ಕೋವಿಡ್ 2ನೇ ಅಲೆ ಹೆಚ್ಚು ಅಪಾಯಕಾರಿ


Team Udayavani, Apr 2, 2021, 3:07 PM IST

ಕೋವಿಡ್ 2ನೇ ಅಲೆ ಹೆಚ್ಚು ಅಪಾಯಕಾರಿ

ಧಾರವಾಡ: ಕೋವಿಡ್ ಮೊದಲಅಲೆಗಿಂತಲೂ ಎರಡನೇ ಅಲೆ ಹೆಚ್ಚು ಅಪಾಯಕಾರಿ ಆಗಿದ್ದು, ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಪೂರೈಸಿರುವ ಕೊವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ ಲಸಿಕೆಗಳಲ್ಲಿ ಯಾವುದಾದರೂ ಒಂದನ್ನು ಎಲ್ಲ ನಾಗರಿಕರು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.

ಡಿಸಿ ಕಚೇರಿಯಲ್ಲಿ ಗುರುವಾರ ಕೋವಿಡ್‌ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಲಸಿಕೆ ಹಾಕಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ವರ್ಧನೆಯಾಗಲಿದೆ. ಆರೋಗ್ಯಪೂರ್ಣ ಜೀವನಸುಲಭವಾಗಲಿದೆ ಎಂದರು.

ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸೇರಿದಂತೆಸಂಬಂ ಧಿಸಿದ ಎಲ್ಲ ಇಲಾಖೆಗಳು ಈ ಹಿಂದೆ ಕೋವಿಡ್ ನಿರ್ವಹಣೆಗೆ ತೋರಿದ ಉತ್ತಮ ಕಾರ್ಯಕ್ಷಮತೆಯನ್ನು ಈಗಲೂಚುರುಕುಗೊಳಿಸಬೇಕು. ಕೋವಿಡ್‌ ತಪಾಸಣೆ ಮತ್ತು ಲಸಿಕೆ ಹಾಕಲು ಸರ್ಕಾರ ನಿಗದಿಪಡಿಸುವ ಗುರಿ ಸಾಧಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮನೋಭಾವರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋವಿಡ್‌ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆ, ಕಿಮ್ಸ್‌ ಸೇರಿದಂತೆ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಕೋವಿಡ್‌ ಚಿಕಿತ್ಸೆಗೆ ಸಾಕಷ್ಟುಹಾಸಿಗೆ ಹಾಗೂ ವೆಂಟಿಲೇಟರ್‌ಗಳವ್ಯವಸ್ಥೆ ಸದಾ ಸಿದ್ಧವಿರಬೇಕು. ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ನಿರಂತರವಾಗಿ ಲಸಿಕೆಯನ್ನು ಪೂರೈಸುತ್ತಿದೆ. ಈ ಲಸಿಕೆಯನ್ನು ಅರ್ಹರಿಗೆ ತಲುಪಿಸಲುವ್ಯಾಪಕವಾಗಿ ಪ್ರಯತ್ನಗಳು ನಡೆಯಬೇಕು ಎಂದರು.

