ಬೆಂಗಳೂರು: ಪತ್ರಿಕಾ ಛಾಯಾಗ್ರಾಹಕ ಎಸ್. ಉದಯ ಕುಮಾರ್ ಅನಾರೋಗ್ಯದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ನಿಧಾನರಾಗಿದ್ದಾರೆ.ಅವರಿಗೆ 35 ವರ್ಷ ವಯಸ್ಸಾಗಿತ್ತು. ಹಲವು ಕನ್ನಡ ದಿನ ಪತ್ರಿಕೆಗಳಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದಾರೆ. ಉದಯಕುಮಾರ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಕೊನೆಯುಸಿರೆಳೆದರು. ಮೃತರು ಪತ್ನಿ ಹಾಗೂ ನಾಲ್ಕು ತಿಂಗಳ ಮಗುವನ್ನು ಅಗಲಿದ್ದಾರೆ. ಉದಯ ಕುಮಾರ್ ಅಂತ್ಯಕ್ರಿಯೆ ಹುಟ್ಟೂರಾದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಭಾನುವಾರ ಸಂಜೆ ನೆರವೇರಿತು.