ಬ್ರಿಟನ್ ಸಚಿವೆ ವಿರುದ್ಧ ನೀರಜ್ ಪಾಟೀಲ್ ಸ್ಪರ್ಧೆ
Team Udayavani, May 12, 2017, 1:05 AM IST
ಲಂಡನ್: ಜೂ.8ರಂದು ನಡೆಯಲಿರುವ ನೈಋತ್ಯ ಲಂಡನ್ ಚುನಾವಣೆಗೆ ಲೇಬರ್ ಪಕ್ಷದಿಂದ ಕನ್ನಡಿಗ ನೀರಜ್ ಪಾಟೀಲ್ ಸ್ಪರ್ಧಿಸಲಿದ್ದಾರೆ. ನೀರಜ್ ಪಾಟೀಲ್ ಅವರ ಹೆಸರನ್ನು ಲೇಬರ್ ಪಕ್ಷ ಅಂತಿಮಗೊಳಿಸಿದೆ. ಪಾಟೀಲ್ ಅವರು ಕನ್ಸರ್ವೇಟಿವ್ ಪಕ್ಷದವರಾದ ಮತ್ತು ಈಗಿನ ಬ್ರಿಟನ್ ಶಿಕ್ಷಣ ಸಚಿವೆ ಜಸ್ಟಿನ್ ಗ್ರೀನಿಂಗ್ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ. ನೀರಜ್ ಪಾಟೀಲ್ ಅವರು ಲಂಡನ್ನ ಮಾಜಿ ಮೇಯರ್ ಆಗಿದ್ದು, ಮೂಲತಃ ಕರ್ನಾಟಕದ ಗುಲ್ಬರ್ಗದವರು. ವೈದ್ಯರಾಗಿರುವ ನೀರಜ್ ಪಾಟೀಲ್ ಅಪಘಾತ ಮತ್ತು ತುರ್ತು ಚಿಕಿತ್ಸೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕಳೆದ 15 ವರ್ಷಗಳಲ್ಲಿ ಬ್ರಿಟನ್ನ 41 ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಅಡಿ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