ಮಾರ್ಚ್ 13 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ : ಧ್ರುವ ನಾರಾಯಣ್
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್
Team Udayavani, Mar 10, 2021, 2:20 PM IST
ಶಿವಮೊಗ್ಗ : ಶಾಸಕ ಬಿ.ಕೆ.ಸಂಗಮೇಶ್ ಮತ್ತು ಕುಟುಂಬಸ್ಥರ ಮೇಲೆ ಕೇಸ್ ದಾಖಲು ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್, ಕ್ಷುಲ್ಲಕ ಕಾರಣಕ್ಕಾಗಿ ಸೆಕ್ಷನ್ 307 ಹಾಗೂ ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದಾರೆ. ಈಗಾಗಲೇ ಶಾಸಕರ ಪುತ್ರರನ್ನು ಬಂಧಿಸುವ ಕೆಲಸವನ್ನು ಸಹ ಮಾಡಿದ್ದಾರೆ. ಮಾರ್ಚ್ 13 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಸಭೆಯನ್ನು ನಡೆಸುತ್ತಿದ್ದೇವೆ ಎಂದರು.
ಶಿವಮೊಗ್ಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಸುದ್ದಿಗೋಷ್ಟಿಯಲ್ಲಿ ಹೇಳಿಕೆ ನೀಡಿದ್ದು, ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿಯಾಗ್ತಾರೆ. ಮಲ್ಲಿಕಾರ್ಜುನ್ ಖರ್ಗೆ, ಎಸ್.ಆರ್. ಪಾಟೀಲ್, ಜಿ.ಪರಮೇಶ್ವರ್ ಸೇರಿದಂತೆ ಎಲ್ಲಾ ಶಾಸಕರು ಸಹ ಭಾಗಿಯಾಗಲಿದ್ದಾರೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಸೈನ್ಸ್ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ ಎಂದರು.
ಬಿಜೆಪಿ ಸರ್ಕಾರ ಅಧಿಕಾರವಧಿಯಲ್ಲಿ ಕೇಸ್ ಹಾಕುವ ಮೂಲಕ ವಿರೋಧ ಪಕ್ಷದವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ವಿರೋಧ ಪಕ್ಷದವರು, ಪತ್ರಕರ್ತರು ಹಾಗೂ ಬಿಜೆಪಿ ವಿರುದ್ಧ ಮಾತನಾಡಿದರೇ ದೇಶದ್ರೋಹದ ಪಟ್ಟಕಟ್ಟಿ, ಕೇಸ್ ಹಾಕಲಾಗುತ್ತೇ. ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಸಭಾಪತಿಗಳು ಸಹ ನೊಂದ ಶಾಸಕರ ಪರ ಇರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು