ಕೋವಿಡ್‌ 2ನೇ ಅಲೆ ಭೀತಿ : ಕಟ್ಟೆಚ್ಚರಕ್ಕೆ ಸೂಚನೆ


Team Udayavani, Mar 20, 2021, 7:33 PM IST

vbvbxcvb

ಯಾದಗಿರಿ: ಮಹಾರಾಷ್ಟ್ರದಲ್ಲಿ ಕೋವಿಡ್‌ ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕೋವಿಡ್‌-19 ಟಾಸ್ಕ್ ಫೋರ್ಸ್‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಕೋವಿಡ್‌-19 ಸೋಂಕು ಹರಡುವಿಕೆ ತಡೆಗಟ್ಟುವುದು ಮತ್ತು ಕೋವಿಡ್‌ 2ನೇ ಅಲೆಯ ಮುಂಜಾಗ್ರತ ಕ್ರಮ ಕೈಗೊಳ್ಳುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್‌-19 ಹರಡುವಿಕೆ ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ಮಾ. 1ರಿಂದ 15ರವರೆಗೆ ಕೇವಲ 20 ಸಕ್ರಿಯ ಪ್ರಕರಣಗಳು ಮಾತ್ರ ಕಂಡುಬಂದಿದ್ದು, ಕಳೆದ ನಾಲ್ಕು ದಿನಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗದ ಶಹಾಪುರ ತಾಲೂಕಿನ ಮುಡಬೂಳ, ಗುರುಮಠಕಲ್‌, ಯಾದಗಿರಿ ತಾಲೂಕಿನ ಯರಗೋಳ ಗ್ರಾಮಗಳಲ್ಲಿ ಸ್ಥಾಪಿಸಲಾದ ಚೆಕ್‌ ಪೋಸ್ಟ್‌ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ತೋರಿಸಬೇಕು ಎಂದು ತಿಳಿಸಿದರು.

ಮಹಾರಾಷ್ಟ್ರ ರಾಜ್ಯದಿಂದ ಬಸ್‌, ರೈಲು, ಖಾಸಗಿ ವಾಹನಗಳ ಮೂಲಕ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮೊದಲು ಮಾಡಿದ ಆರ್‌ಟಿಪಿಸಿಆರ್‌ ಪರೀಕ್ಷೆ ನೆಗೆಟಿವ್‌ ವರದಿಯೊಂದಿಗೆ ಆಗಮಿಸತಕ್ಕದ್ದು. ಆರ್‌ಟಿಪಿಸಿಆರ್‌ ಪರೀಕ್ಷೆ ನೆಗೆಟಿವ್‌ ವರದಿ ಇಲ್ಲದೇ ಜಿಲ್ಲೆಗೆ ಆಗಮಿಸಿದ ವ್ಯಕ್ತಿಗಳ ಆರ್‌ ಟಿಪಿಸಿಆರ್‌ ನೆಗೆಟಿವ್‌ ಫಲಿತಾಂಶ ಬರುವವರೆಗೂ ಕಡ್ಡಾಯವಾಗಿ ಕ್ವಾರಂಟೈನ್‌ ಕೊಠಡಿಯಲ್ಲಿ ಇರಿಸಬೇಕು ಎಂದು ಸೂಚಿಸಿದರು. ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿಯೊಂದಿಗೆ ಪ್ರಯಾಣಿಸುವ ಬಗ್ಗೆ ಬಸ್‌ಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು. ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್‌ ಸ್ಯಾನಿಟೈಜರ್‌ನ್ನು ಕಡ್ಡಾಯವಾಗಿ ಬಳಕೆ ಮಾಡಿ ಕೊರೊನಾದಿಂದ ಜಾಗೃತಿ ವಹಿಸಬೇಕೆಂದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್‌ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಇಂದುಮತಿ ಕಾಮಶೆಟ್ಟಿ, ಡಾ| ಅನ್ವರ್‌, ಡಾ| ಲಕ್ಷಿ ¾ಕಾಂತ್‌ ಸೇರಿದಂತೆ ಇತರರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.