ಗ್ರಾಮ ಪಂಚಾಯತ್‌ ಅಧಿಕಾರಿಗಳನ್ನು ಶೀಘ್ರ ನೇಮಿಸಿ

Team Udayavani, Mar 17, 2021, 7:00 AM IST

grama-panchhayath

ಸಾಂದರ್ಭಿಕ ಚಿತ್ರ

ರಾಜ್ಯದ ಒಟ್ಟು ಜನಸಂಖ್ಯೆಯ ಪೈಕಿ ಶೇ.61ರಷ್ಟು ಗ್ರಾಮೀಣ ಜನಸಂಖ್ಯೆ ಇದೆ. ಅರ್ಧಕ್ಕಿಂತ ಹೆಚ್ಚಿನ ಜನಸಂಖ್ಯೆಯ ಸ್ಥಳೀಯ ಆಡಳಿತ ಮತ್ತು ಅಭಿವೃದ್ದಿ ವಿಷಯಗಳು 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳ 93 ಸಾವಿರ ಗ್ರಾಮೀಣ ಚುನಾಯಿತ ಜನಪ್ರತಿನಿಧಿಗಳಿಂದ ನಿರ್ವಹಿಸ ಲ್ಪಡು ತ್ತದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆದು, ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮುಗಿದು ಪಂಚಾಯತ್‌ಗಳಲ್ಲಿ ಚುನಾಯಿತ ಜನಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿದೆ. ಅಲ್ಲದೇ ಕೇಂದ್ರ ಮತ್ತು ರಾಜ್ಯ ಸರಕಾರದ ಬಜೆಟ್‌ ಮಂಡನೆಯಾಗಿದ್ದು, ಎಪ್ರಿಲ್‌1ರಂದು ಹೊಸ ಬಜೆಟ್‌ ಅನುಷ್ಠಾನಕ್ಕೆ ಬರಲಿದೆ. ಅದಕ್ಕೆ ತಕ್ಕಂತೆ ಆಡಳಿತ ಮತ್ತು ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಿ, ಗ್ರಾಮೀಣ ಜನತೆಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಬೇಕಾಗಿದೆ.

