ಕನ್ಸಲ್ಟಂಟ್‌ ನೇಮಕಕ್ಕೆ ಮುಂದಾದ ನಮ್ಮ ಮೆಟ್ರೋ

Team Udayavani, Mar 30, 2021, 11:18 AM IST

ಕನ್ಸಲ್ಟಂಟ್‌ ನೇಮಕಕ್ಕೆ ಮುಂದಾದ ನಮ್ಮ ಮೆಟ್ರೋ

ಬೆಂಗಳೂರು: “ನಮ್ಮ ಮೆಟ್ರೋ’ ಎರಡನೇ ಹಂತದಲ್ಲಿ ಬರುವ ನಿಲ್ದಾಣಗಳ ಪ್ಲಾಟ್‌ಫಾರಂಗಳಲ್ಲಿ ಸ್ಕ್ರೀನ್‌ ಡೋರ್‌ಗಳನ್ನು ಪರಿಚಯಿಸುವುದರ ಜತೆಗೆ ಸಿಬಿಟಿಸಿ ಸಿಗ್ನಲಿಂಗ್‌ ವ್ಯವಸ್ಥೆ ಪರಿಚಯಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ ಸಿಎಲ್‌) ಉದ್ದೇಶಿಸಿದ್ದು, ಈ ಸಂಬಂಧ ಸಮಾಲೋಚಕರ ನೇಮಕಕ್ಕೆ ಮುಂದಾಗಿದೆ.

ಜನರಲ್‌ ಕನ್ಸಲ್ಟಂಟ್‌ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಮೇ ಅಂತ್ಯಕ್ಕೆ ಇದು ಅಂತಿಮಗೊಳ್ಳುವ ನಿರೀಕ್ಷೆ ಇದೆ. ಆಯ್ಕೆಯಾಗುವ ಸಮಾಲೋಚನಾ ಕಂಪೆನಿಯು ಎರಡನೇ ಹಂತದಲ್ಲಿ ಬರುವ ಗುಲಾಬಿ ಮತ್ತು ತಿಳಿನೀಲಿ ಮಾರ್ಗಗಳಲ್ಲಿನ 318 ಬೋಗಿಗಳು, ಸುಧಾರಿತ ಸಂವಹನ ಆಧಾರಿತ ರೈಲು ನಿಯಂತ್ರಣ (ಸಿಬಿಟಿಸಿ) ಸಿಗ್ನಲಿಂಗ್‌ ಮತ್ತು ಪ್ಲಾಟ್‌ಫಾರಂ ಸ್ಕ್ರೀನ್‌ಡೋರ್‌ ವ್ಯವಸ್ಥೆ ನಿರ್ವಹಣೆ ಮಾಡಲಿದೆ.

ನೆಲದಡಿ ನಿಲ್ದಾಣಗಳ ಪ್ಲಾಟ್‌ಫಾರಂಗಳಿಗೆ ಸ್ಕ್ರೀನ್‌ ಡೋರ್‌ಗಳನ್ನು (ಪಿಎಸ್‌ಡಿ) ಅಳವಡಿಸಲು ಉದ್ದೇಶಿಸಲಾಗಿದೆ. ಅದರಂತೆ ಡೇರಿ ವೃತ್ತದಿಂದ ನಾಗವಾರದವರೆಗಿನ 12 ನಿಲ್ದಾಣಗಳು ಕೆ.ಆರ್‌. ಪುರ- ವಿಮಾನ ನಿಲ್ದಾಣ ಮಾರ್ಗದಲ್ಲಿನ ಎರಡು ನೆಲದಡಿಯ ನಿಲ್ದಾಣಗಳಲ್ಲಿ ಈ ಬಾಗಿಲುಗಳನ್ನು ಅಳವಡಿಸಲಾಗುತ್ತದೆ. ಹಳಿ ಮತ್ತು ಪ್ಲಾಟ್‌ಫಾರಂ ನಡುವೆ ಇವುಗಳನ್ನು ಅಳವಡಿಸುವುದರಿಂದ ಅಹಿತಕರ ಘಟನೆಗಳನ್ನು ತಡೆಯಲು ಅನುಕೂಲ ಆಗುತ್ತದೆ. ರೈಲುಗಳು ಬಂದಾಗ ಮಾತ್ರ ಈ ಡೋರ್‌ಗಳು ಅಟೋಮೆಟಿಕ್‌ ಆಗಿ ತೆರೆದುಕೊಳ್ಳುತ್ತವೆ. ಮತ್ತೆ ರೈಲು ನಿರ್ಗಮಿಸುತ್ತಿದ್ದಂತೆ ಮುಚ್ಚಿಕೊಳ್ಳುತ್ತವೆ. ದೆಹಲಿ ಮತ್ತು ಚೆನ್ನೈನ ಮೆಟ್ರೋ ನಿಲ್ದಾಣಗಳಲ್ಲಿ ಈಗಾಗಲೇ ಇವುಗಳನ್ನು ಪರಿಚಯಿಸಲಾಗಿದೆ.

