ಕುಮಟಾದಲ್ಲಿ ಗುಡ್ಡ ಕುಸಿತ : 3 ಮಕ್ಕಳ ದಾರುಣ ಸಾವು, ಹಲವರಿಗೆ ಗಾಯ
Team Udayavani, Jun 11, 2017, 3:26 PM IST
ಕುಮಟಾ : ಇಲ್ಲಿನ ದಿವಗಿ ಗ್ರಾಮದ ತಂಡರ್ಕುಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ 3 ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಭಾನುವಾರ ಸಂಭವಿಸಿದೆ.
ಹೆದ್ದಾರಿ ಕಾಮಗಾರಿಗಾಗಿ ಗುಡ್ಡವನ್ನು ಕಡಿಯಲಾಗಿದ್ದು , ಭಾರೀ ಮಳೆಯಿಂದಾಗಿ ಮೀನುಗಾರರ ಮನೆಯ ಮೇಲೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಅವಶೇಷಗಳಡಿ ಸಿಲುಕಿ ಮಕ್ಕಳಾದ ಭವ್ಯಾಅಂಬಿಗ(13), ಯತೀನ್(7)ಮತ್ತು 1.5 ವರ್ಷದ ಮಗು ಧನುಷ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಮಹಿಳೆಯರು ಸೇರಿದಂತೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಮಟಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ರಕ್ಷಣಾ ಕಾರ್ಯಕ್ಕೆ ಪೊಲೀಸರು, ಅಗ್ನಿ ಶಾಮಕ ದಳದ ಸಿಬಂದಿ ಮತ್ತು ಸ್ಥಳೀಯರು ನೆರವಾದರು.
ಕರಾವಳಿಯಲ್ಲಿ ಕಳೆದ 2 ದಿನಗಳಿಂದ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದ್ದು ನೆರೆ ಭೀತಿ ಎದುರಾಗಿದೆ.ರಾ.ಹೆ.66 ರಲ್ಲಿ ಹಲವೆಡೆ ಗುಡ್ಡ ಕುಸಿತ ಪ್ರಕರಣ ಗಳು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