ನೀರು ಉಳಿಸಿಸುವ ಕೆಲಸ ಸರ್ಕಾರವೇ ಮಾಡಬೇಕೆಂಬ ಭಾವನೆ ಹೋಗಬೇಕು: ಮೋದಿ ಕರೆ

ಮೋದಿ ಜತೆ ಧೂಪತಮಹಾಗಾಂವ್ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀನಿವಾಸ ಜೊನ್ನೆಕೇರಿ ಸಂವಾದ

Team Udayavani, Mar 22, 2021, 4:02 PM IST

ನೀರು ಉಳಿಸಿಸುವ ಕೆಲಸ ಸರ್ಕಾರವೇ ಮಾಡಬೇಕೆಂಬ ಭಾವನೆ ಹೋಗಬೇಕು: ಮೋದಿ ಕರೆ

ಬೀದರ್: ವಿಶ್ವ ಜಲ ದಿನಾಚರಣೆ ಪ್ರಯುಕ್ತ ಸೋಮವಾರ ನೀರಿನ ಸಂರಕ್ಷಣೆಯ ಮಹತ್ವದ ಕಾರ್ಯದಲ್ಲಿ ಯಶಸ್ಸು ಸಾಧಿಸಿರುವ ಜಿಲ್ಲೆಯ ಧೂಪತಮಹಾಗಾಂವ್ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀನಿವಾಸ ಜೊನ್ನೆಕೇರಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ‌ ಅವರು ವಿಡಿಯೋ ಸಂವಾದ ನಡೆಸಿದರು.‌

ದೇಶದ ಕೇವಲ ಐದು ಗ್ರಾ.ಪಂ ಅಧ್ಯಕ್ಷರ (ಸರಪಂಚ್) ಜತೆ ಪ್ರಧಾನಿ ನಡೆಸಿದ ಸಂವಾದದಲ್ಲಿ ಕರ್ನಾಟಕದಿಂದ ಧೂಪತಮಹಾಗಾಂವ್ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಒಬ್ಬರಾಗಿ ಭಾಗವಹಿಸಿದ್ದು ವಿಶೇಷ. ನೀರಿನ ಸಂರಕ್ಷಣೆಗಾಗಿ ತಮ್ಮ ಗ್ರಾ.ಪಂಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಪ್ರಧಾನಿ ಮೋದಿ ಅವರು, ಬರುವ ದಿನಗಳಲ್ಲಿ ಅಂತರ್ಜಲ‌ ವೃದ್ಧಿಸಲು ಅಗತ್ಯ ಸಲಹೆಗಳನ್ನು ಆಲಿಸಿದರು.

ಇದನ್ನೂ ಓದಿ:ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!

ಧೂಪತಮಹಾಗಾಂವ್ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಅವರು ಸುಮಾರು 6 ನಿಮಿಷಗಳ ಕಾಲ ಪ್ರಧಾನಿ ಜತೆಗೆ ಸಂವಾದ ನಡೆಸಿ, ಪಂಚಾಯತ್ ವ್ಯಾಪ್ತಿಯಲ್ಲಿನ ನೀರಿನ ಸಂರಕ್ಷಣೆಯ ಯಶೋಗಾಥೆಯನ್ನು ವಿವರಿಸಿದರು.‌ ಗ್ರಾಮದ ಸೂಕ್ತ ನಿರ್ವಹಣೆ ಇಲ್ಲದೇ ಹೂಳು ತುಂಬಿಕೊಂಡಿದ್ದ ಗೊಗ್ಗವ್ವೆ ಕೆರೆಯನ್ನು ನರೇಗಾದಡಿ ಕೆಲಸ ಮಾಡಿ, ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ನೀರಿನ ದಾಹ ತಣಿಸಲು ಆಗುತ್ತಿರುವ ಉಪಯುಕ್ತತೆ, ಇದಕ್ಕೆ ಗ್ರಾಮಸ್ಥರಿಂದ ದೊರೆತ ಸಹಕಾರ ಕುರಿತು ತಿಳಿಸಿದರಲ್ಲದೇ ಮಾದರಿ ಕಾರ್ಯವನ್ನು ಸುತ್ತಲಿನ ಗ್ರಾಮಸ್ಥರು ಬಂದು ವೀಕ್ಷಿಸುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೊದಿ, ನೀರು ಪ್ರಕೃತಿ ನಮಗಾಗಿ ನೀಡಿರುವ ಅಮೂಲ್ಯ ಸಂಪತ್ತು. ನೀರನ್ನು ಉಳಿಸಿ ಸಂರಕ್ಷಿಸುವ ಕೆಲಸ ಸರ್ಕಾರವೇ ಮಾಡಬೇಕು ಎಂಬ ಭಾವನೆ ಹೋಗಬೇಕು.‌ ಜನರ ಸಹಭಾಗಿತ್ವದಲ್ಲಿ ಅಗುವ ಪ್ರತಿ ಕಾರ್ಯ ಮಹತ್ವ ಪಡೆದುಕೊಳ್ಳುತ್ತವೆ. ಹಾಗಾಗಿ ಗ್ರಾಮದ ಜನರನ್ನು ವಿಶ್ವಾಸಕ್ಕೆ ಪಡೆದು ನೀರಿನ ಸಂರಕ್ಷಣೆ ಕೆಲಸ ಆಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: ಅಂತರ್ಜಲ ವೃದ್ಧಿಗೆ ದೀಕ್ಷೆ ತೊಟ್ಟ ಭಗೀರಥ

ಭಾರತದ ಅಭಿವೃದ್ಧಿ ಜಲ ಸೂತ್ರಗಳ ಮೇಲೆ ನಿಂತಿದೆ. ಹಾಗಾಗಿ ಮಳೆಗಾಲ ಆರಂಭ ಆಗುವ ಮೊದಲು ದೇಶದ ಪ್ರತಿ ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಸಭೆಗಳನ್ನು ನಡೆಸಿ, ಮಳೆ ನೀರನ್ನು ಹಿಡಿದಿಟ್ಟುಕೊಂಡು ಸಂರಕ್ಷಿಸಿ ಕೊಳ್ಳಲು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು.‌ ಇದಕ್ಕಾಗಿ ಸರ್ಕಾರದ ಸುತ್ತೋಲೆಗಳಿಗಾಗಿ ಕಾಯಬಾರದು. ಎಲ್ಲರೂ ಗಂಭೀರತೆ ಅರಿತು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಸಂವಾದದಲ್ಲಿ ಕೇಂದ್ರ ಜಲ ಶಕ್ತಿ ಮಂತ್ರಾಲಯದ ಸಚಿವರು, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.