ಸಂಜು ಬಾಬಾ ಮೆಚ್ಚುಗೆ ಪಡೆದ ‘ಯುವರತ್ನ’ ಟ್ರೇಲರ್
Team Udayavani, Mar 23, 2021, 2:26 PM IST
ಇತ್ತೀಚೆಗಷ್ಟೇ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ “ಯುವರತ್ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ಗೆ ಸೋಶಿಯಲ್ ಮಿಡಿಯಾಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ “ಯುವರತ್ನ’ ಚಿತ್ರದ ಟ್ರೇಲರ್ ನೋಡಿರುವ ಮುನ್ನಬಾಯ್ ಖ್ಯಾತಿಯ ಬಾಲಿವುಡ್ ನಟ ಸಂಜಯ್ ದತ್ “ಯುವರತ್ನ’ ಟ್ರೇಲರ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಟ್ವಿಟ್ಟರ್ನಲ್ಲಿ “ಯುವರತ್ನ’ ಚಿತ್ರದ ಟ್ರೇಲರ್ ಲಿಂಕ್ ಶೇರ್ ಮಾಡಿರುವ ಸಂಜಯ್ ದತ್, “”ಯುವರತ್ನ’ ಟ್ರೇಲರ್ ಅದ್ಭುತವಾಗಿದೆ. ಇಡೀ “ಯುವರತ್ನ’ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹಾರೈಸಿದ್ದಾರೆ.
ಇದನ್ನೂ ಓದಿ:ತಲೈವಿ ಟ್ರೈಲರ್ : ಜಯಲಲಿತ ಅವರ ಜೀವನ ಪಯಣ : ಸಿನೆಮಾ ಟು ರಾಜಕಾರಣ
ಈ ಹಿಂದೆ ಕೂಡ ಟೀಸರ್ ರಿಲೀಸ್ ಸಂದರ್ಭದಲ್ಲೂ ಸಂಜಯ್ ದತ್, “ಯುವರತ್ನ’ದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು.
ಅಂದಹಾಗೆ, “ಯುವರತ್ನ’ ಚಿತ್ರ “ಹೊಂಬಾಳೆ ಫಿಲಂಸ್’ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿದ್ದು, ಇದೇ ಬ್ಯಾನರ್ನ ಮುಂಬರುವ ಚಿತ್ರ “ಕೆಜಿಎಫ್-2’ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್