ಹತ್ಯೆಗೈದು ರಸ್ತೆ ಅಪಘಾತ ಎಂದು ಬಿಂಬಿಸಿದ ಆರೋಪಿ :CCTVಯಿಂದ ಬಯಲಾಯ್ತು ಪತ್ನಿ, ಮಕ್ಕಳ ಸಂಚು!

Team Udayavani, Mar 18, 2021, 10:45 PM IST

ಹತ್ಯೆಗೈದು ರಸ್ತೆ ಅಪಘಾತ ಎಂದು ಬಿಂಬಿಸಿದ ಆರೋಪಿ :CCTVಯಿಂದ ಬಯಲಾಯ್ತು ಪತ್ನಿ, ಮಕ್ಕಳ ಸಂಚು!

ಬೆಂಗಳೂರು: ಜಮೀನು ವಿಚಾರವಾಗಿ ಪತ್ನಿಯೇ ಮಕ್ಕಳ ಜತೆ ಸೇರಿಕೊಂಡು ಪತಿಯ ಹತ್ಯೆಗೆ ಸುಪಾರಿ ಕೊಟ್ಟು, ರಸ್ತೆ ಅಫಘಾತದಿಂದ ಮೃತಪಟ್ಟಿದ್ದಾರೆ ಎಂದು ಬಿಂಬಿಸಿದ ಪ್ರಕರಣವನ್ನು ವೈಟ್‌ ಫೀಲ್ಡ್‌ ಸಂಚಾರ ವಿಭಾಗ ಪೊಲೀಸರು ಬೇಧಿಸಿದ್ದಾರೆ.

ಈ ಸಂಬಂಧ ವೈಟ್‌ಫೀಲ್ಡ್‌ ನಿವಾಸಿ ಅನಿಲ್‌ ಕುಮಾರ್‌ (38) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಸುಬ್ಬರಾಯಪ್ಪ (58) ಎಂಬವರನ್ನು ಹತ್ಯೆಗೈದಿದ್ದ. ಜ.21ರಂದು ಗಂಜೂರು ನಿವಾಸಿ ಸುಬ್ಬರಾಯಪ್ಪ ಗಂಜೂರಿ ನರಿಗೆ ಗ್ರಾಮದಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಅವರ ದ್ವಿಚಕ್ರವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಪರಿಣಾಮ ಸುಬ್ಬರಾಯಪ್ಪ ಬಲಗಾಲಿನ ಮೂಳೆ ಮುರಿದು, ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಸಂಬಂಧ ಸುಬ್ಬರಾಯಪ್ಪ ಪುತ್ರ ದೇವರಾಜ್‌ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಘಾತ ನಡೆದ ಸ್ಥಳ ಪರಿಶೀಲಿಸಿದಾಗ ಅಪಘಾತವಾಗಿರುವ ರಸ್ತೆಯಲ್ಲಿ ರಸ್ತೆ ಉಬ್ಬುಗಳು ಇದ್ದು, ಅಲ್ಲಿ ಅಪಘಾತವಾಗುವ ಸಂಭವ ಬಹಳ ಕಡಿಮೆ ಎಂಬುದು ಕಂಡು ಬಂದಿತ್ತು.

ಬಳಿಕ ಪೊಲೀಸರು ಸ್ಥಳೀಯರು ಹಾಗೂ ಮೃತರ ಸಂಬಂಧಿಕರ ಹೇಳಿಕೆಗಳನ್ನು ಪಡೆಯುವಾಗ ಕುಟುಂಬಸ್ಥರ ಗೊಂದಲದ ಹೇಳಿಕೆಗಳು ಅನುಮಾನಕ್ಕೆ ಕಾರಣವಾಗಿತ್ತು. ಬಳಿಕ ಕೊಲೆಗೈದು, ರಸ್ತೆ ಅಪಘಾತವೆಂದು ಬಿಂಬಿಸಿರುವ ಸಾಧ್ಯತೆಗಳಿವೆ ಎಂಬ ಅನುಮಾನಗೊಂಡು, ಈ ರಸ್ತೆಯಲ್ಲಿ ಹಾದುಹೋದ ವಾಹನಗಳ ಮಾಹಿತಿ ಸಂಗ್ರಹಿಸಲು ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.

