ಮಂಗಳೂರು : ಜೀವನದಲ್ಲಿ ಆಡಂಬರ ಜಾಸ್ತಿಯಾಗುತ್ತಿದ್ದಂತೆ ಮಕ್ಕಳ ಯೋಚನಾ ಲಹರಿ ಬದಲಾಗುತ್ತಿದೆ. ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ಹೆತ್ತವರಿಂದ ಆಗಬೇಕಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅವರು ಅಭಿಪ್ರಾಯಪಟ್ಟರು.ಅವರು ತುಳು ಕೂಟ ಕುಡ್ಲ ಇದರ ವತಿಯಿಂದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶನಿವಾರ ನಡೆದ 'ಬಿಸುಪರ್ಬ' ಕಾರ್ಯಕ್ರಮ ಉದ್ಘಾಟಿಸಿದರು.ಸಂತ ಅಲೋಶಿಯಸ್ ಪ.ಪೂ. ಕಾಲೇಜಿನ ಉಪನ್ಯಾಸಕ ಡಾ| ಗಣೇಶ್ ಅಮೀನ್ ಸಂಕಮಾರ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ. ಕನಕ ಅಧ್ಯಯನ ಪೀಠದ ಸಂಯೋಜಕ ಡಾ| ಬಿ. ಶಿವರಾಮ ಶೆಟ್ಟಿ, ಬೆದ್ರ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಮಧುಮಾಲಾ ಉಪಸ್ಥಿತರಿದ್ದರು.ವಿಜಯಕುಮಾರ್ ಕೊಡಿಯಾಲ್‌ಬೈಲ್ ಹಾಗೂ ನವೀನ್ ಡಿ. ಪಡೀಲ್ ಅವರನ್ನು ಸಮ್ಮಾನಿಸಲಾಯಿತು. ಕದ್ರಿ ನವನೀತ ಶೆಟ್ಟಿ, ರವಿಕುಮಾರ್ ಕಡೆಕಾರ್ ಹಾಗೂ ಪ.ರಾ. ಶಾಸ್ತ್ರಿ ತೆಂಕಕಾರಂದೂರ್ ಅವರಿಗೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಹಾಗೂ 2011ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಅಶ್ವಿನಿ ಕೆ.ಎಸ್. ಕಟೀಲು ಮತ್ತು ಪ್ರಜ್ವಲ್ ಪಡೀಲ್ ಕುಡ್ಲ ಅವರಿಗೆ ತುಳು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಕೆ. ಚಂದ್ರಶೇಖರ ಶೆಟ್ಟಿ, ನಿಟ್ಟೆ ಶಶಿಧರ ಶೆಟ್ಟಿ ಉಪಸ್ಥಿತರಿದ್ದರು.ಬಿ. ದಾಮೋದರ ನಿಸರ್ಗ ಸ್ವಾಗತಿಸಿದರು.