ಯಕ್ಷಗಾನದ ಮೇಲೆ “ಉತ್ತರಕಾಂಡ’ ಪ್ರಭಾವ ?

Team Udayavani, Mar 19, 2017, 12:15 PM IST

uttara-khand.jpg

ಉಡುಪಿ: ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರ “ಉತ್ತರ ಕಾಂಡ’ ಕಾದಂಬರಿ ಮುಂದಿನ ದಿನಗಳಲ್ಲಿ ಯಕ್ಷಗಾನ ಅರ್ಥದಾರಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ| ಎಂ.ಎಲ್‌. ಸಾಮಗ ಅಭಿ ಪ್ರಾಯಪಟ್ಟರು. ಎಸ್‌.ಎಲ್‌. ಭೈರಪ್ಪ ಅವರ “ಉತ್ತರಕಾಂಡ’ ಕಾದಂಬರಿ ಕುರಿತು ರಥಬೀದಿ ಗೆಳೆಯರು, ಹಿರಿಯಡಕ ಸಂಸ್ಕೃತಿ ಸಿರಿ ಟ್ರಸ್ಟ್‌ ಎಂಜಿಎಂ ಕಾಲೇಜಿನ ಗೋವಿಂದ ಪೈ ಸಂಶೋಧನ ಕೇಂದ್ರದ ಧ್ವನ್ಯಾಲೋಕದಲ್ಲಿ ಶನಿವಾರ ಆಯೋಜಿಸಿದ “ಸಮೀಕ್ಷೆ-ಸಂವಾದ’ದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದು ಕಾವ್ಯವೋ, ಸ್ವರಚಿತ ವಿಮರ್ಶೆಯೋ ಎಂಬಂತೆ ಭೈರಪ್ಪನವರು ವಾಸ್ತವ ನೆಲೆಯಲ್ಲಿ ಚಿಂತನೆ ನಡೆಸಿದ್ದಾರೆ. ಕಾವ್ಯ, ಕಾದಂಬರಿಗಳಲ್ಲಿರುವಂತೆ ಅನೇಕ ಸಂಕೇತಗಳನ್ನು ಇಲ್ಲಿ ಕಾಣಬಹುದು. ಯಕ್ಷಗಾನ ಕಲಾವಿದರು ಕಾಲಕಾಲಕ್ಕೆ ಆಕರ ಗ್ರಂಥಗಳಿಂದ ಪ್ರಭಾವಿತರಾಗುವಂತೆ ಈ ಕಾದಂಬರಿಯೂ ಪರಿಣಾಮ ಬೀರಬಹುದು ಎಂದರು. 

ಇಷ್ಟವಾಗದ ಕಾದಂಬರಿ ಕಾಲಕ್ಕನುಸಾರವಾಗಿ ರಾಮಾಯಣಕ್ಕೆ ಹೊಸ ಹೊಸ ವಿಶ್ಲೇಷಣಾ ಗ್ರಂಥಗಳು ಬಂದಿವೆ. ಈಗ ಸ್ತ್ರೀವಾದ ಪ್ರಸ್ತುತವಿರುವುದರಿಂದ ಭೈರಪ್ಪ ನವರು ಸೀತೆಗೆ ಅನ್ಯಾಯವಾಗಿದೆ ಎಂದು ಕಥೆ ಹೆಣೆದಿದ್ದಾರೆ. ಪೋಲಂಕಿ ರಾಮಮೂರ್ತಿಯವರೂ ಬೇರೆ ತೆರನಾಗಿ ಬರೆದರು. ಇದೇ ರೀತಿ ಕವಿ ಮುದ್ದಣನೂ ಮನೋರಮೆ ಮೂಲಕ
ಚಿತ್ರೀಕರಿಸಿದ್ದ. ನನಗೆ ಕಾದಂಬರಿ ಇಷ್ಟವಾಗಲಿಲ್ಲ ಎಂದು ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ| ಮಹೇಶ್ವರಿ ಅಭಿಪ್ರಾಯಪಟ್ಟರು. 

ಸೀತೆ ಭೂಮಿ ಪುತ್ರಿಯಾದ ಕಾರಣ ಕೃಷಿ ಕಾಯಕದಲ್ಲಿ ತೊಡಗಿರುವುದು, ರಾಮನಿಗೆ ವಚನಪಾಲನೆ, ಧರ್ಮ ಮಾರ್ಗವೇ ತನಗಿಂತ ಹೆಚ್ಚು ಇಷ್ಟ ಎಂದು ಸೀತೆ ಹೇಳುವುದು, ಶಬರಿ-ಗುಹನಂತಹವರಿಗೆ ಆದರ್ಶವಾದ ರಾಮ ತನಗೆ ಮಾತ್ರ ನ್ಯಾಯ ಕೊಡಲಿಲ್ಲ ಎಂಬ ಮಾತುಗಳನ್ನು ಭೈರಪ್ಪ ಹೆಣೆದಿದ್ದಾರೆ ಎಂದರು. ಇಷ್ಟವಾದ ಕಾದಂಬರಿ “ಕವಲು’ ಕಾದಂಬರಿ ಬಳಿಕ ಭೈರಪ್ಪರ ಕಾದಂಬರಿಯನ್ನು ಓದಲೇ ಬಾರದೆಂದುಕೊಂಡಿದ್ದೆ. ಆದರೆ ಇದನ್ನು ಓದಿದ ಬಳಿಕ ನನಗೆ ಈ ಕಾದಂಬರಿ ಬಹಳ ಇಷ್ಟವಾಗಿದೆ. ಸ್ತ್ರೀ ಅಂತಃಕರಣವನ್ನು ಚೆನ್ನಾಗಿ ನಿರೂಪಿಸಿದ್ದಾರೆ ಎಂದು ತೆಂಕನಿಡಿಯೂರು ಕಾಲೇಜಿನ ಪ್ರಾಧ್ಯಾಪಕಿ ಡಾ| ನಿಕೇತನ ಹೇಳಿದರು. ರಥಬೀದಿ ಗೆಳೆಯರು ಅಧ್ಯಕ್ಷ ಪ್ರೊ| ಮುರಳೀಧರ ಉಪಾಧ್ಯ ಸ್ವಾಗತಿಸಿ ಪ್ರೊ| ಸುಬ್ರಹ್ಮಣ್ಯ ಜೋಷಿ ವಂದಿಸಿದರು. ಜಿ.ಪಿ. ಪ್ರಭಾಕರ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.