Monday, May 20, 2013
Last Updated: 8:50:18 PM IST
  • ನಾನೆಲ್ಲಿರುವೆ:
  • ಮುಖಪುಟ ಪ್ರಾದೇಶಿಕ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
  • ನಂತೂರು ಜಂಕ್ಷನ್‌ನಲ್ಲಿ ಫ್ಲೈ ಓವರ್‌ ಅಗತ್ಯ: ಆಸ್ಕರ್‌
  • ನಂತೂರು ಜಂಕ್ಷನ್‌ನಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಅವರು ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

    • Udayavani | May 11, 2012

      ಮಂಗಳೂರು : ವಾಹನ ದಟ್ಟನೆ ಹಾಗೂ ಜನರ ಸುಗಮ ಸಂಚಾರಕ್ಕೆ ಅವಕಾಶ ಒದಗಿಸುವ ಉದ್ದೇಶದಿಂದ ನಂತೂರು ಜಂಕ್ಷನ್‌ನಲ್ಲಿ ಫ್ಲೈ ಓವರ್‌ ಆಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್‌ ಫೆರ್ನಾಂಡಿಸ್‌ ಅವರು ಹೇಳಿದರು.

      ನಂತೂರು ಜಂಕ್ಷನ್‌ಗೆ ಶುಕ್ರವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದ ಅನಂತರ ಅವರು ಪತ್ರಕರ್ತರ ಜೊತೆ ಮಾತನಾಡಿದರು.

      ಕೆಲವು ತಾಂತ್ರಿಕ ಸಮಸ್ಯೆಗಳ ನಿವಾರಣೆ ಅನಂತರ ಫ್ಲೈ ಓವರ್‌ ಕಾಮಗಾರಿ ಆರಂಭವಾಗುವುದು ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

      ತೀರ್ಪು ಸ್ವಾಗತಾರ್ಹ: ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ಕುರಿತು ತನಿಖೆ ನಡೆಸಲು ಸಿಬಿಐ ಗೆ ಒಪ್ಪಿಸಲು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪು ಸ್ವಾಗತಾರ್ಹ. ಭ್ರಷ್ಠರಿಗೆ ತಕ್ಕ ಪಾಠ ಕಲಿಸುವ ಈ ತೀರ್ಪು ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ನೀಡುತ್ತದೆ ಎಂದು ಅಭಿಪ್ರಾಯಪಟ್ಟರು.

      ಸಿದ್ದು ಅವರಿಗೆ ಮುಖ್ಯಮಂತ್ರಿ ಸ್ಥಾನ ಒದಗಿಸುವ ಕುರಿತು ಕುರುಬ ಜನಾಂಗದ ಸಮ್ಮೇಳನ ಮಾಡಿರುವ ಪ್ರತಿಕ್ರಿಯಿಸಿದ ಅವರು ಹೈಕಮಾಂಡ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

      ಶಾಸಕ ಕೆ. ಅಭಯಚಂದ್ರ ಜೈನ್‌, ಪಾಲಿಕೆ ಸದಸ್ಯ ನವೀನ್‌ ಡಿಸೋಜ, ಉಡುಪಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಂ. ಎ. ಗಫ‌ೂರ್‌, ಮುಖಂಡರಾದ ಸುಧೀರ್‌ ಟಿ. ಕೆ., ಮಹಾಬಲ ಮಾರ್ಲ ಮುಂತಾದವರು ಉಪಸ್ಥಿತರಿದ್ದರು.

    Share your views-post your Comment below
    blog comments powered by Disqus
    ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
    image
    • Copyright @ 2009 Udayavani.All rights reserved.
    • Designed & Hosted By 4cplus