ಉಪ ಕದನದಲ್ಲಿ ಬಿಜೆಪಿಗೆ ಗೆಲುವು: ಚವ್ಹಾಣ

Team Udayavani, Mar 6, 2021, 5:58 PM IST

ಉಪ ಕದನದಲ್ಲಿ ಬಿಜೆಪಿಗೆ ಗೆಲುವು: ಚವ್ಹಾಣ

ಬೀದರ: ಮುಂಬರುವ ಬಸವಕಲ್ಯಾಣ ಸೇರಿದಂತೆ ವಿವಿಧ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾ ಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ನೀಡಿರುವ ಅವರು, ಜಗತ್ತಿಗೆ ಸಂಸತ್ತಿನ ಪರಿಕಲ್ಪನೆ ಪರಿಚಯಿಸಿದನಾಡು ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಿಸುವ ಐತಿಹಾಸಿಕ ಕಾರ್ಯಕ್ಕೆ ಮುಂದಾಗಿರುವುದು,ಅದಕ್ಕೆ 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ, ಶಿಲಾನ್ಯಾಸ ನೆರವೇರಿಸಿರುವುದು ಮುಖ್ಯಮಂತ್ರಿಗಳು ಈ ಭಾಗದ ಮೇಲಿಟ್ಟಿರುವ ಕಾಳಜಿ ತೋರಿಸುತ್ತದೆ. ನಾನು ಬಸವಕಲ್ಯಾಣ ಜನತೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಡಿಸಿಎಂ ಲಕ್ಷ್ಮಣ ಸವದಿ,ವಸತಿ ಸಚಿವ ವಿ. ಸೋಮಣ್ಣ ಸೇರಿದಂತೆ ಅನೇಕ ಸಚಿವರು ಪ್ರವಾಸ ಕೈಗೊಂಡು ಜನತೆಯ ಅಹವಾಲುಆಲಿಸುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ ಪಾಟೀಲ ಇತ್ತೀಚೆಗೆ ಬಸವಕಲ್ಯಾಣ ತಾಲೂಕಿನಲ್ಲಿ “ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ನಡೆಸಿ, ರೈತರ ಸಂಕಷ್ಟ ಆಲಿಸಿದ್ದರು. ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿ ಕಾರಕ್ಕೆಬಂದ ನಂತರ ಬಸವಕಲ್ಯಾಣದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದೆ ಎಂದಿದ್ದಾರೆ.

ಪ್ರಧಾನಿ ಮೋದಿ ನುಡಿದಂತೆ ಆಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅವರ ದೂರದೃಷ್ಟಿ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು ಈ ಚುನಾವಣೆಯಲ್ಲಿ ಪ್ರಭಾವ ಬೀರಲಿವೆ. ಬಸವಕಲ್ಯಾಣ ಜನತೆ ಮುಂದಿನ ಉಪ ಚುನಾವಣೆಯಲ್ಲಿ ಅಭಿವೃದ್ಧಿ ಪರವಾಗಿರುವ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿದೆ.

ಮಾ.7ರಂದು ಬಸವಕಲ್ಯಾಣದಲ್ಲಿ ಕೋಟೆಯಿಂದ ಅಕ್ಕಮಹಾದೇವಿ ಕಾಲೇಜು ಮೈದಾನದವರೆಗೆ ಬೃಹತ್‌ ರ್ಯಾಲಿ ಆಯೋಜಿಸಲಾಗಿದ್ದು, ಬಳಿಕ ಸಮಾವೇಶ ಜರುಗುವುದು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಡಿಸಿಎಂ ಲಕ್ಷ್ಮಣ ಸವದಿ, ವಸತಿ ಸಚಿವ ವಿ. ಸೋಮಣ್ಣ, ಸಂಸದ ಭಗವಂತ ಖೂಬಾ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ರಘುನಾಥರಾವ್‌ ಮಲ್ಕಾಪೂರೆ, ಕೆಎಸ್‌ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಬಿಜೆಪಿ ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್‌ ಠಾಕೂರ್‌, ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ ಹಾಗೂ ಇತರ ಮುಖಂಡರು ಬಸವಕಲ್ಯಾಣಕ್ಕೆ ಆಗಮಿಸುವರು. ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಚಿವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.