ಮಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ ಅವರನ್ನು ಕರ್ನಾಟಕ ನಗರಾಡಳಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ತಿಳಿಸಿದ್ದಾರೆ.ವಿಧಾನ ಪರಿಷತ್ ಸದಸ್ಯ ಟಿ. ಜಾನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.