ಕೋವಿಡ್ ಎರಡನೇ ಅಲೆಯ ಅಬ್ಬರ


Team Udayavani, Mar 24, 2021, 6:53 PM IST

ಕೋವಿಡ್ ಎರಡನೇ ಅಲೆಯ ಅಬ್ಬರ

ತುಮಕೂರು: ಶಾಲಾ ಕಾಲೇಜುಗಳಲ್ಲಿ ಮಕ್ಕಳ ಕಲರವ ಇದೆ. ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುತ್ತಿದೆ. ಕೋವಿಡ್ ಮಹಾಮಾರಿಯಿಂದ ಕಳೆದ ವರ್ಷ ಶಾಲೆ-ಕಾಲೇಜುಗಳಿಲ್ಲದೆ ಶಿಕ್ಷಣ ವಂಚಿತರಾಗಿದ್ದ ಮಕ್ಕಳಿಗೆ ಶಿಕ್ಷಣ ನೀಡಲು ಕೋವಿಡ್ವೈರಸ್‌ ತನ್ನ ಪ್ರಭಾವವನ್ನು ಕಡಿಮೆ ಮಾಡುತ್ತಲೇಜನವರಿಯಿಂದ ಆರಂಭವಾದ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿಅನುಸರಿಸಿ ತರಗತಿಗಳು ನಡೆಯುತ್ತಿವೆ. ಆದರೆ, ಈಗ ಮತ್ತೆ ಕೋವಿಡ್ ಮಹಾಮಾರಿ ಹೆಚ್ಚು ಜನರಲ್ಲಿ ಕಾಣಿಸಿಕೊಳ್ಳುತ್ತಿರುವುದು ಮಕ್ಕಳನ್ನುಶಾಲಾ-ಕಾಲೇಜಿಗೆ ಕಳುಹಿಸಲು ಹೆದರುವ ಪರಿಸ್ಥಿತಿ ಪೋಷಕರಲ್ಲಿ ಬಂದಿದೆ.

6ನೇ ತರಗತಿಯಿಂದ ಕಾಲೇಜುವರೆಗೆ ಎಲ್ಲ ತರಗತಿಗಳೂ ಸರಾಗವಾಗಿ ನಡೆಯುತ್ತಿವೆ. ಆದರೆ,ಈಗ ಮತ್ತೆ ಕೋವಿಡ್ ತನ್ನ ಆರ್ಭಟವನ್ನು ತೀವ್ರಗೊಳಿಸಿದೆ. ಶಾಲೆಗೆ ಬನ್ನಿ ಮಕ್ಕಳೇ ಮಹಾಮಾರಿ ಕೋವಿಡ್ ಓಡಿಸೋಣ ಮಕ್ಕಳನ್ನು ಓದಿಸೋಣಎಂಬ ಘೋಷ ವಾಕ್ಯದೊಂದಿಗೆ ಜ.1ರಂದು ಶಾಲಾ-ಕಾಲೇಜುಗಳು ಆರಂಭಗೊಂಡಿದ್ದವು. ಜಿಲ್ಲೆಯ ವಿದ್ಯಾರ್ಥಿಗಳು ಶಾಲೆಗಳತ್ತ ಸಂತಸದಿಂದಲೇಬಂದಿದ್ದರು. ಶಾಲೆಗೆ ಬಂದ ಮಕ್ಕಳನ್ನು ಜನಪ್ರತಿನಿಧಿಗಳು, ಜಿಪಂ ಸಿಇಒ, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಭವ್ಯವಾಗಿ ಸ್ವಾಗತಿಸಿದ್ದರು. ಅಂದು ಪ್ರಾರಂಭದಲ್ಲಿ ಶಾಲಾ-ಕಾಲೇಜಿಗೆ ಮಕ್ಕಳ ಸಂಖ್ಯೆ ಕಡಿಮೆಯಾದರೂ, ಆನಂತರ ಎಲ್ಲಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿತುಎಂದಿನಂತೆ ಶಾಲೆಗಳಲ್ಲಿ ಪಾಠ ಪ್ರವಚನಗಳು ನಡೆಯುತ್ತಿದ್ದವು.

