ಬಯಲು ಸೀಮೆಯಲ್ಲಿ ಕಪ್ಪು ಗೋಧಿ ಫ‌ಸಲು

ಉತ್ತರ ಭಾರತದ ಶೀತವಲಯದ ಅಪರೂಪದ ಬೆಳೆ |ಕೊರೊನಾ ಸೋಂಕು ಸೇರಿ ಹಲವು ರೋಗಗಳಿಗೆ ರಾಮಬಾಣ

Team Udayavani, Mar 19, 2021, 8:00 PM IST

Godi

ಗದಗ: ಉತ್ತರ ಭಾರತದ ಶೀತವಲಯದಲ್ಲಿ ಬೆಳೆಯುವ ಕಪ್ಪು ಗೋಧಿ ಯನ್ನು ಬಿಸಿಲ ನಾಡು ಗದಗ ಜಿಲ್ಲೆಯಲ್ಲೂ ಬೆಳೆಯಬಹುದು! ಹುಬ್ಬೇರಿಸಬೇಡಿ, ಇಂಥ ಸಾಧನೆಯನ್ನು ನರಗುಂದ ತಾಲೂಕಿನ ಶಿರೋಳ ಗ್ರಾಮದ ಮೃತ್ಯುಂಜಯ ವಸ್ತ್ರದ ಮಾಡಿದ್ದಾರೆ.

ಆನ್‌ಲೈನ್‌ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ಸಾವಿರಾರು ರೂ. ದರದಲ್ಲಿ ಮಾರಾಟವಾಗುವ “ಕಪ್ಪು ಬಂಗಾರ’ವನ್ನು ಉತ್ತರ ಭಾರತದ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಪಂಜಾಬ್‌ ಮತ್ತು ಹರ್ಯಾಣ ರಾಜ್ಯದ ವಿವಿಧೆಡೆ ಬೆಳೆಯಲಾಗುತ್ತದೆ.

ಕಳೆದ ಐದು ವರ್ಷಗಳಿಂದ ಧಾರವಾಡ ಕೃಷಿ ವಿವಿ ಕೂಡ ಕಪ್ಪು ಗೋಧಿ ಬೆಳೆ ಕುರಿತು ಸಂಶೋಧನೆ ನಡೆಸುತ್ತಿದೆ. ಇದರ ಮಧ್ಯೆಯೇ ರೈತ ಮೃತ್ಯುಂಜಯ ವಸ್ತ್ರದ, ಸದ್ದಿಲ್ಲದೇ ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಕಪ್ಪು ಗೋಧಿ ಬೆಳೆದು ಧಾರವಾಡ ಕೃಷಿ ವಿವಿ ತಜ್ಞರಿಗೂ ಅಚ್ಚರಿ ಮೂಡಿಸಿದ್ದಾರೆ. ಬಿಕಾಂ, ಎಲ್‌ಎಲ್‌ಬಿ ಪದವೀಧರರಾಗಿರುವ ಮೃತ್ಯುಂಜಯ, ಧಾರವಾಡದ ಜೆಎಸ್‌ಎಸ್‌ ಶ್ರೀ ಮಂಜುನಾಥೇಶ್ವರ ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಹಾಗೂ ವಕೀಲರಾಗಿಯೂ ಸೇವೆ ಸಲ್ಲುತ್ತಿದ್ದಾರೆ. ಜತೆಗೆ ತಮ್ಮ ಸ್ವಗ್ರಾಮದಲ್ಲಿರುವ 13 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ, ಕಡಲೆ, ಕಪ್ಪು ಕಡಲೆ, ಸೋಂಪು ಮಿಶ್ರ ಬೆಳೆ ಬೆಳೆಯುತ್ತಿದ್ದಾರೆ. ಸದ್ಯ ಪ್ರಾಯೋಗಿ ಕವಾಗಿ ಕೇವಲ ಐದು ಗುಂಟೆಯಲ್ಲಿ ಕಪ್ಪು ಗೋಧಿ ಬೆಳೆದಿದ್ದು, ಈಗಾಗಲೇ ಕಟಾವಿಗೆ ಬಂದಿದೆ.

