ಚಿಕಿತ್ಸೆ ಪಡೆದರೆ ಕ್ಷಯ ರೋಗ ಗುಣಮುಖ

ಕ್ಷಯರೋಗ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

Team Udayavani, Mar 25, 2021, 7:14 PM IST

Gunamukha

ಯಾದಗಿರಿ: ಸಕಾಲದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದರೆ ಯಾವುದೇ ಕಾಯಿಲೆ ವಾಸಿಯಾಗಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ಹೇಳಿದರು. ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕ್ಷಯರೋಗ ಮುಕ್ತ ದಿನಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ಹಲವಾರು ದಿನಗಳಿಂದ ಕೆಮ್ಮು, ಜ್ವರದ ಬಾಧೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ ನಿಯಮಿತ ಅವಧಿವರೆಗೆ ಚಿಕಿತ್ಸೆ ಪಡೆದರೆ ಕ್ಷಯರೋಗ ಸಂಪೂರ್ಣ ಗುಣಪಡಿಸಬಹುದು ಎಂದರು.

ಕ್ಷಯರೋಗ ಮುಕ್ತ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮಿಸುತ್ತಿರುವ ಕಾರಣ ಜಿಲ್ಲೆ 27ನೇ ಸ್ಥಾನದಿಂದ 19ನೇ ಸ್ಥಾನಕ್ಕೆ ಬರಲು ಸಾಧ್ಯವಾಗಿದೆ. ಅಲ್ಲದೇ ಕೊರೊನಾ ಲಸಿಕೆ ನೀಡಿಕೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಶ್ರಮ ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದ್ದು, ರೋಗ ನಿರ್ಮೂಲನೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ರೋಗಿಗಳಲ್ಲಿ ತಾರತಮ್ಯ ತೋರದೇ ಕೈಜೋಡಿಸಿ ಸಹಕಾರದಿಂದ ಕಾರ್ಯ ಮಾಡಬೇಕಿದೆ ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಕ್ಷಯರೋಗ ನಿರ್ಮೂಲನೆಗೆ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಜಾಗೃತಿ ಅವಶ್ಯವಿದ್ದು, ಅಂಗನವಾಡಿ- ಆಶಾ ಕಾರ್ಯಕರ್ತೆಯರು ಕ್ಷಯರೋಗ ನಿರ್ಮೂಲನೆ ಶ್ರಮಿಸಬೇಕು ಎಂದರು.

ಸನ್ಮಾನ: ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕ್ಷಯರೋಗ ಬಗ್ಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿ, ಕಿರಿಯ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕ್ಷಯರೋಗ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ
ಸನ್ಮಾನ ಮಾಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಧಿಕಾರಿ ಡಾ| ಲಕ್ಷಿಕಾಂತ್‌, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ| ಭಗವಂತ ಅನ್ವರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗರಾಜ ಬಿ. ಪಾಟೀಲ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮುಬಷೀರ ಅಹ್ಮದ್‌ ಸಾಜೀದ್‌, ಐಎಂಎ ಅಧ್ಯಕ್ಷ ಸಿ.ಎಂ ಪಾಟೀಲ್‌ ಸೇರಿದಂತೆ ಇತರರು ಇದ್ದರು.

ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಚಾಲನೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಶಿಲ್ಪಾ ಶರ್ಮಾ ಚಾಲನೆ ನೀಡಿದರು. ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ, ಧೂಮಪಾನದಿಂದ ಆರೋಗ್ಯಕ್ಕೆ ಹಾನಿಕಾರಕ, ಕೆಮ್ಮುವಾಗ ಬಾಯಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಬೇಕು, ಕ್ಷಯ ರೋಗ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ, ಇವೇ ಮೊದಲಾದ ಭಿತ್ತಿ ಫಲಕ ಹಿಡಿದು ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ಸಾಗಿದರು. ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಿಂದ ನಗರಸಭೆ ರಸ್ತೆ ಮೂಲಕ ಗಾಂಧಿ  ವೃತ್ತದವರೆಗೂ ತಲುಪಿತು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.