ರಜೆನಗದೀಕರಣ ಸೌಲಭ್ಯ ಪಡೆದ ದಿನಗೂಲಿ ನೌಕರರಿಂದ ಹಣವಾಪಸಾತಿಗೆ ಸುತ್ತೋಲೆ

Team Udayavani, Jul 18, 2017, 3:05 AM IST

Udayavani News Logo.png

ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಇಲ್ಲದೇ ಇದ್ದರೂ ಈ ಸೌಲಭ್ಯ ಪಡೆದ ದಿನಗೂಲಿ ನೌಕರರು ಇದೀಗ ತಾವು ಮಾಡಿಕೊಂಡಿರುವ ಗಳಿಕೆ ರಜೆ ನಗದೀಕರಣ ಮೊತ್ತವನ್ನು ಸರಕಾರಕ್ಕೆ ಮರುಪಾವತಿಸಬೇಕಾದ ಪರಿಸ್ಥಿತಿ ಬಂದಿದೆ.ಹೌದು, ಗಳಿಕೆ ರಜೆ ನಗದೀಕರಣವನ್ನು ನಿಯಮ ಬಾಹಿರವಾಗಿ ಮಂಜೂರು ಮಾಡಿರುವ ಪ್ರಕರಣಗಳಲ್ಲಿ, ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತತ್‌ಕ್ಷಣ ರದ್ದುಪಡಿಸಬೇಕು ಮತ್ತು ಈಗಾಗಲೇ ಪಾವತಿಸಿರುವ ಆರ್ಥಿಕ ಸೌಲಭ್ಯವನ್ನು ಅಂತಹ ದಿನಗೂಲಿ ನೌಕರರಿಂದ ವಸೂಲಿ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಮೂಲಗಳ ಪ್ರಕಾರ ಸರಕಾರದ ವಿವಿಧ ಇಲಾಖೆಗಳ ಪೈಕಿ ಒಂದು ಇಲಾಖೆಯಲ್ಲಿ ಮಾತ್ರ ನಿಯಮಾವಳಿ ಮೀರಿ ಸಾಕಷ್ಟು ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಒದಗಿಸಿದೆ. ಇದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸರಕಾರ ಗಳಿಕೆ ರಜೆ ನಗದೀಕರಣ ಮಾಡುವಂತಿಲ್ಲ ಎಂಬ ಆದೇಶವನ್ನು ಪುನರುಚ್ಚರಿಸಿ ಈಗಾಗಲೇ ನಗದೀಕರಣ ಮಾಡಿಸಿಕೊಂಡವರಿಂದ ಆ ಹಣ ವಾಸಪ್‌ ಪಡೆಯುವಂತೆ ಸೂಚಿಸಿದೆ ಎನ್ನಲಾಗಿದೆ.

ಏನಿದು ಪ್ರಕರಣ?
ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗೂಲಿ ನೌಕರರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತಂದಿದ್ದ ರಾಜ್ಯ ಸರಕಾರ, 2014ರಲ್ಲಿ ಅದಕ್ಕೆ ನಿಯಮಾವಳಿ ರೂಪಿಸಿತ್ತು.

ಈ ಅಧಿನಿಯಮದ ಪ್ರಕಾರ ದಿನಗೂಲಿ ನೌಕರರಿಗೆ ನಿವೃತ್ತಿ ವಯಸ್ಸಿನವರೆಗೆ ಸೇವಾ ಭದ್ರತೆ ಒದಗಿಸಲಾಗಿತ್ತು. ಜತೆಗೆ ವರ್ಷಕ್ಕೆ 30 ದಿನಗಳ ಗಳಿಕೆ ರಜೆ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ, ದಿನಗೂಲಿ ನೌಕರರು ಗಳಿಕೆ ರಜೆಯನ್ನು ಆಯಾ ವರ್ಷ ತೆಗೆದುಕೊಳ್ಳಲು ಅವಕಾಶವಿತ್ತೇ ಹೊರತು ಅದನ್ನು ನಗದೀಕರಿಸಿಕೊಳ್ಳಲು ಅವಕಾಶ ಇರಲಿಲ್ಲ. ಆದರೂ ಇಲಾಖೆಗಳು ದಿನಗೂಲಿ ನೌಕರರಿಗೆ ಗಳಿಕೆ ರಜೆ ನಗದೀಕರಣ ಸೌಲಭ್ಯ ಕಲ್ಪಿಸಿದ್ದವು. ಅಂದರೆ, ವರ್ಷದ 30 ದಿನ ನಿಗದಿಯಾಗಿರುವ ಗಳಿಕೆ ರಜೆಯನ್ನು ಪಡೆಯದಿದ್ದಲ್ಲಿ ಎಷ್ಟು ದಿನ ರಜೆ ಬಾಕಿ ಉಳಿಸಿಕೊಳ್ಳ ಲಾಗಿತ್ತೋ ಅಷ್ಟು ದಿನಗಳ ವೇತನವನ್ನು ದಿನಗೂಲಿ ನೌಕರರಿಗೆ ನೀಡಲಾಗಿತ್ತು. ಆದರೆ, ಇದು ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮಕ್ಕೆ ವ್ಯತಿರಿಕ್ತವಾಗಿದೆ. ಹೀಗಾಗಿ ಗಳಿಕೆ ರಜೆ ನಗದೀಕರಣವನ್ನು ನಿಯಮ ಬಾಹಿರವಾಗಿ ಮಂಜೂರು ಮಾಡಿರುವ ಪ್ರಕರಣಗಳಲ್ಲಿ, ಮಂಜೂರು ಮಾಡಿ ಹೊರಡಿಸಿರುವ ಆದೇಶವನ್ನು ತಕ್ಷಣ ರದ್ದುಪಡಿಸಬೇಕು ಮತ್ತು ಈಗಾಗಲೇ ಪಾವತಿಸಿರುವ ಆರ್ಥಿಕ ಸೌಲಭ್ಯವನ್ನು ಅಂತಹ ದಿನಗೂಲಿ ನೌಕರರಿಂದ ವಸೂಲಿ ಮಾಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.