ಕೋವಿಡ್ ನಡುವೆಯೇ ಶಿಕ್ಷಣ: ಕೋವಿಡ್‌ ಮಾರ್ಗಸೂಚಿಯನ್ವಯ ಎಲ್ಲ ಮುಂಜಾಗ್ರತಾ ಕ್ರಮಕೈಗೊಂಡು 6 ರಿಂದ 9ನೇ ತರಗತಿಗಳಿಗೆ ಪ್ರಾರಂಭದಲ್ಲಿವಿದ್ಯಾಗಮ ನಂತರ ಎಂದಿನಂತೆ ತರಗತಿ ಹಾಗೂ10ನೇ ಮತ್ತು 12ನೇ ತರಗತಿ ಪದವಿ ಕಾಲೇಜು ನಡೆದವು. ನಂತರ ಎಲ್ಲ ಕಾಲೇಜು, ವಿದ್ಯಾರ್ಥಿನಿಲಯಪ್ರಾರಂಭಗೊಂಡು ವಿದ್ಯಾರ್ಥಿಗಳು ಕೋವಿಡ್ ನಡುವೆಯೇ ಶಿಕ್ಷಣ ಕಲಿಯುತ್ತಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ನಗರ ಮತ್ತು ಗ್ರಾಮೀಣ ಭಾಗದ ಎಲ್ಲಶಾಲೆಗಳಲ್ಲಿ ಸ್ಯಾನಿಟೈಸ್‌ ಮಾಡಿ. ಇಡೀ ಶಾಲೆಯನ್ನು ಸ್ವಚ್ಛಗೊಳಿಸಿ ನೀರಿನ ವ್ಯವಸ್ಥೆ, ಶಾಲೆಗಳ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಮಾಡಿ ಶಾಲೆ ಸರಾಗವಾಗಿ ನಡೆಯುತ್ತಿವೆ. ಮಕ್ಕಳು ಶಾಲಾ-ಕಾಲೇಜಿಗೆ ಎಂದಿನಂತೆ ಬರುತ್ತಿದ್ದಾರೆ. ಆದರೆ,ಈಗ ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿರುವುದು ಮಕ್ಕಳ ಪೋಷಕರಿಗೆ ಆತಂಕ ಹೆಚ್ಚುವಂತೆ ಮಾಡಿದೆ.

ಆನ್‌ಲೈನ್‌ನಲ್ಲಿಯೂ ಪಾಠ ಮಾಡಲು ಕ್ರಮ:

ಕೋವಿಡ್ ಸಂದರ್ಭದಲ್ಲಿ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದಂತೆ ಈ ಶೈಕ್ಷಣಿಕ ವರ್ಷವನ್ನು ಯಶಸ್ವಿಯಾಗಿ ಪೂರೈಸಲು ಕ್ರಮಕೈಗೊಂಡಿದ್ದೇವೆ. ಮಕ್ಕಳು ಸಹ ಉತ್ಸಾಹದಿಂದಲೇ ಶಾಲೆಗೆ ಬರುತ್ತಿದ್ದಾರೆ. 2020ರಲ್ಲಿ ಹಲವಾರು ಸವಾಲು ನಾವೆಲ್ಲಾ ಎದುರಿಸಿದ್ದೇವೆ. ಈಗ ಬಂದಿರುವ ಎರಡನೇಅಲೆಯನ್ನು ಎದುರಿಸಬೇಕು. ಸರ್ಕಾರದ ನಿಯಮ ಪಾಲಿಸಬೇಕು, ಕಳೆದ ವರ್ಷ ಕೋವಿಡ್ ಮಹಾಮಾರಿಯ ನಡುವೆ ಬದುಕು ನಡೆಸಿ ಗೆದ್ದಿದ್ದೇವೆಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ ಮಾದರಿಯಲ್ಲಿ 6ನೇ ತರಗತಿಯಿಂದ ಶಾಲೆ ನಡೆಯುತ್ತಿವೆ. ಆನ್‌ಲೈನ್‌ನಲ್ಲಿಯೂ ಪಾಠ ಮಾಡಲುಕ್ರಮವಹಿಸಲಾಗಿದೆ. ಆದರೆ, ಶಾಲೆಗೆ ಬರುವ ಮಕ್ಕಳ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ ಎನ್ನುತ್ತಾರೆ ಶಿಕ್ಷಣ ಇಲಾಖೆ ಅಧಿಕಾರಿಗಳು.

ಮಾಸ್ಕ್ ಹಾಕಿಕೊಂಡೇ ಶಾಲೆಗೆ ಬನ್ನಿ  :  ಕೋವಿಡ್ ಮಹಾಮಾರಿ ತನ್ನ ಆರ್ಭಟವನ್ನು ತೀವ್ರಗೊಳಿಸುತ್ತಲೇ ಮತ್ತೆ ಶಾಲೆಗಳಲ್ಲಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಶೌಚಾಲಯ ಸ್ವತ್ಛತೆ ಕಾಪಾಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಲಾಗುತ್ತಿದೆ. ಈ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡು ಬಹಳ ಎಚ್ಚರಿಕೆಯಿಂದ ಶಾಲೆ ನಡೆಸಲಾಗುತ್ತಿದೆ. ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡೇ ಶಾಲೆಗೆ ಬರಬೇಕು ಎಂದು ಸೂಚಿಸಲಾಗಿದೆ. ಜ್ವರ, ಕೆಮ್ಮು, ನೆಗಡೆ, ತಲೆನೋವು ಬಂದ ಮಕ್ಕಳನ್ನು ತಕ್ಷಣ ಆಸ್ಪತ್ರೆಗೆ ತೋರಿಸಲು ಸೂಚನೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕಾಗಿ ಎಲ್ಲಮುಂಜಾಗ್ರತಾ ಕ್ರಮ ಆರೋಗ್ಯ ಇಲಾಖೆಯಿಂದ ಮಾಡಲಾಗಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ಇತರೆ ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕ್ರಮವಹಿಸಬೇಕು. ಡಾ.ಎಂ.ಬಿ.ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ತುಮಕೂರು.

