ಕೊನೆಯ ಪಂದ್ಯಕ್ಕೆ ಬುಮ್ರಾ ಇಲ್ಲ : ವೈಯಕ್ತಿಕ ಕಾರಣ, ತಂಡದಿಂದ ಬಿಡುಗಡೆ
Team Udayavani, Feb 28, 2021, 3:15 AM IST
ಅಹ್ಮದಾಬಾದ್: ಟೀಮ್ ಇಂಡಿಯಾದ ಯಾರ್ಕರ್ ಸ್ಪೆಷಲಿಸ್ಟ್ ಜಸ್ ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ಎದುರಿನ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿ ಯಲು ನಿರ್ಧರಿಸಿದ್ದಾರೆ. ಅವರನ್ನು ಬಿಸಿಸಿಐ ತಂಡದಿಂದ ಬಿಡುಗಡೆಗೊಳಿಸಿದೆ.
“ಜಸ್ಪ್ರೀತ್ ಬುಮ್ರಾ ಅವರ ಕೋರಿಕೆ ಮೇರೆಗೆ ಇಂಗ್ಲೆಂಡ್ ವಿರು ದ್ಧದ 4ನೇ ಟೆಸ್ಟ್ ಪಂದ್ಯದಿಂದ ಬಿಡು ಗಡೆಗೊಳಿಸಲಾಗಿದೆ. ಅವರು ವೈಯ ಕ್ತಿಕ ಕಾರಣಗಳಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದರು.
ಬುಮ್ರಾ ಅವರನ್ನು ಈಗಾಗಲೇ ಇಂಗ್ಲೆಂಡ್ ಎದುರಿನ ಸೀಮಿತ ಓವರ್ಗಳ ಸರಣಿಗಾಗಿ ಆರಿಸದೆ ವಿಶ್ರಾಂತಿ ನೀಡಲಾಗಿದೆ. ಇದೀಗ ಅಂತಿಮ ಟೆಸ್ಟ್ ಪಂದ್ಯದಿಂದಲೂ ಹೊರ ಗುಳಿಯಲಿದ್ದಾರೆ. ಆಗಸ್ಟ್ನಿಂದ ಜೈವಿಕ ಸುರಕ್ಷಾ ವಲಯದಲ್ಲೇ ಇದ್ದ ಬುಮ್ರಾ ಅವರು ಇದರಿಂದ ಬಿಡುಗಡೆ ಹೊಂದಲು ನಿರ್ಧರಿಸಿರಬಹುದು ಎಂದು ಊಹಿಸಲಾಗಿದೆ.
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಬುಮ್ರಾ 4 ವಿಕೆಟ್ ಉರುಳಿಸಿದ್ದರು. ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇವರಿಗೆ ವಿಶ್ರಾಂತಿ ನೀಡಲಾಯಿತು. ಅಹ್ಮದಾಬಾದ್ನಲ್ಲಿ ನಡೆದ 3ನೇ ಟೆಸ್ಟ್ನಲ್ಲಿ ಕಣಕ್ಕಿಳಿದರೂ ಯಾವುದೇ ವಿಕೆಟ್ ಪಡೆದಿರಲಿಲ್ಲ. ಇಲ್ಲಿ ಭಾರತದ ಸಿನ್ನರ್ 19 ವಿಕೆಟ್ ಉರುಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