ಡಿಸಿ ನಿತೇಶ ಪಾಟೀಲ ಮಾತನಾಡಿ, ಫೆಬ್ರವರಿ ಕೊನೆ ಹಾಗೂ ಮಾರ್ಚ್‌ಮೊದಲ ವಾರದ ಅವ ಧಿಯಲ್ಲಿ ಇಡೀ ವರ್ಷದಲ್ಲಿಯೇ ಅತ್ಯಂತ ಕಡಿಮೆ ಅಂದರೆ 40 ಸಕ್ರಿಯ ಪ್ರಕರಣಗಳುಜಿಲ್ಲೆಯಲ್ಲಿದ್ದವು. ಕಳೆದ ಮೂರುವಾರಗಳ ಅವಧಿ ಯಲ್ಲಿ ಕೋವಿಡ್‌ವೇಗವಾಗಿ ಹರಡುತ್ತಿದೆ. ಸದ್ಯ ಜಿಲ್ಲೆಯಲ್ಲಿ328 ಸಕ್ರಿಯ ಪ್ರಕರಣಗಳಿವೆ. ಸೂಕ್ತ ಚಿಕಿತ್ಸೆನೀಡಲಾಗುತ್ತಿದೆ. ಈಗಾಗಲೇ ಸೋಂಕಿತರಸಂಪರ್ಕ ಪತ್ತೆ, ಆಸ್ಪತ್ರೆಗೆ ಸ್ಥಳಾಂತರಿಸಲುಆ್ಯಂಬುಲೆನ್ಸ್‌ ವಾಹನಗಳ ಏರ್ಪಾಡಿಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸಿ ತ್ವರಿತವಾಗಿ ಸ್ಪಂದಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ ಅವರು ಜಿಲ್ಲೆಯ ಕೋವಿಡ್‌ ತಪಾಸಣೆ, ಲಸಿಕೆ ಹಾಗೂ 2ನೇ ಅಲೆಯ ಪ್ರಕರಣಗಳ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಮಹಾನಗರ ಪಾಲಿಕೆ ಆಯುಕ್ತಡಾ| ಸುರೇಶ ಇಟ್ನಾಳ, ಹೆಸ್ಕಾಂ ಪ್ರಧಾನವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಪ್ರಭಾರ ಅಪರ ಜಿಲ್ಲಾಧಿಕಾರಿ ರುದ್ರೇಶ,

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ|ಎಸ್‌. ಎಂ. ಹೊನಕೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಸು ಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಡಾ| ಅಯ್ಯನಗೌಡ ಪಾಟೀಲ, ಡಾ| ಲಕ್ಷ್ಮೀಕಾಂತ ಲೋಕರೆ, ಡಾ| ಮಹೇಶ ಇನ್ನಿತರರಿದ್ದರು.

ಶೇ.99 ಪೊಲೀಸ್‌ ಸಿಬ್ಬಂದಿಗೆ ಲಸಿಕೆ; ಶ್ಲಾಘನೆ :

ಅವಳಿನಗರ ಪೊಲೀಸ್‌ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆಯ ಶೇ.99.05 ಸಿಬ್ಬಂದಿ ಕೋವಿಡ್‌ ನಿರೋಧಕ ಲಸಿಕೆ ಹಾಕಿಸಿಕೊಂಡಿರುವುದು ಪ್ರಶಂಸನೀಯ. ಈ ಕಾರ್ಯಕ್ಕೆ ಪ್ರೇರಣೆ ನೀಡಿದ ನಗರ ಪೊಲೀಸ್‌ ಆಯುಕ್ತ ಲಾಬೂರಾಮ, ಎಸ್‌ಪಿ ಪಿ. ಕೃಷ್ಣಕಾಂತ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹಾಗೂ ಡಿಸಿ ನಿತೇಶ್‌ ಪಾಟೀಲ ಸಭೆಯಲ್ಲಿ ಅಭಿನಂದಿಸಿದರು.

ಕೋವಿಡ್‌ ಎರಡನೇ ಅಲೆ ಪರಿಣಾಮವಾಗಿ ಜಿಲ್ಲೆಯಲ್ಲಿ ಎರಡು ಮರಣ ಪ್ರಕರಣಗಳು ವರದಿಯಾಗಿವೆ. ಧಾರವಾಡದ ಮದಾರಮಡ್ಡಿಯ60 ವರ್ಷದ ಪುರುಷರೊಬ್ಬರು ಕಿಮ್ಸ್‌ನಲ್ಲಿ ಹಾಗೂ ಹುಬ್ಬಳ್ಳಿಯ ಗೋಕುಲರಸ್ತೆಯ ರಾಜಧಾನಿ ಕಾಲೋನಿಯ 76 ವರ್ಷದ ಪುರುಷರೊಬ್ಬರು ಎಸ್‌ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಎರಡೂ ಸಾವು ಮಾ. 28ರಂದು ಸಂಭವಿಸಿವೆ.  -ನಿತೇಶ ಪಾಟೀಲ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.