ಆಡಳಿತ ಮತ್ತು ಅಭಿವೃದ್ಧಿ ಎರಡು ಚಕ್ರಗಳು ಸಮಬಲ ಮತ್ತು ಸಮವೇಗದಲ್ಲಿ ಚಲಿಸಬೇಕಾದರೆ ಚುನಾಯಿತ ಜನಪ್ರತಿಧಿಗಳ ಜತೆಗೆ ಅಧಿಕಾರಶಾಹಿಗಳ ಸಂಖ್ಯಾಬಲ ಸಹ ಸಮರ್ಪಕವಾಗಿರಬೇಕು. ಆಡಳಿತ ಯಂತ್ರದ ಜೀವಾಳ ಮತ್ತು ಸರಕಾರಿ ವ್ಯವಸ್ಥೆಯ “ಕಾಲಾಳುಗಳು’ ಈ ಅಧಿಕಾರಿ ಮತ್ತು ನೌಕರರು ಆಗಿರುತ್ತಾರೆ. ಪಂಚಾಯತ್‌ಗಳಲ್ಲಿ ಆಡಳಿತ ಯಂತ್ರ ಮುನ್ನಡೆಸಿ ಸರಕಾರದ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಜನರಿಗೆ ತಲುಪಿಸಬೇಕಾದ ಹೊಣೆಗಾರಿಕೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಪಂಚಾಯತ್‌ ಕಾರ್ಯದರ್ಶಿ, ಲೆಕ್ಕ ಸಹಾಯಕರ ಮೇಲಿದೆ. ವಿಪರ್ಯಾಸವೆಂದರೆ ಪ್ರಸ್ತುತ ಗ್ರಾಮ ಪಂಚಾಯತ್‌ಗಳಲ್ಲಿ ಈ ಹುದ್ದೆಗಳು ಸಾಕಷ್ಟು ಸಂಖ್ಯೆಯಲ್ಲಿ ಖಾಲಿ ಇವೆ. 6,011 ಗ್ರಾಮ ಪಂಚಾಯತ್‌ಗಳಲ್ಲಿ 746 ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, 1,049 ಗ್ರಾ.ಪಂ ಕಾರ್ಯದರ್ಶಿ, 505 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಸೇರಿ ಒಟ್ಟಾರೆ 2,300 ಹುದ್ದೆಗಳು ಖಾಲಿ. ಕರ ವಸೂಲಿಗಾರರು, ಜಾಡ ಮಾಲಿ ಗಳು, ನೀರುಗಂಟಿ­ಗಳು ಸೇರಿದಂತೆ 61 ಸಾವಿರ ಪಂಚಾಯತ್‌ ನೌಕರರು ಇದ್ದಾರೆ. ಇವರಲ್ಲಿ 20 ಸಾವಿರ ನೌಕರರು ವೇತನ ಸಮಸ್ಯೆ ಎದುರಿಸುತ್ತಿದ್ದಾರೆ. ಇದು ಪಂಚಾಯತ್‌ಗಳಲ್ಲಿ ನೇರವಾಗಿ ಆಡಳಿತ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರುತ್ತದೆ. ಸ್ವಂತ ಸಂಪನ್ಮೂಲ, ಕೇಂದ್ರದ 15ನೇ ಹಣಕಾಸು ಆಯೋಗ, ರಾಜ್ಯ ಹಣಕಾಸು ಆಯೋಗದ ಅನುದಾನ, ಶಾಸನಬದ್ಧ ಅನುದಾನಗಳು, ವಿಶೇಷ ಅನುದಾನ, ಉದ್ಯೋಗ ಖಾತರಿ, ಸ್ವತ್ಛ ಭಾರತ್‌ ಮುಂತಾದ ಸರಕಾರ ಪ್ರಾಯೋಜಕತ್ವದ ಯೋಜನೆಗಳ ಹಣ ಸೇರಿದಂತೆ ಒಂದು ವರ್ಷಕ್ಕೆ ಒಂದು ಪಂಚಾಯತ್‌ಗೆ ಕನಿಷ್ಠ 100 ಕೋಟಿ ರೂ. ಅನುದಾನ ಹರಿದು ಬರುತ್ತದೆ. ಇದರ ನಿರ್ವಹಣೆ, ರೂಪಿಸಲಾದ ಯೋಜನೆಗಳ ಅನುಷ್ಠಾನ, ಫ‌ಲಾನುಭವಿಗಳ ಆಯ್ಕೆ, ಗ್ರಾಮ ಸಭೆ ಆಯೋಜನೆ ಮತ್ತು ಇವುಗಳ ವರದಿಯನ್ನು ಮೇಲಿನ ಹಂತಕ್ಕೆ ಕಳುಹಿಸುವ ಕರ್ತವ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ ಮೇಲಿರುತ್ತದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ವರ್ಷ ಯಾವುದೇ ನೇಮಕಾತಿಗಳು ನಡೆದಿಲ್ಲ. ಪಂಚಾಯತ್‌ಗಳ 2,300 ಹುದ್ದೆಗಳ ಜತೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಆಡಳಿತ ವಿಕೇಂದ್ರೀ­ಕರಣದ ಕಲ್ಪನೆ ಮತ್ತು ಗ್ರಾಮ ಸ್ವರಾಜ್ಯದ ಆಶಯ ಪೂರ್ಣಗೊಳ್ಳ­ಬೇಕಾದರೆ ಖಾಲಿ ಹುದ್ದೆ ಭರ್ತಿಗೆ ಆದ್ಯತೆ ನೀಡಬೇಕು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಆರ್ಥಿಕ ಮಿತವ್ಯಯ ನಿರ್ಬಂಧದಿಂದ ವಿನಾಯಿತಿ ನೀಡಿ ಖಾಲಿ ಹುದ್ದೆ ಗಳ ಭರ್ತಿಗೆ ಸರಕಾರ ತ್ವರಿತವಾಗಿ ಕಾರ್ಯೋನ್ಮುಖವಾಗಬೇಕಿದೆ.

ಟಾಪ್ ನ್ಯೂಸ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.