ಇದನ್ನೂ ಓದಿ :ಐಫೋನ್‌ ತಯಾರಿಕಾ ಘಟಕ ಧ್ವಂಸ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು

ಸಿಸಿ ಕ್ಯಾಮೆರಾ ನೀಡಿದ ಸುಳಿವು: ಅಪಘಾತ ನಡೆದ ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮರಾ ಇರಲಿಲ್ಲ, ಅಪಘಾತ ನಡೆದ ಸ್ಥಳದ ಸಮೀಪದಲ್ಲಿರುವ ಸಿಸಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ನಂಬರ್‌ ಇಲ್ಲದ ಸೆಲ್ಫ್ ಡ್ರೈವಿಂಗ್‌ ಕಂಪೆನಿಗೆ ಸೇರಿದ ಮಹೀಂದ್ರ ಸ್ಕಾರ್ಪಿಯೋ ವಾಹನ ಅತಿವೇಗವಾಗಿ ಹಾದು ಹೋಗಿತ್ತು.

ಮತ್ತೂಂದೆಡೆ ಪ್ರಕರಣದ ತನಿಖೆ ವೇಳೆ ಮೃತ ಸುಬ್ಬರಾಯಪ್ಪ ಅವರಿಗೆ ಅವರೇಕಾಳು ವ್ಯಾಪಾರದ ಸಂಬಂಧ ವ್ಯಕ್ತಿಯೊಬ್ಬರು ಮೊಬೈಲ್ ಗೆ ಕರೆ ಮಾಡಿರುವ ಬಗ್ಗೆ ತನಿಖೆ ವೇಳೆ ಗೊತ್ತಾಗಿತ್ತು. ಆಗ ಸುಬ್ಬರಾಯಪ್ಪ ಅವರ ಸಿಡಿಆರ್‌ ಕರೆಗಳ ವಿವರಗಳನ್ನು ಪರಿಶೀಲಿಸಿದಾಗ ಕೊನೆಗೆ ಬಂದಿರುವ ಕರೆಯ ನಂಬರ್‌ ಸ್ವಿಚ್‌ಆಫ್‌ ಆಗಿತ್ತು.

ಅನಂತರ ಡ್ರೈವಿಂಗ್‌ ಕಂಪೆನಿಯವರನ್ನು ಸಂಪರ್ಕಿಸಿ ಪೊಲೀಸರು ವಿವರಗಳನ್ನು ಪಡೆದಾಗ ಅವರಲ್ಲಿ ಲಭ್ಯವಿದ್ದ ವಾಹನಗಳ ಜಿಪಿಎಸ್‌ ಚಲನವಲನಗಳ ಆಧಾರದ ಮೇಲೆ ಅವರ ಕಂಪೆನಿಯ ಮಹೀಂದ್ರ ಸ್ಕಾರ್ಪಿಯೋ ವಾಹನ ಅಪಘಾತ ನಡೆದ ಸ್ಥಳದಿಂದ ಹಾದು ಹೋಗಿರುವುದು ಪತ್ತೆಯಾಗಿತ್ತು. ಈ ಸ್ಕಾರ್ಪಿಯೋ ವಾಹನವನ್ನು ಬಾಡಿಗೆಗೆ ಪಡೆದಿದ್ದ ಹಾಗೂ ಮೃತರಿಗೆ ಕೊನೆಯ ಕರೆ ಮಾಡಿದ ಗ್ರಾಹಕ ಇಬ್ಬರು ಒಬ್ಬನೇ ಆಗಿದ್ದ ಅನಿಲ್ ಕುಮಾರ್‌ನನ್ನು ಪತ್ತೆ ಹಚ್ಚಿ ಮಾ.10ರಂದು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕೊಲೆಯ ರಹಸ್ಯ ಬಹಿರಂಗಗೊಂಡಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಇದನ್ನೂ ಓದಿ :ರಾಜ್ಯದ ಮೂರು ವಿಧಾನಸಭೆ ಉಪ ಚುನಾವಣೆಗೆ ‘ಕೈ’ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪತ್ನಿ, ಮಕ್ಕಳಿಂದಲೇ ಹತ್ಯೆಗೆ ಸುಪಾರಿ:
ಸುಬ್ಬರಾಯಪ್ಪ ಅವರನ್ನು ಕೊಲೆ ಮಾಡಲು ಅವರ ಪತ್ನಿ ಯಶೋಧಮ್ಮ ಹಾಗೂ ಮಗ ದೇವರಾಜ್‌ನಿಂದ 6 ಲಕ್ಷ ರೂ.ಗೆ ಅನಿಲ್‌ ಕುಮಾರ್‌ಗೆ ಸುಪಾರಿ ಕೊಟ್ಟಿದ್ದರು. ಅದುವರೆಗೆ ಅವರಿಂದ 4.40 ಲಕ್ಷ ರೂ. ಪಡೆದುಕೊಂಡಿದ್ದ ಆರೋಪಿ, ಯಶೋಧಮ್ಮ ಹಾಗೂ ಅವರ ಮಕ್ಕಳಾದ ಭರತ್‌, ದೇವರಾಜ್‌ ಸೂಚನೆ ಮೇರೆಗೆ ಸ್ನೇಹಿತರಾದ ಸುನೀಲ್ ಕುಮಾರ್‌, ನಾಗೇಶ್‌ ಹಾಗೂ ಧನುಶ್‌ ಎಂಬುವವರನ್ನು ಬಳಸಿಕೊಂಡು ಕೃತ್ಯ ಎಸಗಿದ್ದಾನೆ. ಅಲ್ಲದೆ, ಈ ಕೊಲೆಗೆ ಒಬ್ಬ ವಕೀಲರು ಕೊಲೆ ಯೋಜನೆ ರೂಪಿಸಿಕೊಟ್ಟಿದ್ದಾರೆ ಎಂದು ವಿಚಾರಣೆ ವೇಳೆ ಆರೋಪಿ ಅನಿಲ್‌ ಕುಮಾರ್‌ ಹೇಳಿಕೆ ನೀಡಿದ್ದಾನೆ.

