ಅಮೆರಿಕ ಅಧ್ಯಕ್ಷರಾಗಿ ನಾಳೆ ಟ್ರಂಪ್ ಪದಗ್ರಹಣ
Team Udayavani, Jan 19, 2017, 7:59 AM IST
ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅಮೆರಿಕದ 45ನೇ ಅಧ್ಯಕ್ಷ ಸ್ಥಾನದ ಚುಕ್ಕಾಣಿ ಹಿಡಿಯಲು ಕ್ಷಣಗಣನೆ ಆರಂಭಗೊಂಡಿದ್ದು, ಸಮಾರಂಭದಲ್ಲಿ 9 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜ.20ರ ಶುಕ್ರವಾರ ವಾಷಿಂಗ್ಟನ್ನಿನಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ವಿಶ್ವದ ಗಣ್ಯಾತಿಗಣ್ಯರು, ಸಹಸ್ರಾರು ಭಾರತೀಯರು ಪಾಲ್ಗೊಳ್ಳಲಿದ್ದಾರೆ. “ಅಮೆರಿಕವನ್ನು ಮತ್ತೂಮ್ಮೆ ಉನ್ನತಕ್ಕೆ ಏರಿಸೋಣ’ ಎಂಬ ಉದ್ಘೋಷದಲ್ಲಿ ಸಮಾರಂಭ ಆಯೋಜನೆಗೊಂಡಿದೆ.
ಸಮಾರಂಭ ವೀಕ್ಷಿಸಲು ಈಗ ಜನಸ್ತೋಮ ವಾಷಿಂಗ್ಟನ್ನತ್ತ ಲಗ್ಗೆ ಇಡತೊಡಗಿದೆ. ಟ್ರಂಪ್ ಪದಗ್ರಹಣ ಸಮಾರಂಭ ಹಿನ್ನೆಲೆಯಲ್ಲಿ ವಾಷಿಂಗ್ಟನ್ನಿನ ಸುತ್ತ ಮುತ್ತ 100 ವೃತ್ತಗಳಲ್ಲಿ ಸಂಚಾರ ನಿಷೇಧಿಸಲಾಗಿದೆ. 2.7 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳು ಓಡಾಡುವಂತಿಲ್ಲ. ಅಮೆರಿಕ ಗುಪ್ತ ಚರ ಏಜೆನ್ಸಿಯ 28 ಸಾವಿರ ಸಿಬಂದಿ ಈಗಾಗಲೇ ಕರ್ತವ್ಯ ನಿರತರಾಗಿದ್ದಾರೆ.
ಇವರೊಂದಿಗೆ ಸಾರಿಗೆ, ರಕ್ಷಣಾ ಸಿಬಂದಿ, ಎಫ್ಬಿಐ ಅಧಿಕಾರಿಗಳು, ಯುಎಸ್ ಪಾರ್ಕ್ ಪೊಲೀಸ್, ಕ್ಯಾಪಿಟಲ್ ಪೊಲೀಸ್, ನೌಕಾದಳದ ಸಿಬಂದಿ, ವಾಷಿಂಗ್ಟನ್ ಪೊಲೀಸರು ಬಿಗಿಭದ್ರತೆಗೆ ಕೈಜೋಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು