ದೂರಿಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ 


Team Udayavani, Aug 20, 2017, 7:40 AM IST

Dinesh-Gundurao-700.jpg

ಬೆಂಗಳೂರು: ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ವಿಚಾರದಲ್ಲಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ನೀಡಿರುವ ದೂರಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಎಸಿಬಿಗೆ ದೂರು ನೀಡಿರುವ ವ್ಯಕ್ತಿಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ. ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿಯೇ ಷಡ್ಯಂತ್ರ ನಡೆಯುತ್ತಿದೆ. ಬಿಎಸ್‌ ವೈ ವಿರುದ್ಧ ಬಿಜೆಪಿಯವರೇ ದೂರು ದಾಖಲಿಸಿದ್ದಾರೆ.

ದೂರುದಾರನಿಗೆ ಬಿಜೆಪಿ ನಾಯಕರ ಜತೆ ಸಂಬಂಧ ಇದೆ ಎಂಬ ಮಾಹಿತಿ ಇದೆ ಎಂದು ತಿಳಿಸಿದರು. ಎಸಿಬಿ ಅಧಿಕಾರಿಗಳು ಕೆಎಎಸ್‌ ಅಧಿಕಾರಿಯನ್ನು ವಿಚಾರಣೆಗೆ ಕರೆಯುವುದು ಸಾಮಾನ್ಯ, ಪ್ರಕರಣದಲ್ಲಿ ಆರೋಪಿಯಾದವರನ್ನು ವಿಚಾರಣೆಗೆ ಕರೆಯುವುದು ಸಹಜ. ಈ ಬಗ್ಗೆ ಬಸವರಾಜೇಂದ್ರ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದ ಬಗ್ಗೆ ವಿಚಾರಣೆಯಾಗಲಿ. ಸತ್ಯ ಇದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಆರೋಪ ಸತ್ಯಕ್ಕೆ ದೂರ: ಯಡಿಯೂರಪ್ಪ ವಿರುದಟಛಿ ಡಿ ನೋಟಿಫಿಕೇಷನ್‌ ಪ್ರಕರಣ ದಾಖಲಿಸುವಲ್ಲಿ ರಾಜ್ಯ ಸರ್ಕಾರದ ಒತ್ತಡವಿದೆ‌ ಎಂಬ ಆರೋಪ ಸತ್ಯಕ್ಕೆ ದೂರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ್‌ ಹೇಳಿದ್ದಾರೆ. ಖಾಸಗಿ ವ್ಯಕ್ತಿ ಎಸಿಬಿಗೆ ದೂರು ಸಲ್ಲಿಸಿದ್ದರೆ, ಸರ್ಕಾರಕ್ಕೂ ಅದಕ್ಕೂ ಸಂಬಂಧ ಕಲ್ಪಿಸವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಬಂಧನಕ್ಕೆ ಆಗ್ರಹ: ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೇರಿ ಎಲ್ಲ ಐವರು ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ಜನ ಸಾಮಾನ್ಯರ ವೇದಿಕೆ ಅಧ್ಯಕ್ಷ ಡಾ. ಡಿ.ಅಯ್ಯಪ್ಪ ಒತ್ತಾಯಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದಾಖಲಾಗಿರುವ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಇದೀಗ ಎಫ್ಐಆರ್‌ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಡಿನೋಟಿಫೈ ಮಾಡಿಲ್ಲ ಎಂದು ವಾದಿಸುವ ಯಡಿಯೂರಪ್ಪ, ತಮ್ಮ ವಿರುದ್ಧ ಯಾರೇ ದೂರು ನೀಡಿದರೂ ಕೋರ್ಟ್‌ ಮೊರೆ ಹೋಗುತ್ತಾರೆ. ಅಕ್ರಮದಲ್ಲಿ ಭಾಗಿ ಆಗಿಲ್ಲ ಎಂದಾದರೆ ಎಸಿಬಿ ವಿಚಾರಣೆ ಎದುರಿಸಲಿ. ಮತ್ತೂಂದೆಡೆ ತಮ್ಮ ಪರ ವಕೀಲರನ್ನು ಎಸಿಬಿ ಕಳುಹಿಸಿ ದಾಖಲೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದರ ಉದ್ದೇಶವೇನು ಎಂದು ಅವರು ಪ್ರಶ್ನಿಸಿದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.