ಸರ್ಕಾರದ ಯೋಜನೆ ಸದ್ವಿನಿಯೋಗಕ್ಕೆ ಶ್ರಮಿಸಿ


Team Udayavani, Mar 27, 2021, 8:00 PM IST

ಭಘಭಃಘಃ‍್್

ಚಿಕ್ಕಮಗಳೂರು: ಮೀನುಗಾರಿಕೆ ಇಲಾಖೆಗೆ ಸಂಬಂಧಪಟ್ಟ ಜಮೀನುಗಳನ್ನು ಗುರುತಿಸಿ ಸರ್ವೇ ನಡೆಸಿ ಮಾಹಿತಿ ನೀಡಬೇಕು ಮತ್ತು ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ತರೀಕೆರೆ ತಾಲೂಕು ವ್ಯಾಪ್ತಿಯಲ್ಲಿರುವ ಭದ್ರಾ ಜಲಾಶಯದ ಕೆಳಭಾಗದ ಮೀನುಗಾರಿಕೆ ಇಲಾಖೆಗೆ ಸಂಬಂ ಧಿಸಿದ ಜಮೀನುಗಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದರು. ಸರ್‌ ಎಂ.ವಿಶ್ವೇಶ್ವರಯ್ಯ ಅವರ ಉತ್ತಮ ಯೋಜನೆಗಳಿಂದ ಭಾರತದ ದೇವಾಲಯಗಳೆಂದು ಕರೆಯಲ್ಪಡುವ ಜಲಾಶಯಗಳು ಇಂದಿಗೂ ಗುಣಮಟ್ಟದಲ್ಲಿದ್ದು, ಕೃಷಿಗೆ ನೀರಾವತಿ ಸೌಲಭ್ಯ ಮತ್ತು ವಿದ್ಯುತ್‌ ಒದಗಿಸುತ್ತಿವೆ. ಇಲಾಖೆ ಅಧಿಕಾರಿಗಳು ಭವಿಷ್ಯದ ದಿನಗಳನ್ನು ಗಮನದಲ್ಲಿಟ್ಟುಕೊಂಡು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ತಿಳಿಸಿದರು.

ಮೀನುಗಾರಿಕೆ ಇಲಾಖೆಗೆ ಸಂಬಂಧಪಟ್ಟ ಜಮೀನುಗಳನ್ನು ಸರ್ವೇಕಾರ್ಯ ನಡೆಸಿ ಗಡಿ ಗುರುತಿ ಇಲಾಖೆಗೆ ವರದಿ ನೀಡಬೇಕು. ಮುಂದಿನ ದಿನಗಳನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ನಡೆಸಿದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಸುಲಭವಾಗುತ್ತದೆ ಎಂದರು. ಮೀನುಗಾರಿಕೆ ಇಲಾಖೆಗೆ ಸಂಬಂಧಿಸಿದ ಜಮೀನಿನಲ್ಲಿ ಚಿತ್ರದುರ್ಗ ಹಾಗೂ ಹೊಸ ದುರ್ಗಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು, ಈ ಯೋಜನೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಅಜ್ಜಂಪುರ ಹಾಗೂ ಕಡೂರು ತಾಲೂಕಿಗೆ ಕುಡಿಯುವ ನೀರನ್ನು ಒದಗಿಸಲು ಶುದ್ಧನೀರಿನ ಘಟಕ ಸ್ಥಾಪನೆಗೆ ಜಲಾ ಶಯದ ಕೆಳಭಾಗದ ಈ ಸ್ಥಳವು ಸೂಕ್ತವಾಗಿದ್ದು, ಜಮೀನಿನ ಸರ್ವೇ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.

ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಕಾರ್ಯ ನಿರ್ವಹಿಸಬೇಕು. ಸರ್ಕಾರದಿಂದ ಮೀನುಗಾರಿಕೆ ಇಲಾಖೆಗೆ ಸಂಬಂಧಿ ಸಿದ ಸ್ಥಳವನ್ನು ಕುಡಿಯುವ ನೀರಿನ ಯೋಜನೆಗೆ ನೀಡಲು ಯಾವುದೇ ಸಮಸ್ಯೆಯಿಲ್ಲ. ಜಮೀನಿನ ಸರ್ವೆನಡೆಸಿ ಮಾಹಿತಿ ನೀಡಿದ್ದಲ್ಲಿ ಸ್ಥಳ ಗುರುತಿಸುವ ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದರು. ಜಿಪಂ ಸಿಇಒ ಎಸ್‌.ಪೂವಿತಾ ಮಾತನಾಡಿ, ಜಲಾಶಯದಿಂದ ವರ್ಷದಲ್ಲಿ ಒಂಬತ್ತು ತಿಂಗಳುಗಳ ಕಾಲ ಗ್ರಾವಿಟಿ ಮೂಲಕ ನೀರು ಬರುವುದರಿಂದ ಯಾವುದೇ ಪಂಪ್‌ ವ್ಯವಸ್ಥೆಗಳಿಲ್ಲದೆ ನೀರು ಸರಬರಾಜು ಮಾಡಬಹುದು. ಇನ್ನೂ ಉಳಿದ ಮೂರು ತಿಂಗಳು ಪಂಪ್‌ಗ್ಳ ಮೂಲಕ ನೀರನ್ನು ಸರಬರಾಜು ಮಾಡಬಹುದು. ಆದ್ದರಿಂದ ಈ ಸ್ಥಳ ಸೂಕ್ತವಾಗಿದೆ ಎಂದು ತಿಳಿಸಿದರು.

ತರೀಕೆರೆ, ಕಡೂರು ಹಾಗೂ ಅಜ್ಜಂಪುರ ತಾಲ್ಲೂಕಿಗೆ ಶುದ್ಧ ನೀರಿನ ಘಟಕ ಸ್ಥಾಪಿಸಿ ಕುಡಿಯುವ ನೀರನ್ನು ಸರಬರಾಜು ಮಾಡುವ ಯೋಜನೆಗೆ 28 ಗ್ರಾವಿಟಿ ಜಾಗ ಆಯ್ಕೆ ಮಾಡಿದ್ದು, ಸೂಕ್ತ ಯೋಜನೆಗಳ ಮೂಲಕ ಕಾಮಗಾರಿ ಕೈಗೊಳ್ಳಲಾಗುವುದು. ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಿಂದ ಕುಡಿಯುವ ನೀರಿನ ಯೋಜನೆಗೆ ಅನುದಾನ ಒದಗಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಪದ್ಮಾವತಿ ಸಂಜೀವ್‌ ಕುಮಾರ್‌, ತಾಲೂಕು ಉಪವಿಭಾಗಾ ಧಿಕಾರಿ ರೇಣುಕಾ ಪ್ರಸಾದ್‌, ಕಂದಾಯ ಇಲಾಖೆ ಅ ಕಾರಿ ಸೋಮಶೇಖರ್‌, ಮೀನುಗಾರಿಕೆ ಇಲಾಖೆಯ ಸಹಾಯಕ ಗುರುಚನ್ನಬಸವಣ್ಣ, ಸಹಾ ಯಕ ಕಾರ್ಯಪಾಲಕ ಅಭಿಯಂತರ ಮೋಹನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.