ಇನ್ನು ಚಾಲಕರಹಿತ ಮೆಟ್ರೋ ರೈಲುಗಳ ಸಂಚಾರ ವ್ಯವಸ್ಥೆಗೆ ಪೂರಕವಾಗಿ ಸಂವಹನ ಆಧಾರಿತ ಸುಧಾರಿತ ರೈಲು ನಿಯಂತ್ರಣ ವ್ಯವಸ್ಥೆ (ಸಿಬಿಟಿಸಿ) ಅಳವಡಿಸಲಾಗುತ್ತದೆ. ಇದರಿಂದ ಅತ್ಯಂತ ಕನಿಷ್ಠ ಅಂದರೆ ಎರಡು ನಿಮಿಷಗಳ ಅಂತರದಲ್ಲಿ ರೈಲುಗಳು ಕಾರ್ಯಾಚರಣೆ ಮಾಡಲು ಸಾಧ್ಯವಿದೆ ಎನ್ನಲಾಗಿದೆ. ಈ ನಿಟ್ಟಿನಲ್ಲೂ ಜನರಲ್‌ ಕನ್ಸಲ್ಟಂಟ್‌ ನೇಮಕ ನಡೆಯಲಿದೆ. ಅದೇ ರೀತಿ, ಕಾಳೇನ ಅಗ್ರಹಾರ- ಗೊಟ್ಟಿಗೆರೆ ನಡುವೆ ಸಂಚರಿಸಲಿರುವ ಆರು ಬೋಗಿಗಳ 16 ಕಾರು (96 ಬೋಗಿ) ಹಾಗೂ ಸಿಲ್ಜ್  ಬೋರ್ಡ್‌- ಕೆ.ಆರ್‌. ಪುರ- ವಿಮಾನ ನಿಲ್ದಾಣದಲ್ಲಿ ಮಾರ್ಗಗಳ ಆರು ಬೋಗಿಗಳ 21 ರೈಲು (126 ಬೋಗಿ)ಗಳನ್ನು ಖರೀದಿಸಲಾಗುತ್ತಿದೆ.

ಯಾವ ಮಾರ್ಗಕ್ಕೆ ಸಾಲ? :

ಎರಡನೇ ಹಂತದ ಯೋಜನಾ ಅನುಷ್ಠಾನಕ್ಕೆ ಜಪಾನ್‌ ಅಂತಾ ರಾಷ್ಟ್ರೀಯ ಸಹಕಾರ ಏಜೆನ್ಸಿ (ಜೈಕಾ) ಜತೆಗೆ ಕೇಂದ್ರ ಸರ್ಕಾರ 3,717 ಕೋಟಿ ರೂ. ಆರ್ಥಿಕ ನೆರವಿನ ಒಪ್ಪಂದಕ್ಕೆ ಅತ್ತ ಒಡಂಬಡಿಕೆ ಮಾಡಿಕೊಂಡ ಬೆನ್ನಲ್ಲೇ ಇತ್ತ ನಿಗಮವು ಜನರಲ್‌ ಕನ್ಸಲ್ಟಂಟ್‌ ನೇಮಕಕ್ಕೆ ಮುಂದಾಗಿದೆ. ನಾಗವಾರದಿಂದ ಗೊಟ್ಟಿಗೆರೆವರೆಗಿನ 22 ಕಿ.ಮೀ. ಹಾಗೂ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌. ಪುರ- ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಡುವಿನ ಸುಮಾರು 58 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಜೈಕಾ ಆರ್ಥಿಕ ನೆರವು ನೀಡಲಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.