ಮಹಾರಾಷ್ಟ್ರದಲ್ಲಿ ಕಠಿನ ನಿರ್ಬಂಧ ; ರಾತ್ರಿ ಕರ್ಫ್ಯೂ, ವಾರಾಂತ್ಯ ಲಾಕ್‌ಡೌನ್‌ ಘೋಷಣೆ


Team Udayavani, Apr 5, 2021, 8:30 AM IST

ಮಹಾರಾಷ್ಟ್ರದಲ್ಲಿ ಕಠಿನ ನಿರ್ಬಂಧ ; ರಾತ್ರಿ ಕರ್ಫ್ಯೂ, ವಾರಾಂತ್ಯ ಲಾಕ್‌ಡೌನ್‌ ಘೋಷಣೆ

ಮುಂಬಯಿ: ಕೊರೊನಾ ವ್ಯಾಪಿಸು ತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಸೆಮಿ ಲಾಕ್‌ಡೌನ್‌ ಘೋಷಿಸಿದೆ.
ಮಹಾರಾಷ್ಟ್ರದಲ್ಲಿ ಸತತ 3 ದಿನಗಳಿಂದ 50 ಸಾವಿರ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವಾರಾಂತ್ಯ ಲಾಕ್‌ಡೌನ್‌, ರಾತ್ರಿ ಕರ್ಫ್ಯೂ, ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಸಿಎಂ ಉದ್ಧವ್‌ ಠಾಕ್ರೆ ಆದೇಶ ಹೊರಡಿಸಿದ್ದಾರೆ. ಸೋಮವಾರದಿಂದಲೇ ಈ ನಿಯಮಗಳು ಅನ್ವಯವಾಗಲಿದ್ದು, ಎ. 30ರ ವರೆಗೂ ಜಾರಿಯಲ್ಲಿ ಇರಲಿವೆ.

ರವಿವಾರ ನಡೆದ ಸಂಪುಟ ಸಭೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಬೇಡ ಎಂಬ ಅಭಿಪ್ರಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ “ಭಾಗಶಃ ನಿರ್ಬಂಧ’ ಹೇರಲಾಗಿದೆ.

ಎಲ್ಲರ ವಿಶ್ವಾಸದೊಂದಿಗೆ ನಿರ್ಧಾರ
ಸಿಎಂ ಉದ್ಧವ್‌ ಠಾಕ್ರೆ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಮತ್ತು ಉದ್ದಿಮೆಗಳ ಮಾಲಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರವಿವಾರ ಬೆಳಗ್ಗೆವರೆಗೆ ಸಮಾಲೋಚನೆ ನಡೆಸಿ ಸಂಜೆ ತೀರ್ಮಾನ ಘೋಷಿಸಿದ್ದಾರೆ.

ಶನಿವಾರ ಮಲ್ಟಿಪ್ಲೆಕ್ಸ್‌, ಜಿಮ್‌, ಪತ್ರಿಕೆಗಳ ಮಾಲಕರೊಂದಿಗೆ ಸಿಎಂ ಠಾಕ್ರೆ ವರ್ಚುವಲ್‌ ಸಭೆ ನಡೆಸಿ ಕೊರೊನಾಕ್ಕೆ ಕಡಿವಾಣ ಹಾಕುವ ಪ್ರಯತ್ನದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದರು.

ವಿಶೇಷ ಅಭಿಯಾನ: ಮೋದಿ
ಇತ್ತ ಹೊಸದಿಲ್ಲಿಯಲ್ಲಿ ಪ್ರಧಾನಿ ಮೋದಿ ರವಿವಾರ ಉನ್ನತ ಮಟ್ಟದ ಸಭೆ ನಡೆಸಿ, ಕೊರೊನಾ ಸ್ಥಿತಿ ಮತ್ತು ಲಸಿಕೆ ಅಭಿಯಾನದ ಕುರಿತು ಚರ್ಚಿಸಿದ್ದಾರೆ. ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಮಾರ್ಗಸೂಚಿ ಪಾಲನೆ ಮತ್ತು ಲಸಿಕೆ ಸ್ವೀಕಾರ – ಈ 5 ಅಂಶಗಳ ಕಾರ್ಯತಂತ್ರ ಅನುಸರಿಸಿದರೆ ಸೋಂಕಿಗೆ ಕಡಿವಾಣ ಹಾಕಲು ಸಾಧ್ಯ ಎಂದಿದ್ದಾರೆ. ಮಾಸ್ಕ್ ಬಳಕೆ, ವೈಯಕ್ತಿಕ ನೈರ್ಮಲ್ಯ, ಸಾರ್ವಜನಿಕ ಸ್ಥಳ, ಕೆಲಸದ ಸ್ಥಳ, ಆರೋಗ್ಯ ಕೇಂದ್ರಗಳಲ್ಲಿ ಸ್ಯಾನಿಟೇಶನ್‌ ಹೆಚ್ಚಿಸುವ ವಿಶೇಷ ಅಭಿಯಾನವನ್ನು ಎ. 6ರಿಂದ 14ರ ವರೆಗೆ ನಡೆಸುವ ಘೋಷಣೆ ಮಾಡಿದ್ದಾರೆ. ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಪಂಜಾಬ್‌, ಛತ್ತೀಸ್‌ಗಢಕ್ಕೆ ತಂಡ ರವಾನಿಸಲು ಸೂಚಿಸಿದ್ದಾರೆ.

