ವರ್ತೂರು ಕೆರೆಯಲ್ಲಿ ಮತ್ತೆ ವಿಷಕಾರಿ ನೊರೆ ಕಾಟ; ವಾಹನ ಸವಾರರ ಪರದಾಟ!
Team Udayavani, May 29, 2017, 12:33 PM IST
ಬೆಂಗಳೂರು: ಭಾರೀ ಗಾಳಿ ಮಳೆಯಿಂದ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿ ಹೋಗಿರುವ ನಡುವೆ ಇದೀಗ ವರ್ತೂರು ಕೆರೆ ಸುತ್ತಮುತ್ತ ಮತ್ತೆ ನೊರೆ ಕಾಟದಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರ ಸಂಚಾರಕ್ಕೆ ಅಡ್ಡಿ ಉಂಟುಮಾಡುವ ಮೂಲಕ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ತಗ್ಗು ಪ್ರದೇಶ, ಕೊಳಗೇರಿ ಪ್ರದೇಶಗಳು ನೀರಿನಿಂದ ಆವೃತ್ತವಾಗಿದ್ದು, ನೂರಾರು ಮರಗಳು ಧರಾಶಾಹಿಯಾಗಿದ್ದವು. ಅಷ್ಟೇ ಅಲ್ಲ ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡಿದ್ದ ನೊರೆ ಸಮಸ್ಯೆ ಈಗ ವರ್ತೂರು ಕೆರೆಯಲ್ಲೂ ಕಾಣಿಸಿಕೊಂಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ಶನಿವಾರ, ಭಾನುವಾರದಿಂದ ವರ್ತೂರು ಕೆರೆಯಿಂದ ರಾಶಿ, ರಾಶಿ ವಿಷಕಾರಿ ರಾಸಾಯನಿಕ ನೊರೆ ದೊಡ್ಡ ಪ್ರಮಾಣದಲ್ಲಿ ವೈಟ್ ಫೀಲ್ಡ್ ಮುಖ್ಯರಸ್ತೆ ಮೇಲೆ ಹಾರಿ ಬರುತ್ತಿದೆ. ಇದರಿಂದಾಗಿ ವಾಹನ ಸವಾರರು, ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ವರ್ತೂರು ಕೆರೆಯಿಂದ ರಾಶಿ, ರಾಶಿಯಾಗಿ ಹಾರಿ ಬರುತ್ತಿರುವ ರಾಸಾಯನಿಕ ಯುಕ್ತ ನೊರೆಯ ದೃಶ್ಯದ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಬೆಳ್ಳಂದೂರು ಕೆರೆ ಪ್ರಕರಣದ ಬಳಿಕ ಎಚ್ಚೆತ್ತುಕೊಳ್ಳದ ಬಿಬಿಎಂಪಿ ಈ ನೊರೆ ಸಮಸ್ಯೆಯನ್ನು ಬಗೆಹರಿಸಲು ವಿಫಲವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಕಟುವಾಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಳಿಕ ಎಚ್ಚೆತ್ತುಕೊಂಡ ಬಿಡಿಎ ಕಮಿಷನರ್ ರಾಕೇಶ್ ಸಿಂಗ್ ಅವರು ವರ್ತೂರು ಕೆರೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