ಮಸ್ಕಿಯಲ್ಲಿ ವಿರೂಪಾಕ್ಷಪ್ಪ ಬೆಂಬಲಿಗರ ಕೈಗೆ ಕಮಲ


Team Udayavani, Mar 20, 2021, 7:19 PM IST

gjhjhjjhjhhjhjh

ಸಿಂಧನೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಮಸ್ಕಿಯಲ್ಲಿ ನಡೆಯಲಿರುವ ಬಹಿರಂಗ ಸಮಾವೇಶಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನೂ ಕೂಡ ಅದ್ಧೂರಿಯಾಗಿ ನೆರವೇರಿಸುವ ಉದ್ದೇಶದೊಂದಿಗೆ ತಾಲೂಕಿನ ಹಳ್ಳಿ-ಹಳ್ಳಿಯಿಂದಲೂ ಬೆಂಬಲಿಗರನ್ನು ಕರೆದೊಯ್ಯುವ ಸಿದ್ಧತೆ ನಡೆದಿದೆ.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಈಗಾಗಲೇ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿಎಂ ಹಾಗೂ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಂತರದಲ್ಲಿ ಅವರ ಬೆಂಬಲಿಗರನ್ನು ಬಹಿರಂಗವಾಗಿ ಬಿಜೆಪಿಗೆ ಸ್ವಾಗತಿಸಿಕೊಳ್ಳುವುದರ ಜತೆಗೆ ಮಸ್ಕಿ ಉಪಚುನಾವಣೆ ಅಭ್ಯರ್ಥಿಯ ಪರ ಬಹಿರಂಗ ಚುನಾವಣೆ ಪ್ರಚಾರದ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಎರಡು ಉದ್ದೇಶಗಳ ಹಿನ್ನೆಲೆಯಲ್ಲಿ ಆಯೋಜನೆಯಾಗಿರುವ ಕಾರ್ಯಕ್ರಮದತ್ತ ತಾಲೂಕಿನ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ತೆರಳಲು ಮುಂದಾಗಿದ್ದಾರೆ.

ಹಲವರು ಕಮಲದ ತೆಕ್ಕೆಗೆ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರ ಬೆಂಬಲಿಗರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶರಣಪ್ಪ, ಅಮರೇಶ ಅಂಗಡಿ, ಹಾಲುಮತ ಸಮಾಜದ ತಾಲೂಕು ಅಧ್ಯಕ್ಷ ಪೂಜಪ್ಪ ಪೂಜಾರಿ, ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ಬಸವಂತಪ್ಪ ಮಾನ್ವಿ, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಹಂಪಯ್ಯಸ್ವಾಮಿ, ಶರಣಪ್ಪ ಭೋವಿ ಸೇರಿದಂತೆ ಇತರೆ ಮುಖಂಡರು ಇದೇ ವೇಳೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಈ ನಡುವೆ ಜೆಡಿಎಸ್‌ ಮುಖಂಡ ತಿಮ್ಮಾರೆಡ್ಡಿ ಹುಡಾ, ಜೆಡಿಎಸ್‌ ವಿಕಲಚೇತನರ ಘಟಕದ ರಾಜ್ಯಾಧ್ಯಕ್ಷ ಆಗಿರುವ ದೇವೇಂದ್ರಗೌಡ ಅವರು ಕೆವಿಯವರನ್ನು ಹಿಂಬಾಲಿಸಿ, ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ರಾಜಕೀಯ ಸಂಚಲನ: ಮಸ್ಕಿಯಲ್ಲಿ ಆಯೋಜನೆಯಾಗಿರುವ ಬೃಹತ್‌ ಕಾರ್ಯಕ್ರಮ ಸ್ಥಳೀಯ ವಿಧಾನಸಭೆ ಕ್ಷೇತ್ರದ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ. ಬಸಾಪರು ಕೆ.ಸೇರಿದಂತೆ ಕೆಲವು ಕಡೆ ಕಾಂಗ್ರೆಸ್‌ ಹಿಡಿತವಿದೆ. ಅಲ್ಲಿನ ಚುನಾಯಿತ ಸದಸ್ಯರೇ ಈಗ ಮಾಜಿ ಸಂಸದರ ಜತೆಯಲ್ಲಿ ಬಿಜೆಪಿಯತ್ತ ಸೇರಲು ಮುಂದಾಗಿದ್ದಾರೆ. ಜೆಡಿಎಸ್‌ನ ಕೆಲವು ಮುಖಂಡರನ್ನು ಕೂಡ ಬಿಜೆಪಿಯತ್ತ ಸೆಳೆಯಲಾಗಿದೆ. ತಮ್ಮ ಬೆಂಬಲಿಗರು ಹಾಗೂ ಇತರೆ ಪಕ್ಷದಲ್ಲಿನ ಮುಖಂಡರನ್ನು ಕೂಡ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅವರು ಬಿಜೆಪಿಗೆ ಸೇರಿಸಿಕೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.