ಜಿಮ್‌: ಶೇ. 50 ಅನುಮತಿ
ಕರ್ನಾಟಕದಲ್ಲಿ ಜಿಮ್‌ಗಳ ಮೇಲೆ ರಾಜ್ಯ ಸರಕಾರ ವಿಧಿಸಿದ್ದ ಕಠಿನ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಶೇ. 50 ಭರ್ತಿಯಾಗಿ ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು, ಜಿಮ್‌ ತೆರೆದ ಸಮಯದಲ್ಲಿ 50 ಆಸನಗಳನ್ನು ಮಾತ್ರ ಭರ್ತಿ ಮಾಡಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ಬಳಕೆಯ ಅನಂತರ ಉಪಕರಣ ಗಳನ್ನು ಸ್ಯಾನಿಟೈಸ್‌ ಮಾಡಬೇಕು. ಈ ನಿಯಮ ಉಲ್ಲಂಘಿಸಿದರೆ ಜಿಮ್‌ ಬಾಗಿಲು ಮುಚ್ಚಿಸ ಲಾಗುತ್ತದೆ ಎಂದು ಸರಕಾರ ತಿಳಿಸಿದೆ.

15.25 ಲಕ್ಷ ಡೋಸ್‌ ಲಸಿಕೆ
ಕರ್ನಾಟಕ ಸರಕಾರದ ಮನವಿಯಂತೆ ಕೇಂದ್ರವು ತುರ್ತಾಗಿ 15.25 ಲಕ್ಷ ಡೋಸ್‌ ಲಸಿಕೆ ಕಳುಹಿಸುತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರ 10 ಲಕ್ಷ ಡೋಸ್‌ ಲಸಿಕೆಯನ್ನು ಏರ್‌ಲಿಫ್ಟ್ ಮಾಡಲಾಗುತ್ತದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 7 ಲಕ್ಷ ಡೋಸ್‌ ವ್ಯಾಕ್ಸಿನ್‌ ಲಭ್ಯವಿದೆ. ಶನಿವಾರ 2.5 ಲಕ್ಷ ಜನರಿಗೆ ಲಸಿಕೆ ಹಾಕಿಸಲಾಗಿದೆ. ಲಸಿಕೆ ಕೊರತೆಯಿಲ್ಲ ಎಂದಿದ್ದಾರೆ.

ಹೇಗಿರಲಿದೆ ಸೆಮಿ ಲಾಕ್‌ಡೌನ್‌?
– ಶುಕ್ರವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ವಾರಾಂತ್ಯ ಲಾಕ್‌ಡೌನ್‌
– ಮಾ. 5ರಿಂದ ಎ. 30ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 7ರ ವರೆಗೆ ರಾತ್ರಿ ಕರ್ಫ್ಯೂ
– ಹಗಲು ಹೊತ್ತು 5ಕ್ಕಿಂತ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ
– ಮಾಲ್‌, ರೆಸ್ಟೋರೆಂಟ್‌, ಬಾರ್‌, ಧಾರ್ಮಿಕ ಕೇಂದ್ರ, ಥಿಯೇಟರ್‌, ಪಾರ್ಕ್‌ ಬಂದ್‌
– ಅಗತ್ಯ ವಸ್ತುಗಳ ಹೋಂ ಡೆಲಿವರಿಗೆ ಅವಕಾಶ
– ಕೈಗಾರಿಕೆ ಚಟುವಟಿಕೆಗಳು, ನಿರ್ಮಾಣ ಕಾಮಗಾರಿಗೆ ಅನುಮತಿ
– ಸಿನೆಮಾ ಚಿತ್ರೀಕರಣಕ್ಕೆ ಅನುಮತಿ
– ಶೇ. 50ರ ಆಸನ ಸಾಮರ್ಥ್ಯದಲ್ಲಿ ಸಾರ್ವಜನಿಕ ಸಾರಿಗೆ ಸಂಚಾರ
– ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.