ಸಚಿವ, ಸಂಸದರಿಂದ ಗಣಿಗಾರಿಕೆ ಸ್ಥಳ ವೀಕ್ಷಣೆ

Team Udayavani, Feb 23, 2021, 2:52 PM IST

ಸಚಿವ, ಸಂಸದರಿಂದ ಗಣಿಗಾರಿಕೆ ಸ್ಥಳ ವೀಕ್ಷಣೆ

ಶ್ರೀರಂಗಪಟ್ಟಣ: ಭೂ ಮತ್ತು ಗಣಿ ವಿಜ್ಞಾನ ಇಲಾಖೆಸಚಿವ ಮುರುಗೇಶ್‌ ನಿರಾಣಿ, ಸಂಸದೆ ಸುಮಲತಾ ಅವರು ಕಾಳೇನಹಳ್ಳಿ ಗ್ರಾಮ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಲೂಕಿನ ಕಾಳೇನಹಳ್ಳಿ ಗ್ರಾಮದ ಬಳಿ ಹೆದ್ದಾರಿ ರಸ್ತೆ ಗುತ್ತಿಗೆ ಪಡೆದಿರುವ ಡಿಬಿಎಲ್‌ ಕಂಪನಿಯವರುಅಕ್ರಮವಾಗಿ ಕಾಡನ್ನು ಬಳಸಿಕೊಂಡು ಸುಮಾರು 10 ಎಕರೆಯಷ್ಟು ಭೂಮಿಯಲ್ಲಿ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿತ್ತು. ಈ ಗಣಿಗಾರಿಕೆ ಬಗ್ಗೆಸಂಸದೆ ಸುಮಲತಾ ಅವರು ಸಂಸತ್ತಿನಲ್ಲಿ ಗಣಿಗಾರಿಕೆ ಕುರಿತು ಚರ್ಚೆ ಮಾಡಿದ್ದರು.

ಶ್ರೀರಂಗಪಟ್ಟಣ, ಪಾಂಡವಪುರದ ಬೇಬಿಬೆಟ್ಟ, ಕೃಷ್ಣರಾಜ ಸಾಗರ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಸಿಡಿಮದ್ದುಸಿಡಿಸಿ ಗಣಿಕಾರಿಕೆ ಮಾಡಿದರೆ ಕೆಆರ್‌ರ್‌ಎಸ್‌ ಅಣೆಕಟ್ಟೆಗೆ ಅಪಾಯ ಇದೆ ಎಂಬಮಾಹಿತಿ ಇದ್ದು, ಹಲವುದೂರುಗಳು ಬಂದಿದ್ದವು.

ಅನುಮತಿ ಪಡೆಯದೇ ಗಣಿಗಾರಿಕೆ: ಮೈಸೂರು-ಬೆಂಗಳೂರು ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಗುತ್ತಿಗೆ ಪಡೆದಿರುವ ಡಿಬಿಎಲ್‌ ಕಂಪನಿಯವರು ಕಾಳೇನಹಳ್ಳಿ ಗ್ರಾಮದ ಬಳಿ ಯಾವುದೇ ಅನುಮತಿ ಪಡೆಯದೆ ನಡೆಸುತ್ತಿದ್ದಾರೆ. ಈಗಾಗಲೇ ಸುಮಾರು 1.38 ಲಕ್ಷ ಟನ್‌ ಕಲ್ಲು ಗಣಿಗಾರಿಕೆ ನಡೆಸಲಾಗಿದೆ. ಗಣಿಗಾರಿಕೆ ನಡೆಸಲು ಸರ್ಕಾರಕ್ಕೆ ಯಾವುದೇ ರಾಜಧನ ಕಟ್ಟಿಲ್ಲ. ಈ ಸ್ಥಳ ಆವರಿಸಿಕೊಳ್ಳಲು ಯಾರ ಅನುಮತಿಯು ಪಡೆಯದೆ ಇರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಅಧಿಕಾರಿಗಳು, ಜನಪ್ರತಿ ನಿಧಿಗಳು ಶಾಮೀಲಾಗಿರುವ ಶಂಕೆ ಇದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಆರ್‌.ಮುರುಗೇಶ್‌ ನಿರಾಣಿ ಹೇಳಿದರು.