ಅಲ್ಲದೆ ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಮುಳಬಾಗಿಲು ತಾಲೂಕಿನ ತಂಬಳ್ಳಿ ಬಳಿ ಇರುವ ಇಂಪ್ತಿಯಾಜ್ ಗ್ಯಾರೇಜ್‌ನಲ್ಲಿ 57 ಸಾವಿರ ರೂ.ಗಳಿಗೆ ದುರಸ್ತಿ ಮಾಡಿಸಿದ್ದ. ಆರೋಪಿಯ ಸ್ವ-ಇಚ್ಚಾ ಹೇಳಿಕೆ ಹಾಗೂ ತನಿಖೆಯಲ್ಲಿ ಕಂಡುಬಂದ ಸಾಕ್ಷ್ಯಾಧಾರಗಳಿಂದ ಈ ಅಪಘಾತ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ವೈಟ್‌ಫೀಲ್ಡ್ ವಿಭಾಗದ ವರ್ತೂರು ಪೊಲೀಸ್‌ ಠಾಣೆಗೆ ಪ್ರಕರಣವನ್ನುಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹತ್ಯೆಗೆ ಕಾರಣವೇನು ?
ಸುಬ್ಟಾರಾಯಪ್ಪ ಅವರು ವರ್ತೂರು ಬಳಿ ಒಂದು ಎಕರೆ ಜಮೀನು ಹೊಂದಿದ್ದು, ಈ ವಿಚಾರವಾಗಿ ಮಕ್ಕಳು ಜಗಳ ಮಾಡುತ್ತಿದ್ದರು. ತಂದೆ ಸುಬ್ಬರಾಯಪ್ಪ ಗಮನಕ್ಕೆ ಬಾರದಂತೆ ಮಕ್ಕಳು ಗಿಫ್ಟ್‌ ಡೀಡ್‌ ಮಾಡಿಕೊಂಡಿದ್ದರು. ಅದರಿಂದ ಆಕ್ರೋಶಗೊಂಡ ಸುಬ್ಬರಾಯಪ್ಪ ಪತ್ನಿ ಹಾಗೂ ಮಕ್ಕಳ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಲಾಗಿದೆ. ತಲೆಮರೆಸಿಕೊಂಡಿರುವ ಪತ್ನಿ ಯಶೋಧಮ್ಮ ಮತ್ತು ಮಕ್ಕಳಿಗಾಗಿ ವರ್ತೂರು ಠಾಣೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.