ನಟಿ ಕಂಗನಾ ವಿರುದ್ಧದ ಎಫ್ಐಆರ್ ಆದೇಶ ರದ್ದುಪಡಿಸಿದ ಹೈಕೋರ್ಟ್
Team Udayavani, Mar 26, 2021, 6:10 AM IST
ಬೆಂಗಳೂರು: ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಆರೋಪದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿ 2020ರ ಆ.9ರಂದು ತುಮಕೂರಿನ ಜೆಎಂಎಫ್ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಖಾಸಗಿ ದೂರನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿದೆ.
ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ದಾಖಲಿಸಿರುವ ಖಾಸಗಿ ದೂರಿನ ಆಧಾರದ ಮೇಲೆ ಕ್ಯಾತಸಂದ್ರ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾ| ಎಚ್. ಪಿ ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಮಾತಿನಲ್ಲಿ ಹಿಡಿತ ಅಗತ್ಯ :
ಕಂಗನಾ ಅವರ ಟ್ವೀಟ್ ಕುರಿತು ಮೌಖಿಕವಾಗಿ ಪ್ರತಿಕ್ರಿಯಿಸಿದ ನ್ಯಾಯಪೀಠ, “ಪ್ರತಿಭಟನನಿರತರನ್ನು ಭಯೋತ್ಪಾದಕರು ಎಂದು ಕರೆಯುವುದಕ್ಕೆ ನೀವ್ಯಾರು? ಒಂದೊಮ್ಮೆ ನಿಮ್ಮನ್ನು ಯಾರಾದರೂ ಈ ರೀತಿ ಹೇಳಿದ್ದರೆ ನೀವೇನು ಮಾಡುತ್ತಿದ್ದಿರಿ’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿತು. “ಸೆಲೆಬ್ರೆಟಿಗಳು ಯಾವುದೇ ಹೇಳಿಕೆ ನೀಡುವ ಮೊದಲು ತಮ್ಮ ನಾಲಗೆ ಮೇಲೆ ಹಿಡಿತ ಇಟ್ಟುಕೊಳ್ಳಬೇಕು’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