ಕೋವಿಡ್ ವೈರಸ್‌ ಹೆಚ್ಚುತ್ತಿರುವ ಹಿನ್ನೆಲೆನಮ್ಮ ಶಾಲೆಯಲ್ಲಿ ಎಲ್ಲ ರೀತಿಯಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸಿದ್ದೇವೆ. ಮಾಸ್ಕ್ ಕಡ್ಡಾಯ ಮಾಡಿದ್ದೇವೆ. ಯಾವುದೇ ತೊಂದರೆ ಇಲ್ಲದೆ ಶಾಲೆ ನಡೆಯುತ್ತಿದೆ.ವಿದ್ಯಾರ್ಥಿಗಳ ಸಂಖ್ಯೆಯಲ್ಲಿಯೂ ಕಡಿಮೆಯಾಗಿಲ್ಲ. ಮಕ್ಕಳಲ್ಲಿ ಉತ್ಸಾಹ ಇದೆ. ಎಚ್‌.ಜಿ.ಮಹೇಶ್‌, ಮುಖ್ಯೋಪಾಧ್ಯಾಯ ವಿನಾಯಕ ಪ್ರೌಢಶಾಲೆ ಹಾಗಲವಾಡಿ. ಗುಬ್ಬಿ ತಾಲೂಕು.

ಕೋವಿಡ್ ಸೋಂಕಿತರ ಸಂಖ್ಯೆ ಎಲ್ಲ ಕಡೆ ಹೆಚ್ಚುತ್ತಿದೆ. ನಾವು ಕಾಲೇಜಿನಲ್ಲಿಸರ್ಕಾರದ ಮಾರ್ಗಸೂಚಿ ಅನ್ವಯ ಕ್ರಮ ಕೈಗೊಂಡಿದ್ದು, ಕಾಲೇಜಿಗೆ ಬರುವ ವಿದ್ಯಾರ್ಥಿ ನಿಯರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ಡಾ.ಟಿ.ಆರ್‌.ಲೀಲಾವತಿ, ಪ್ರಾಂಶುಪಾಲೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ತುಮಕೂರು.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.ಜನರು ತಪ್ಪದೇ ಮಾಸ್ಕ್ ಧರಿಸಿ ಸಾಮಾಜಿಕಅಂತರ ಕಾಯ್ದುಕೊಳ್ಳಬೇಕು. ಕೋವಿಡ್ ಹರಡದಂತೆ ಜಾಗೃತಿ ವಹಿಸಬೇಕು. ವೈ.ಎಸ್‌.ಪಾಟೀಲ, ಜಿಲ್ಲಾಧಿಕಾರಿ

 ಸೋಂಕು ಈಗ ಮತ್ತೆ ಹೆಚ್ಚುತ್ತಿದೆ. ಮಕ್ಕಳನ್ನು ಹೇಗೆ ಶಾಲೆಗೆ ಕಳುಹಿಸುವುದು ಎನ್ನುವ ಭಯ ಇದೆ. ಆದರೆ, ಏನೂ ಮಾಡಲು ಆಗುವುದಿಲ್ಲ. ನಮ್ಮ ಜಾಗೃತಿಯಿಂದ ನಾವು ಇದ್ದುಕೋವಿಡ್ ಎದುರಿಸಬೇಕಾಗಿದೆ. ಶಾಲೆ ಬಂದ್‌ ಮಾಡಿದರೆ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗುತ್ತದೆ. ಆದ್ದರಿಂದ ಅಗತ್ಯ ಕ್ರಮ ಕೈಗೊಂಡು ಮಕ್ಕಳಿಗೆ ತೊಂದರೆ ಆಗದಂತೆ ಗಮನ ನೀಡಬೇಕು. ಶಾಂತಾ, ಪೋಷಕರು ತುಮಕೂರು

 

ಚಿ.ನಿ.ಪುರುಷೋತ್ತಮ್‌.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.