Wednesday, June 19, 2013
Last Updated: 12:47:20 AM IST
  • ನಾನೆಲ್ಲಿರುವೆ:
  • ಮುಖಪುಟ ರಾಜ್ಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಸರಣಿ ಅಪಘಾತ 6 ಮಂದಿ ಸಾವು
      • Udayavani | Feb 18, 2013

        ಕುಣಿಗಲ್‌: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ 6 ಮಂದಿ ಸಾವಿಗೀಡಾಗಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಕಾರು ಟಿಟಿ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿ 4 ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20 ಜನರಿಗೆ ಗಂಭೀರ ಗಾಯವಾಗಿದೆ. ಇದಕ್ಕೂ ಮುನ್ನ ಸಂಭವಿಸಿದ ಇನ್ನೊಂದು ಅಫ‌ಘಾತದಲ್ಲಿ ಟಾಟಾ ಇಂಡಿಕಾ ಕಾರೊಂದು ಟ್ರಾಫಿಕ್‌ ನಾಮ ಫ‌ಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿ, ಮೂರು ಮಂದಿ ತೀವ್ರ ಗಾಯಗೊಂಡಿರುವ ಘಟನೆ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಅಗ್ರಹಾರ ಗೇಟಿನ ಬಳಿ ಶನಿವಾರ ಸಂಜೆ 8 ಗಂಟೆಯ ಸುಮಾರಿನಲ್ಲಿ ಸಂಭವಿಸಿದೆ.

        ಮೃತರನ್ನು ಬೆಂಗಳೂರಿನ ವೆಂಕಟೇಶ (28), ಮಂಜುನಾಥ (32) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರು ಧರ್ಮಸ್ಥಳ ಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿರುವಾಗ ಈ ಘಟನೆ ನಡೆದಿದೆ.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      image
      • Copyright @ 2009 Udayavani.All rights reserved.
      • Designed & Hosted By 4cplus