ರಾಜಧನ ಪಾವತಿಸಿ: ಅರಣ್ಯಕ್ಕೆ ಸೇರಿದ ಜಾಗ ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಲಾಗಿರುವುದು ಕಣ್ಣೆದುರೇ ಕಾಣುತ್ತಿದೆ. ಸರ್ಕಾರಕ್ಕೆ ಸೇರಿದ ಕಾಮಗಾರಿಯಾದರೂ ರಾಜಧನ ಪಾವತಿಸಬೇಕು. ಸರ್ಕಾರಿ ಕೆಲಸವಾದ್ದರಿಂದ ಈ ಕಾಮಗಾರಿ ತ್ವರಿತವಾಗಿ ನಡೆಯಬೇಕಿರುವುದರಿಂದ ಕಳ್ಳತನ ಅಂತ ಹೇಳಲಿಕ್ಕಾಗಲ್ಲ. ಹಾಗಂತ ನಾವು ಯಾರ ಪರವು ಇಲ್ಲ ಎಂದರು.

ಅಕ್ರಮ ಸಕ್ರಮ: ರಾಜ್ಯದಲ್ಲೇ ಕೆಲವು ಕಡೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರಿಂದ ಮಾಹಿತಿ ಕಲೆ ಹಾಕಲಾಗಿದೆ. ಮಂಡ್ಯ ಜಿಲ್ಲೆಯಲ್ಲಿಯೂ ಅಕ್ರಮ ಗಣಿಗಾರಿಕೆ ಇರುವುದುಕಂಡು ಬಂದಿದೆ. ಅಕ್ರಮ ಗಣಿಗಾರಿಕೆಯಿಂದಸರ್ಕಾರಕ್ಕೆ ನಷ್ಟವಾಗುತ್ತಿದೆ. ಅಕ್ರಮವನ್ನು ಸಕ್ರಮ ಮಾಡಿ, ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ರಾಜಧನ ಪಾವತಿಸದವರ ವಿರುದ್ಧ ಕ್ರಮ: ಅಕ್ರಮ ಗಣಿಗಾರಿಕೆ ಮಾಡಿದವರಿಗೆ ದಂಡ ವಿಧಿಸಿ, ಅಲ್ಲದೇ ರಾಜಧನ ಪಾವತಿ ಮಾಡದವರ ವಿರುದ್ಧ ಕ್ರಮಕೈಗೊಂಡು ಅವರಿಂದ ರಾಜಧನ ವಸೂಲಿ ಮಾಡಲಾಗುವುದು. ಜಿಲ್ಲೆಯಲ್ಲಿ ನಡೆಯು ತ್ತಿರುವ ಅಕ್ರಮ ಗಣಿಗಾರಿಕೆಯ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಅಧಿಕಾರಿಗಳು ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಲೀಕರಿಗೆ ರಾಜಧನ ಕಟ್ಟಿ ಇಲ್ಲವೇ ಗಣಿಗಾರಿಕೆ ಸ್ಥಗಿತಗೊಳಿಸಿ, ಈ  ಸಂಬಂಧ ಅಧಿಕಾರಿಗಳು ಕ್ರಮ ವಹಿಸಬೇಕು. ಸರ್ಕಾರಈಗಾಗಲೇ ಅಕ್ರಮ ಮರಳು ಸಾಗಾಣಿಕೆ ಮಾಡಿದವರಿಗೆ ದಂಡ ವಿಧಿಸಿದ್ದು, ಕೇವಲ ಆಶ್ರಯಮನೆ ಕಟ್ಟುವವರಿಗೆ ಮಾತ್ರ ಮರಳು ಪಡೆಯಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಅಕ್ರಮವಾಗಿ ಎತ್ತಿನಗಾಡಿಯಲ್ಲಿ ಸಾಗಿಸಿ ಬೇರೆಯವರಿಗೆ ಮಾರಾಟ ಮಾಡುವವರಿಗೂ ದಂಡ ವಿಧಿಸಿದ್ದೇವೆ ಎಂದರು.

