ಕೋವಿಡ್ ಹೆಚ್ಚಳಕ್ಕೆ ಮಹಾರಾಷ್ಟ್ರ ತತ್ತರ

Team Udayavani, Mar 21, 2021, 7:30 AM IST

ಕೋವಿಡ್ ಹೆಚ್ಚಳಕ್ಕೆ ಮಹಾರಾಷ್ಟ್ರ ತತ್ತರ

ಒಂದೇ ದಿನ 27 ಸಾವಿರ ಕೇಸು | ಜನನಿಬಿಡ ಪ್ರದೇಶದಲ್ಲಿ ಸೋಂಕು ಪರೀಕ್ಷೆ

ಹೊಸದಿಲ್ಲಿ/ಮುಂಬಯಿ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿನ ಏರಿಕೆಗೆ ನಿಯಂತ್ರಣವೇ ಇಲ್ಲದಂತಾಗಿದೆ.  ಶನಿವಾರ ಒಂದೇ ದಿನ ಮಹಾರಾಷ್ಟ್ರದಲ್ಲಿ 27,126 ಹೊಸ ಪ್ರಕರಣಗಳು ಮತ್ತು 92 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಒಟ್ಟು ಕೇಸುಗಳ ಸಂಖ್ಯೆ 24.49 ಲಕ್ಷಕ್ಕೆ ಏರಿಕೆಯಾಗಿದೆ.

ಬೃಹನ್ಮುಂಬಯಿ ಮಹಾನಗರ ಪಾಲಿಕೆ, ತನ್ನ  ವ್ಯಾಪ್ತಿಯಲ್ಲಿರುವ ಮಾಲ್‌ಗ‌ಳು, ಬಸ್‌ನಿಲ್ದಾಣ ಸಹಿತ ಜನರು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕರಿಗೆ ಸೋಂಕು ಪತ್ತೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಒಟ್ಟು 47 ಸಾವಿರ ಸೋಂಕು ಪತ್ತೆ ಪರೀಕ್ಷೆಗೆ ಪಾಲಿಕೆ ಗುರಿ ಹಾಕಿದೆ.

ಮಹಾರಾಷ್ಟ್ರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮವೂ ಚುರುಕಾಗಿಯೇ ಮುಂದುವ ರಿದಿದೆ. ಶುಕ್ರವಾರ 1,89,130 ಡೋಸ್‌ ಲಸಿಕೆ ಹಾಕಲಾಗಿದೆ. ಜ.16ರ ಬಳಿಕ ಇದುವರೆಗೆೆ 40,96,898 ಮಂದಿಗೆ ಲಸಿಕೆ ಹಾಕಲಾಗಿದೆ.

ಆಫ್ಲೈನ್‌ನಲ್ಲಿ ಪರೀಕ್ಷೆ: 10, 12ನೇ ತರಗತಿಯ ವಾರ್ಷಿಕ ಪರೀಕ್ಷೆಗಳನ್ನು ಆಫ್ಲೈನ್‌ ಮೂಲಕ ನಡೆಸಲು ತೀರ್ಮಾನಿಸಲಾಗಿದೆ. ಅಂದರೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿಯೇ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್‌ ತಿಳಿಸಿದ್ದಾರೆ.

ಮತ್ತೆ 40,953 ಕೇಸುಗಳು: ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ ದೇಶದಲ್ಲಿ 40,953 ಹೊಸ ಪ್ರಕರಣ ಪತ್ತೆಯಾಗಿದೆ. 188 ಮಂದಿ ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,88, 394ಕ್ಕೆ ಏರಿಕೆಯಾಗಿದೆ ಮತ್ತು ಚೇತರಿಕೆ ಪ್ರಮಾಣ ಶೇ.96.12ಕ್ಕೆ ಕುಸಿದಿದೆ. ಮೂರು ದಿನಗಳ ಅವಧಿಯಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಕೇಸುಗಳು ದೃಢಪಟ್ಟಂತಾಗಿವೆ.

8-10 ತಿಂಗಳು ರಕ್ಷಣೆ: ಗುಲೇರಿಯಾ ಕೊರೊನಾ ಲಸಿಕೆಯಿಂದ 8-10 ತಿಂಗಳ ಕಾಲ ರಕ್ಷಣೆ ಸಿಗಲಿದೆ ಎಂದು ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ರಣದೀಪ್‌ ಗುಲೇರಿಯಾ ಹೇಳಿದ್ದಾರೆ. ದೇಶದಲ್ಲಿ ಲಸಿಕೆ ಪಡೆದುಕೊಂಡಿದ್ದ ರಿಂದ ಭಾರೀ ಪ್ರತಿಕೂಲ ಪರಿಣಾಮಗಳು ಕಂಡುಬಂದಿಲ್ಲ ಎಂದಿದ್ದಾರೆ.

ಸಚಿವ ಆದಿತ್ಯ ಠಾಕ್ರೆಗೆ ಸೋಂಕು :

ಮಹಾರಾಷ್ಟ್ರದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆಗೆ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್‌ ಮಾಡಿದ್ದು, ” ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿವೆ. ಪರೀಕ್ಷೆಯ ಬಳಿಕ ದೃಢಪಟ್ಟಿದೆ’ ಎಂದು ಬರೆದುಕೊಂಡಿದ್ದಾರೆ.

ಎಂಟು ರಾಜ್ಯಗಳಲ್ಲಿ ಹೆಚ್ಚು: ದಿಲ್ಲಿ ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಂಕು ಏರಿಕೆಯಾಗುತ್ತಿದೆ. ಈ ಪಟ್ಟಿಯಲ್ಲಿ ಕರ್ನಾಟಕ, ತಮಿಳುನಾಡು, ಪಂಜಾಬ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್‌, ಹರಿಯಾಣ, ದಿಲ್ಲಿ ಇದೆ. ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಸೋಂಕು ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಮದುವೆಯಂಥ ಕಾರ್ಯಕ್ರಮ ಕಾರಣ: ಸೋಂಕು ಹೆಚ್ಚಳಕ್ಕೆ ಮದುವೆಯಂಥ ಕಾರ್ಯಕ್ರಮಗಳು ಕಾರಣ. ಜನರು ಈಗ ಹೆಚ್ಚಿನ ಎಚ್ಚರಿಕೆ ವಹಿಸುತ್ತಿಲ್ಲ ಎಂದು ನೀತಿ ಆಯೋಗದ ಸದಸ್ಯ ಡಾ| ವಿ.ಕೆ.ಪೌಲ್‌ ತಿಳಿಸಿದ್ದಾರೆ. ಅದುವೇ ಸೂಪರ್‌ಸ್ಪ್ರೆಡ್‌ ಆಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.