayavani, May 21, 2017, 3:45 AM IST

BJP_symbol.jpg

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಬಿಕ್ಕಟ್ಟು ಶಮನವಾಗುವ ಲಕ್ಷಣ ಕಾಣಿಸಿಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಮುನಿಸಿಕೊಂಡಿರುವ ಪಕ್ಷದ ಒಂದು ಗುಂಪನ್ನು ಸಮಾಧಾನಪಡಿಸುವಲ್ಲಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರು ಬಹುತೇಕ ಯಶಸ್ವಿಯಾಗಿದ್ದಾರೆ.

ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿರುವ ಕೆಲವೊಂದು ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲಾಗುವುದು ಮತ್ತು ಮೂಲ ಕಾರ್ಯಕರ್ತರನ್ನು ಕಡೆಗಣಿಸದಂತೆ ನೋಡಿಕೊಳ್ಳಲಾಗುವುದು. ಈ ವಿಚಾರವನ್ನು ನಮಗೆ ಬಿಟ್ಟು ಪಕ್ಷ ಸಂಘಟಿಸುವ ಕೆಲಸ ಮಾಡಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆಯನ್ನು ಮುರಳೀಧರರಾವ್‌ ಅಸಮಾಧಾನಿತ ಮುಖಂಡರಿಗೆ ತಿಳಿಸಿದ್ದಾರೆ. ಇದಕ್ಕೆ ಅಸಮಾಧಾನಿತ ಮುಖಂಡರೂ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ಕೆಲವು ಬೆಳವಣಿಗೆಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಅದನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ ಯಡಿಯೂರಪ್ಪ ಅವರಿಗೆ ಬಹಿರಂಗ ಪತ್ರ ಬರೆದಿದ್ದ 24 ಅಸಮಾಧಾನಿತ ಮುಖಂಡರನ್ನು ಶನಿವಾರ ಕರೆಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಮುರಳೀಧರರಾವ್‌, ಸಮಸ್ಯೆ ಬಗೆಹರಿಸುವ ಭರವಸೆ ನೀಡುವುದರ ಜತೆ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು ಎನ್ನಲಾಗಿದೆ.

ಶೋಭಾ ಮತ್ತಿತರರ ವಿರುದ್ಧ ಆಕ್ರೋಶ:
ಮುರಳೀಧರರಾವ್‌ ಅವರೊಂದಿಗಿನ ಮಾತುಕತೆ ವೇಳೆ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು. ಆದರೆ, ಅವರ ಜತೆಗಿರುವ ಸಂಸದೆ ಶೋಭಾ ಕರಂದ್ಲಾಜೆ, ಬಿ.ಜೆ.ಪುಟ್ಟಸ್ವಾಮಿ ಮತ್ತಿತರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದೂರುಗಳ ಸುರಿಮಳೆಯನ್ನೇ ಸುರಿಸಿದರು ಎಂದು ಹೇಳಲಾಗಿದೆ.

ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗ ಎಲ್ಲರೂ ಸಂತೋಷಪಟ್ಟಿದ್ದೆವು. ಆದರೆ, ಅಧ್ಯಕ್ಷರಾದ ಬಳಿಕ ಅವರು ತಮ್ಮದೇ ಆದ ಒಂದು ಗುಂಪು ಕಟ್ಟಿಕೊಂಡು ತಮ್ಮೊಂದಿಗೆ ಕೆಜೆಪಿಗೆ ಹೋಗಿ ಬಂದವರಿಗೆ ಆದ್ಯತೆ ನೀಡುತ್ತಿದ್ದಾರೆ. ತಮ್ಮ ಜತೆಗಿದ್ದವರ ಮಾತು ಕೇಳಿ ಮೂಲ ಕಾರ್ಯಕರ್ತರನ್ನು ಬದಿಗೆ ಸರಿಸುತ್ತಿದ್ದಾರೆ. ಇದು ಸಂಘಟನೆ ಮೇಲೆ ಪರಿಣಾಮ ಬೀರಿದೆ. ವಿಧಾನಸಭೆ ಚುನಾವಣೆ ಟಿಕೆಟ್‌ ಹಂಚಿಕೆ ವೇಳೆಯೂ ಇದೇ ಮಾನದಂಡ ಅನುಸರಿಸಿದರೆ ದಶಕಗಳಿಂದ ಪಕ್ಷಕ್ಕೆ ದುಡಿದವರಿಗೆ ಅನ್ಯಾಯವಾಗಲಿದೆ  ಎಂದು ಆರೋಪಿಸಿದರು ಎಂದು ತಿಳಿದು ಬಂದಿದೆ.