ತಹಶೀಲ್ದಾರ್‌ ರೂಪ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪುಷ್ಪಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ: ಸುಮಲತಾ :

ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುವುದೇ ನನ್ನ ನಿಲುವಾಗಿದೆ ಎಂದು ಸಂಸದೆ ಸುಮಲತಾ ಹೇಳಿದರು. ಸಂಸದೆಯಾಗಿ ಸಂಸತ್‌ ಪ್ರವೇಶ ಮಾಡಿದ ದಿನದಿಂದ ಇದು ನನ್ನ ನಿಲುವಾಗಿತ್ತು. ಕೆಆರ್‌ಎಸ್‌ ಡ್ಯಾಂ ಸುರಕ್ಷತೆಗಾಗಿ ಧ್ವನಿ ಎತ್ತಿದ್ದೇನೆ. ಜಲಾಶಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಬ್ಲಾಸ್ಟ್‌ ಮಾಡಿದರೆ ಅಣೆಕಟ್ಟೆಗೆ ತೊಂದರೆಯಾಗುತ್ತದೆ. ಆದ್ದರಿಂದ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಬೇಕು. ಕೊರೊನಾದಿಂದ ನಮ್ಮ ಜಿಲ್ಲೆಗೆ ನಷ್ಟವಾಗಿರುವುದರಿಂದ ಬೇರೆ ಬೇರೆ ಅನುದಾನ ಬರುತ್ತಿಲ್ಲ. ಜಿಲ್ಲಾ ಮೈನಿಂಗ್‌ ಫಂಡ್‌ ಇದೆ. ರಾಜಧನವನ್ನು ಅಭಿವೃದ್ಧಿಗೆ ಉಪಯೋಗಿಸಬಹುದು. ರಾಜಧನ ಕಟ್ಟದೆ ತಪ್ಪಿಸಿಕೊಳ್ಳವ ಕೆಲಸ ಮಾಡಬಾರದು ಎಂದರು.

ನಮ್ಮ ಜಿಲ್ಲೆಗೆ ಅನ್ಯಾಯ ಸಹಿಸಲ್ಲ: ರಾಯಲ್ಟಿ ಕಟ್ಟುವ ವಿಚಾರದಲ್ಲಿ ಗೊಂದಲ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಇದನ್ನ ತಡೆಯುವ ಉದ್ದೇಶ ನನ್ನದಲ್ಲ. ಆದರೆ, ನಮ್ಮ ಜಿಲ್ಲೆಗೆ ಅನ್ಯಾಯ ಆಗುತ್ತಿರುವುದನ್ನು ನೋಡುತ್ತ ಕೂರಲ್ಲ. ರೈತರು ಭೂಮಿ ಬಿಟ್ಟುಕೊಟ್ಟು ಹೆದ್ದಾರಿ ಕಾಮಗಾರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಅಂಥ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅಕ್ರಮ ಗಣಿಗಾರಿಕೆ ಬಗ್ಗೆ ಸಚಿವರಿಗೆ ತಿಳಿಸಿದ್ದೆ. ಆದ್ದರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜಧನ ಕಟ್ಟದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಹೋರಾಟದಲ್ಲಿ ಯಾರು ಏನೇ ಹೇಳಲಿ, ಯಾರೇ ಏನೇ ನನ್ನ ವಿರುದ್ಧ ಮಾತನಾಡಲಿ ನನ್ನ ಹೋರಾಟ ನಿಲ್ಲಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.