Thursday, May 23, 2013
Last Updated: 6:31:38 PM IST
  • ನಾನೆಲ್ಲಿರುವೆ:
  • ಮುಖಪುಟ ರಾಜ್ಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಬೆಂಗಳೂರು ವಿವಿ ಮರ್ಯಾದೆ ಉಳಿಸಿ
    • ಸಿದ್ದರಾಮಯ್ಯ ಸಲಹೆ
      • Udayavani | Jul 27, 2012

        ಬೆಂಗಳೂರು : ಭಾರತ-ಪಾಕಿಸ್ತಾನದಂತೆ ವರ್ತಿಸುತ್ತಿರುವ ಕುಲಪತಿ ಹಾಗೂ ಕುಲಸಚಿವರಿಗೆ ಬುದ್ಧಿ ಹೇಳಿ ಬೆಂಗಳೂರು ವಿಶ್ವವಿದ್ಯಾಲಯ ಮರ್ಯಾದೆ ಉಳಿಸಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

        ವಿಧಾನಸಭೆಯಲ್ಲಿ ಶುಕ್ರವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ-ಕುಲಸಚಿವರು ಬೀದಿ ರಂಪಾಟದಲ್ಲಿ ತೊಡಗಿದ್ದಾರೆ. ವಿಶ್ವವಿದ್ಯಾಲಯದ ಘನತೆ ಹಾಳು ಮಾಡುತ್ತಿದ್ದಾರೆ. ಆ ಬಗ್ಗೆ ಗಮನ ನೀಡಿ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಅವರಿಗೆ ತಿಳಿಸಿದರು.

        ವಿಶ್ವವಿದ್ಯಾಲಯ ಕುಲಪತಿ ಎಂದರೆ ಹೇಗಿರಬೇಕು. ಕುವೆಂಪು, ಎಚ್‌.ನರಸಿಂಹಯ್ಯ ಅವರಂತ ಮೇಧಾವಿಗಳು ಕುಲಪತಿಗಳಾಗಿ ಕೆಲಸ ಮಾಡಿ ವಿಶ್ವವಿದ್ಯಾಲಯದ ಗೌರವ ಹೆಚ್ಚಿಸಿದ್ದಾರೆ. ಆದರೆ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆ ಸ್ಥಾನದಲ್ಲಿರುವವರು ಬೀದಿ ಜಗಳ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      • ಈ ವಿಭಾಗದಲ್ಲಿಯೂ ಇದೆ
      • Copyright @ 2009 Udayavani.All rights reserved.
      • Designed & Hosted By 4cplus