ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರಿಗೆ ಕೋವಿಡ್ ಪಾಸಿಟಿವ್
Team Udayavani, Apr 4, 2021, 8:56 PM IST
ಚಾಮರಾಜನಗರ: ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರಿಗೆ ಕೋವಿಡ್ ಪಾಸಿಟಿವ್ ಪಾಸಿಟಿವ್ ಆಗಿರುವುದು ಭಾನುವಾರ ದೃಢಪಟ್ಟಿದೆ.
ಜಿಲ್ಲಾಧಿಕಾರಿಯವರಿಗೆ ಎರಡು ದಿನಗಳ ಹಿಂದೆ ನೆಗಡಿ, ಗಂಟಲು ನೋವು ಕಾಣಿಸಿಕೊಂಡಿದ್ದರಿಂದ ಶನಿವಾರ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿತ್ತು. ಭಾನುವಾರ ಫಲಿತಾಂಶ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ. ಸದ್ಯ ಅವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾಧಿಕಾರಿಯವರಿಗೆ ಕೋವಿಡ್ ದೃಢಪಟ್ಟಿರುವುದನ್ನು ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.
ಎರಡೂ ಡೋಸ್ ಲಸಿಕೆ ಪಡೆದಿದ್ದರು: ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಫೆ. 8ರಂದು ಮೊದಲ ಡೋಸ್ ಕೋವಿಡ್ ನಿರೋಧಕ ಲಸಿಕೆ ಪಡೆದಿದ್ದರು. ಮಾ. 8ರಂದು ಎರಡನೇ ಡೋಸ್ ಲಸಿಕೆ ಸಹ ಪಡೆದಿದ್ದರು. ಎರಡನೇ ಡೋಸ್ ಪಡೆದು 27 ದಿನಗಳಾಗಿತ್ತು.
ಇದನ್ನೂ ಓದಿ :ಕೋವಿಡ್ ಹಿನ್ನೆಲೆ : ಯುಗಾದಿ ಜಾತ್ರೆಯಂದು ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