ಎಲ್ಲಾ ಅಹವಾಲುಗಳನ್ನು ಸಾವಧಾನದಿಂದಲೇ ಕೇಳಿದ ಮುರಳೀಧರರಾವ್‌, ನಿಮ್ಮ ಬೇಡಿಕೆಗಳ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಆದರೆ, ಅದನ್ನು ಪಕ್ಷದ ಒಳಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕೇ ಹೊರತು ಬಹಿರಂಗಗೊಳಿಸಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಸಮಾಧಾನಿತ ಮುಖಂಡರು, ಆರಂಭದಲ್ಲೇ ನಮ್ಮ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೆವು. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಅಸಮಾಧಾನ ಶಮನಕ್ಕೆ ಫೆ.10ರ ಗಡುವು ವಿಧಿಸಿದ್ದ ಅಮಿತ್‌ ಶಾ ಅವರು ಅದಕ್ಕಾಗಿ ಸಮಿತಿ ರಚಿಸಿದ್ದರು. ಇದುವರೆಗೆ ಸಮಿತಿ ಸಭೆ ಸೇರಿ ಸಮಸ್ಯೆಗಳನ್ನು ಆಲಿಸಿಲ್ಲ ಎಂದು ಪ್ರತಿಕ್ರಿಯಿಸಿದರು.

ಬಳಿಕ ಮಾತನಾಡಿದ ಮುರಳೀಧರರಾವ್‌, “ನಾನೇ ಖುದ್ದಾಗಿ ನಿಮ್ಮ ಸಮಸ್ಯೆ ಆಲಿಸಿದ್ದು, ಇದನ್ನು ಅಮಿತ್‌ ಶಾ ಅವರ ಗಮನಕ್ಕೆ ತರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಾನಿಯಾಗುವಂತಹ ಕೆಲಸಕ್ಕೆ ಕೈಹಾಕಬೇಡಿ. ಒಂದು ವೇಳೆ ಆ ರೀತಿ ಆದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಎಲ್ಲಾ ಅಸಮಾಧಾನಿತ ಮುಖಂಡರು ಒಪ್ಪಿದರು ಎಂದು ಮೂಲಗಳು ಹೇಳಿವೆ.

ಸಭೆಯಲ್ಲಿ ಸೊಗಡು ಶಿವಣ್ಣ, ನಂದೀಶ್‌, ಸೋಮಣ್ಣ ಬೇವಿನಮರದ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ನಿರ್ಮಲ್‌ ಕುಮಾರ್‌ ಸುರಾನಾ, ಭಾನುಪ್ರಕಾಶ್‌ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ಸಂತೋಷ್‌-ಮುಕುಂದ್‌ ಚರ್ಚೆ
ಇನ್ನೊಂದೆಡೆ ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಅವರು ಆರ್‌ಎಸ್‌ಎಸ್‌ ಮುಖಂಡ ಸಿ.ಆರ್‌.ಮುಕುಂದ್‌ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಭಿನ್ನಮತಕ್ಕೆ ಸಂತೋಷ್‌ ಅವರೇ ಕಾರಣ ಎಂದು ಬಿ.ಎಸ್‌.ಯಡಿಯೂರಪ್ಪ ಅವರು ಆರೋಪಿಸಿದ ಬಳಿಕ ಇವರಿಬ್ಬರು ಇದೇ ಪ್ರಥಮ ಬಾರಿಗೆ ಒಟ್ಟಾಗಿ ಸಮಾಲೋಚನೆ ನಡೆಸಿದ್ದು, ಮಾತುಕತೆ ಸಾಕಷ್ಟು ಕುತೂಹಲ ಕೆರಳಿಸಿದೆ.

ಆರ್‌ಎಸ್‌ಎಸ್‌ ಮೂಲಗಳ ಪ್ರಕಾರ, ಸಂತೋಷ್‌ ಅವರು ಆರ್‌ಎಸ್‌ಎಸ್‌ ಮೂಲಕ ಬಿಜೆಪಿ ಪದಾಧಿಕಾರಿಯಾಗಿ ನೇಮಕಗೊಂಡವರು. ಸಂಘಟನೆ ಮತ್ತು ಪಕ್ಷದ ಮಧ್ಯೆ ಕೊಂಡಿಯಾಗಿರುವವರು. ಹೀಗಾಗಿ, ಅವರು ಆರ್‌ಎಸ್‌ಎಸ್‌ ಮುಖಂಡರನ್ನು ಭೇಟಿಯಾಗುವುದು ಸಾಮಾನ್ಯ. ಇದರಲ್ಲಿ ವಿಶೇಷವೇನೂ ಇಲ್ಲ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.