ನಾಗಮಂಗಲ: ಜಮೀನಿಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್;13 ಮಂದಿಗೆ ಗಾಯ
Team Udayavani, Jun 9, 2017, 10:19 AM IST
ಮಂಡ್ಯ : ಇಲ್ಲಿನ ನಾಗಮಂಗಲದ ವಡೆಯರಹಳ್ಳಿ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿ 13 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ.
ಬೆಂಗಳೂರಿನಿಂನ ಮಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಜಮೀನಿಗೆ ಇಳಿದಿದೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.