ಛಾಪಾ ಕಾಗದ ಹಗರಣದ ಕಿಂಗ್‌ಪಿನ್‌ ತೆಲಗಿ ಇನ್ನಿಲ್ಲ 

Team Udayavani, Oct 26, 2017, 5:12 PM IST

1 aa.jpg

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಬಹುಕೋಟಿ ರೂ.ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಕರೀಂ ಲಾಲ ತೆಲಗಿ ಗುರುವಾರ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ. 

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ತೆಲಗಿ  ಬಹು ಅಂಗಾಗ ವೈಫ‌ಲ್ಯದಿಂದ ಬಳಲುತ್ತಿದ್ದ. ಮೆದುಳು ಜ್ವರ ಹಿನ್ನೆಲೆಯಲ್ಲಿ ಹತ್ತು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಚಿಂತಾಜನಕ ಸ್ಥಿತಿಯಲ್ಲಿದ್ದ ತೆಲಗಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

4 ದಿನಗಳ ಹಿಂದೆ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ಮಗಳು ಹಾಗೂ ಅಳಿಯ ಸೇರಿ ಕುಟುಂಬ ಸದಸ್ಯರು ಆಸ್ಪತ್ರೆಯಲ್ಲೇ ಉಳಿದಿದ್ದರು. ಕಟುಂಬ ಸದಸ್ಯರಿಗೆ ಶವವನ್ನು, ಮರಣೋತ್ತರ ಪರೀಕ್ಷೆ ಮತ್ತು  ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಹಸ್ತಾಂತರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ನಕಲಿ ಛಾಪಾ ಕಾಗದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರೀಂಲಾಲ ತೆಲಗಿಯನ್ನು ಬಂಧಿಸಲಾಗಿತ್ತು. 12 ರಾಜ್ಯಗಳಲ್ಲಿ ಹತ್ತು ವರ್ಷ 72 ಕೇಂದ್ರಗಳ ಮೂಲಕ ಸಾವಿರಾರು ಕೋಟಿ ರೂ. ವಹಿವಾಟು ನಡೆಸಿದ್ದ ಆತನ ವಿರುದ್ಧದ ಆರೋಪ ಸಾಬೀತಾಗಿ ಶಿಕ್ಷೆ ವಿಧಿಸಿತ್ತು. 55 ವರ್ಷದ ಕರೀಂಲಾಲ ತೆಲಗಿ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 2001ರಲ್ಲಿ ಅಜೆರ್‌ ನಲ್ಲಿ ಬಂಧಿತನಾಗಿದ್ದ. ಬೆಳಗಾವಿ ಮೂಲದ ತೆಲಗಿ ಸೌದಿ ಅರಬ್‌ಗ ತೆರಳಿ ಟ್ರಾವೆಲ್‌ ಏಜೆಂಟಾಗಿ ಕೆಲಸ ಮಾಡಿ ನಂತರ ಮುಂಬೈಗೆ ಬಂದು ಭೂಗತ ಲೋಕದ ಸಂಪರ್ಕ ಗಳಿಸಿ ನಂತರ ನಾಸಿಕ್‌ನ ಸರ್ಕಾರಿ ಮುದ್ರಣಾಲಯದ ಕೆಲವು ಸಿಬ್ಬಂದಿ ಜತೆ ನಂಟು ಬೆಳೆಸಿ ನಕಲಿ ಛಾಪಾ ಕಾಗದ ಮುದ್ರಣ ದಂಧೆಯಲ್ಲಿ ತೊಡಗಿದ್ದ.

ರಾಜಕೀಯ ನಾಯಕರ ಬೆಂಬಲದಿಂದಲೇ ನಕಲಿ ಛಾಪಾ ಕಾಗದ ಮುದ್ರಣಕ್ಕೆ ಬೇಕಾದ ಕಾಗದ ಆಮದು ಮಾಡಿಕೊಳ್ಳುತ್ತಿದ್ದ. ನಾಸಿಕ್‌ ಮುದ್ರಣಾಲಯದಲ್ಲಿ ಸರ್ಕಾರಿ ಛಾಪಾ ಕಾಗದದ ಸೀರಿಯಲ್‌ ನಂಬರ್‌ಗಳ ಮಾಹಿತಿ ಪಡೆದು ಅದೇ ಸೀರಿಯಲ್‌ ನಂಬರ್‌ಗಳ ಛಾಪಾ ಕಾಗದ ಮುದ್ರಿಸಿ ಮುಂಬೈ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದ. ಅದೇ ರೀತಿ ದೇಶಾದ್ಯಂತ ಜಾಲ ಹೊಂದಿದ್ದ. 300ಕ್ಕೂ ಹೆಚ್ಚು ಜನರನ್ನು ಇದಕ್ಕಾಗಿಯೇ ನೇಮಿಸಿಕೊಂಡಿದ್ದ. ಬ್ಯಾಂಕ್‌, ವಿಮೆ ಕಂಪನಿ, ಷೇರು ವಹಿವಾಟು ಮಾಡುವವರಿಗೆ ಅಗತ್ಯವಾದ ಛಾಪಾ ಕಾಗದ ಪೂರೈಕೆ ಮಾಡುತ್ತಿದ್ದ. 1990ರಲ್ಲೇ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೂ ಅಂತಿಮವಾಗಿ 2001ರಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ ಕಲಾಸಿಪಾಳ್ಯಂ, ಕೆ.ಆರ್‌.ಮಾರುಕಟ್ಟೆ, ಹಲಸೂರು ಗೇಟ್‌, ಉಪ್ಪಾರಪೇಟೆ ಪೊಲೀಸ್‌ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿದ್ದವು.

ಇಕ್ಕಟ್ಟಿಗೆ ಸಿಲುಕಿದ್ದ ಸರ್ಕಾರ: ಹಗರಣ ಬೆಳಕಿಗೆ ಬಂದು ಕರೀಂಲಾಲ ತೆಲಗಿ ಬಂಧನವಾದಾಗ ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತವಿದ್ದು ಎಸ್‌.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದರು. ಆಗ ಸಚಿವ ಸಂಪುಟದ ಸಹೋದ್ಯೋಗಿ ರೋಷನ್‌ಬೇಗ್‌ ಅವರ ಸಹೋದರ ತೆಲಗಿ ಜತೆ ನಂಟು ಹೊಂದಿದ್ದ ಎಂಬ ಆರೋಪವೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಸರ್ಕಾರವೂ ಇಕ್ಕಟ್ಟಿಗೆ ಸಿಲುಕಿತ್ತು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.