ಬೆಂಗಳೂರು: ಕಾವೇರಿ ಐ ತೀರ್ಪಿನ ಅಂತಿಮ ಅಧಿಸೂಚನೆ ಹೊರಡಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.ಸೋಮವಾರ ಕಾವೇರಿ ಐ ತೀರ್ಪು ಅಂತಿಮ ಅಧಿಸೂಚನೆ ಹೊರಡಿಸದಂತೆ ಆಗ್ರಹಿಸಿ ನಗರದಲ್ಲಿ ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆ ನೇತೃತ್ವ ವಹಿಸಿ ಅವರು ಮಾತನಾಡಿದರು.ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೇ ಕೂಗುತ್ತಾ ರೈಲ್ವೇ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್, ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತಿತರರನ್ನು ಪೊಲೀಸರು ಬಂಧಿಸಿದರು.