ರಕ್ತ ಪರೀಕ್ಷೆಗೆ ಹೆಚ್ಚು ಶುಲ್ಕ: ಆರೋಗ್ಯ ಇಲಾಖೆ ಎಚ್ಚರಿಕೆ
Team Udayavani, Aug 18, 2017, 7:35 AM IST
ಬೆಂಗಳೂರು: ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ಕಾಯಿಲೆ ಪತ್ತೆಯ ರಕ್ತ ಹಾಗೂ ಇತರ ಅಗತ್ಯ ಪರೀಕ್ಷೆಗಳಿಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಹಣ ಪಡೆದುಕೊಂಡರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಖಾಸಗಿ ಆಸ್ಪತ್ರೆಗಳು ರಕ್ತ ಪರೀಕ್ಷೆಗೆ 250 ರೂ.ಗಿಂತ ಮತ್ತು ರಕ್ತ ಹಾಗೂ ಇತರ ಪರೀಕ್ಷೆಗಳಿಗೆ 500 ರೂ.ಗಳಿಗಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಒಂದು ವೇಳೆ ಹೆಚ್ಚು ಹಣ ಪಡೆಯುತ್ತಿರುವುದು ಗೊತ್ತಾದರೆ ಅಂತಹ ಆಸ್ಪತ್ರೆಗಳ ವಿರುದಟಛಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ ಅಧಿನಿಯಮದಡಿ ಶಿಸ್ತು ಕ್ರಮ ಜರುಗಿಸಬೇಕು.
ಅಲ್ಲದೇ ಖಾಸಗಿ ಆಸ್ಪತ್ರೆಗಳು ಸರ್ಕಾರ ಸೂಚಿಸಿದ ಔಷಧಗಳನ್ನೇ ನೀಡುವ ನೀತಿಯನ್ನು ಅನುಸರಿಸುವಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ. ಡೆಂ à ಹಾಗೂ ಚಿಕೂನ್ ಗುನ್ಯಾ ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಅಂತರ್ ಇಲಾಖಾ ಸಭೆಯಲ್ಲಿ ತೆಗೆದುಕೊಳ್ಳಲಾದ ಎಲ್ಲ ನಿರ್ಣಯಗಳನ್ನು ಕಡ್ಡಾಯವಾಗಿ ಪಾಲಿಸಿ ಸೂಚಿಸಿದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