ಕಪ್ಪು ಗೋಧಿ ಪ್ರಯೋಜನಗಳೇನು?:

ಕಪ್ಪು ಗೋಧಿ ಸಕ್ಕರೆ ಕಾಯಿಲೆ, ರಕ್ತದೊತ್ತಡ ನಿವಾರಣೆ, ಕ್ಯಾನ್ಸರ್‌ ತಡೆಗಟ್ಟುತ್ತದೆ. ಬೊಜ್ಜು ಕರಗಿಸುತ್ತದೆ. ಮಾನವನಲ್ಲಿ ರೋಗ ನಿರೋಧ ಶಕ್ತಿ ಹೆಚ್ಚಿಸುತ್ತದೆ. ಕಪ್ಪು ಗೋಧಿ ಔಷ ಧೀಯ ಗುಣಗಳ ಜತೆಗೆ ಧಾರ್ಮಿಕ ಹಿನ್ನೆಲೆಯನ್ನೂ ಹೊಂದಿದೆ. ಉತ್ತರಾ ಖಂಡನಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಕಪ್ಪು ಗೋಧಿ ಯಿಂದ ಸಿಹಿ ಖಾದ್ಯ ತಯಾರಿಸಿ ಪರಮೇಶ್ವರನಿಗೆ ನೈವೇದ್ಯ ಅರ್ಪಿಸಲಾಗುತ್ತದೆ ಎನ್ನುತ್ತಾರೆ ಧಾರವಾಡ ಕೃಷಿ ವಿವಿ ಬೇಸಾಯ ಶಾಸ್ತ್ರದ ಪ್ರಾಧ್ಯಾಪಕ ಪ್ರೊ|ಯು.ಕೆ.ಹುಲಿಹಳ್ಳಿ.

ಈ ಭಾಗದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ಕೊರತೆ ಮತ್ತಿತರೆ ಕಾರಣಗಳಿಂದ ಚಿಲ್ಲರೆ ಮಾರುಕಟ್ಟೆಗೆ ಬರುತ್ತಿಲ್ಲ. ಆನ್‌ಲೈನ್‌ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ 700 ರೂ. ಗಳಿಂದ 1050 ರೂ.ವರೆಗೆ ಮಾರಾಟ ವಾಗುತ್ತಿದೆ. ಅಲ್ಲದೇ, ಇತ್ತೀಚೆಗೆ ಕೋವಿಡ್ ಸೋಂಕು ತಡೆಗಾಗಿ ಜನರು ರೋಗ ನಿರೋಧಕ ಶಕ್ತಿ ವೃದ್ಧಿಗಾಗಿ ಅನೇಕ ರೀತಿಯ ಕಷಾಯ ಹಾಗೂ ಪೌಷ್ಟಿಕ ಆಹಾರಕ್ಕೆ ಒತ್ತು ನೀಡುತ್ತಿದ್ದರಿಂದ ಕಪ್ಪು ಗೋಧಿ ಗೆ ಬೇಡಿಕೆ ಹೆಚ್ಚಿದೆ ಎಂಬುದು ಗಮನಾರ್ಹ.

ಲಾಕ್‌ ಡೌನ್‌ ಅವಧಿಯಲ್ಲಿ ಕೃಷಿಯಲ್ಲಿ ಹೊಸ ಪ್ರಯೋಗದ ಚಿಂತನೆ ನಡೆಸಿದಾಗ ಕಪ್ಪು ಗೋಧಿ ಬೆಳೆ ಗಮನಕ್ಕೆ ಬಂದಿತ್ತು. ಆನ್‌ಲೈನ್‌ನಲ್ಲೇ 4 ಕೆಜಿ ಬಿತ್ತನೆ ಬೀಜ ಖರೀದಿಸಿ ಪ್ರಾಯೋಗಿಕವಾಗಿ 5 ಗುಂಟೆಯಲ್ಲಿ ಬೆಳೆದಿದ್ದು, ಕನಿಷ್ಠ 2 ಕ್ವಿಂಟಲ್‌ ಬೆಳೆ ಬರುವ ನಿರೀಕ್ಷೆಯಿದೆ ಎನ್ನುತ್ತಾರೆ ರೈತ ಮೃತ್ಯುಂಜಯ ಪ್ರಭಾಕರ ವಸ್ತ್ರದ.

ವೀರೇಂದ್ರ ನಾಗಲದಿನ್ನಿ 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.